ಅಧಿಕಾರ ವಹಿಸಿಕೊಂಡ ಮೂರು ರಾಜ್ಯಗಳಲ್ಲಿ ರೈತರ ಸಾಲ ಮನ್ನಾ ಮಾಡುವುದು ನಿಶ್ಚಿತ: ರಾಹುಲ್​ ಗಾಂಧಿ

10:40 AM, Saturday, December 15th, 2018
Share
1 Star2 Stars3 Stars4 Stars5 Stars
(No Ratings Yet)
Loading...

rahul-gandhiನವದೆಹಲಿ: ಕಾಂಗ್ರೆಸ್ ಅಧಿಕಾರ ವಹಿಸಿಕೊಂಡ ಮೂರು ರಾಜ್ಯಗಳಲ್ಲಿ ರೈತರ ಸಾಲ ಮನ್ನಾ ಮಾಡುವುದು ನಿಶ್ಚಿತ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ದೃಢಪಡಿಸಿದ್ದಾರೆ.

ಛತ್ತೀಸ್ಗಢ, ರಾಜಸ್ಥಾನ ಹಾಗೂ ಮಧ್ಯಪ್ರದೇಶಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ 10 ದಿನಗಳೊಳಗೆ ರೈತರ ಸಾಲಮನ್ನಾ ಮಾಡುವುದಾಗಿ ರಾಹುಲ್ ಪ್ರಚಾರದ ವೇಳೆ ಭರವಸೆ ನೀಡಿದ್ದರು. ಇದಕ್ಕೆ ಬದ್ಧರಿರುವುದಾಗಿ ಹೇಳಿದ ಅವರು, ಶೀಘ್ರದಲ್ಲಿಯೇ ರೈತರ ಸಾಲಮನ್ನಾ ಮಾಡುವುದಾಗಿ ಹೇಳಿದ್ದಾರೆ.

ರೈತರ ಸಾಲ ಮನ್ನಾ ಮಾಡುವ ಭರವಸೆಯನ್ನೂ ಒಂದು ಅಸ್ತ್ರವಾಗಿ ಬಳಸಿಕೊಂಡು ಕಾಂಗ್ರೆಸ್ ಮತಯಾಚನೆ ಮಾಡಿತ್ತು. ಚುನಾವಣೆ ವೇಳೆ ನೀಡಿದ ಭರವಸೆಯನ್ನು ಕಾಂಗ್ರೆಸ್ ಉಳಿಸಿಕೊಳ್ಳುವುದೆಂಬ ಆಸೆಗಣ್ಣಿನಿಂದಲೇ ಮೂರು ರಾಜ್ಯಗಳ ರೈತರು ಕಾಯುತ್ತಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English