- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಈ ಬಾರಿ ಚಲನಚಿತ್ರೋತ್ಸವದಲ್ಲಿ ಗುಣಾತ್ಮಕ ಸಿನಿಮಾಗಳಿಗೆ ಅವಕಾಶ: ಕುಮಾರಸ್ವಾಮಿ

kumarswamy-cm [1]ಬೆಂಗಳೂರು: ಈ ಬಾರಿ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವಕ್ಕೆ ಹೆಚ್ಚು ಹಣ ಖರ್ಚು ಮಾಡುವುದಕ್ಕಿಂತ, ಗುಣಾತ್ಮಕ ಚಿತ್ರಗಳ ಪ್ರದರ್ಶನಕ್ಕೆ ಹೆಚ್ಚಿನ ಅವಕಾಶ ನೀಡಲು ನಿರ್ಧರಿಸಲಾಗಿದೆ ಎಂದು ಸಿಎಂ ಕುಮಾರಸ್ವಾಮಿ ತಿಳಿಸಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ 11ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಸಂಘಟನಾ ಸಮಿತಿ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ಫೆ. 7 ರಿಂದ 14 ರವೆಗೆ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದೆ. 60 ದೇಶಗಳಿಂದ 200 ಕ್ಕೂ ಹೆಚ್ಚು ಚಲನಚಿತ್ರ ಪ್ರದರ್ಶನ ನಡೆಯಲಿದೆ. ಸುಮಾರು 7 ಸಾವಿರ ಪ್ರತಿನಿಧಿಗಳು ಈ ಚಿತ್ರೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಓರಿಯನ್ ಮಾಲ್ನ 11 ಸ್ಕ್ರೀನ್ಗಳಲ್ಲಿ ಚಿತ್ರಪ್ರದರ್ಶನ ಆಯೋಜಿಸಲಾಗಿದೆ ಎಂದು ವಿವರಿಸಿದರು.

ಚಲನಚಿತ್ರೋತ್ಸವ ಲಾಂಛನ ಬಿಡುಗಡೆ: ಇದೇ ವೇಳೆ ಸಿಎಂ‌ ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ಲಾಂಛನ ಬಿಡುಗಡೆ ಮಾಡಿದರು. ಈ ವೇಳೆ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಚಿನ್ನೇಗೌಡ್ರು, ನಾಗತಿಹಳ್ಳಿ ಚಂದ್ರಶೇಖರ್ ಉಪಸ್ಥಿತರಿದ್ದರು.

ಈ ಬಾರಿಯ ವಿಶ್ವದ ಪ್ರತಿಷ್ಠಿತ ಚಲನಚಿತ್ತೋತ್ಸವನ್ನು ನೈಸರ್ಗಿಕ ವಿಕೋಪ ಆಶಯದ ಮೇಲೆ ಏರ್ಪಡಿಸಲು ನಿರ್ಣಯಿಸಲಾಗಿದೆ. ಮುಂದಿನ ವರ್ಷದಿಂದ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಕಾಯಂ ಆಗಿ ಫೆಬ್ರವರಿ ತಿಂಗಳ ಮೊದಲ ಗುರುವಾರ ಪ್ರಾರಂಭಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.