ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ: ನಟ ಕಮಲ್​ ಹಾಸನ್​

2:52 PM, Saturday, December 22nd, 2018
Share
1 Star2 Stars3 Stars4 Stars5 Stars
(No Ratings Yet)
Loading...

kamal-hassanಚೆನ್ನೈ: ತಮಿಳಿನ ಖ್ಯಾತ ನಟ ಕಮಲ್ ಹಾಸನ್ ಅವರು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಸ್ವತಃ ಅವರೇ ಹೇಳಿಕೊಂಡಿದ್ದಾರೆ.

ರಾಜಕೀಯ ರಂಗ ಪ್ರವೇಶಿಸಿದ ಕಮಲ್, ಮಕ್ಕಳ್ ನಿಧಿ ಮೈಯಂ ಪಕ್ಷ ಸ್ಥಾಪನೆ ಮಾಡಿದ್ದರು. ಮುಂಬರುವ ಲೋಕಸಭೆ ಚುನಾವಣೆಗೆ ತಮ್ಮ ಪಕ್ಷ ಸನ್ನದ್ಧವಾಗಿದೆ ಎಂದೂ ತಮ್ಮ ಹುಟ್ಟುಹಬ್ಬದಂದು ಹೇಳಿದ್ದರು. ಆದರೆ ಅವರು ಸ್ಪರ್ಧಿಸುವ ಬಗ್ಗೆ ಸ್ಪಷ್ಟ ಮಾಹಿತಿ ಹೊರಬಿದ್ದಿರಲಿಲ್ಲ.

ಈಗ ಅವರೇ ಹೇಳಿಕೊಂಡಿರುವಂತೆ ಮುಂದಿನ ಲೋಕಸಭೆ ಚುನಾವಣೆಗೆ ಅವರು ಸ್ಪರ್ಧಿಸುತ್ತಿರುವುದು ಖಚಿತ. ಆದರೆ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬುದು ಇನ್ನೂ ತಿಳಿದುಬಂದಿಲ್ಲ. ಜೊತೆಗೆ ಅವರ ಮುಂದಿನ ರಾಜಕೀಯ ನಡೆ ಏನು ಎಂಬುದು ರಹಸ್ಯವಾಗಿಯೆ ಇದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English