ನಗರದಲ್ಲಿ ಕಾನೂನು ಸಾಕ್ಷರತಾ ರಥ ಹಾಗೂ ಸಂಚಾರಿ ಜನತಾ ನ್ಯಾಯಾಲಯ ಅಭಿಯಾನಕ್ಕೆ ಚಾಲನೆ

12:49 PM, Sunday, June 3rd, 2012
Share
1 Star2 Stars3 Stars4 Stars5 Stars
(8 rating, 5 votes)
Loading...

kanoon Saksharata Ratha

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಪೊಲೀಸ್‌ ಇಲಾಖೆ, ಜಿಲ್ಲಾ ಪಂಚಾಯತ್‌, ಮಂಗಳೂರು ವಕೀಲರ ಸಂಘ, ಸಾರ್ವಜನಿಕ ಶಿಕ್ಷಣ ಇಲಾಖೆ, ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಸಾರಿಗೆ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಮಂಗಳೂರು ತಾಲೂಕಿನಲ್ಲಿ ಹಮ್ಮಿಕೊಂಡಿರುವ ಕಾನೂನು ಸಾಕ್ಷರತಾ ರಥ ಹಾಗೂ ಸಂಚಾರಿ ಜನತಾ ನ್ಯಾಯಾಲಯ ಅಭಿಯಾನವನ್ನು ಅವರು ಶನಿವಾರ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಧೀಶರಾದ ಅಶೋಕ್‌ ಜಿ. ನಿಜಗಣ್ಣವರ್‌ ಉದ್ಘಾಟಿಸಿದರು.

ಅವರು ಹಸಿರು ನಿಶಾನೆ ತೋರಿಸಿ ಕಾನೂನು ಸಾಕ್ಷರತಾ ರಥಕ್ಕೆ ಅವರು ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು ಕಾನೂನಿನ ಅರಿವು ಕಾರ್ಯಕ್ರಮ ಪ್ರತಿಯೊಬ್ಬನಿಗೂ ಅವಶ್ಯ. ಒಬ್ಬ ವಿದ್ಯಾವಂತ ಕಾನೂನು – ಕಾಯ್ದೆಗಳನ್ನು ಸರಿಯಾಗಿ ತಿಳಿದು ಪಾಲಿಸ ಬೇಕು, ಕಾನೂನಿನ ಬಗ್ಗೆ ಹೆಚ್ಚು ಜಾಗೃತಿ ಮೂಡಿಸಬೇಕು. ಕಾನೂನು ಸೇವಾ ಪ್ರಾಧಿಕಾರ ಈ ಕೆಲಸವನ್ನು ನಿರ್ವಹಿಸುತ್ತದೆ ಎಂದು ಅಶೋಕ್‌ ಜಿ. ನಿಜಗಣ್ಣವರ್‌ ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮಂಗಳೂರು ವಕೀಲರ ಸಂಘದ ಅಧ¤ಕ್ಷ ಎಸ್‌.ಪಿ. ಚೆಂಗಪ್ಪ ಅವರು ಅರ್ಹರಿಗೆ ಉಚಿತ ಕಾನೂನು ನೆರವು ಹಾಗೂ ಸುದೀರ್ಘ‌ ಕಾಲದಿಂದ ಇತ್ಯರ್ಥವಾಗದಿರುವ ಪ್ರಕರಣಗಳನ್ನು ಜನತಾ ನ್ಯಾಯಾಲಯದ ಮೂಲಕ ಇತ್ಯರ್ಥಗೊಳಿಸಲು ಪ್ರಯತ್ನಿಸುವುದು ಕಾನೂನು ಸೇವಾ ಪ್ರಾಧಿಕಾರದ ಉದ್ದೇಶ ಎಂದು ಹೇಳಿದರು.

ದೇಶದಲ್ಲಿ ನ್ಯಾಯಾಲಯದ ಮೆಟ್ಟಲೇರಿದ ಸುಮಾರು 3 ಕೋಟಿ ಪ್ರಕರಣಗಳು ಇತ್ಯರ್ಥಕ್ಕೆ ಬಾಕಿ ಇವೆ. ಹಾಗಾಗಿ ಕಾನೂನಿನ ಅರಿವು ಮೂಡಿಸಿ ಜನತಾ ನ್ಯಾಯಾಲಯದ ಮೂಲಕ ಸಾಧ್ಯವಿದ್ದಷ್ಟು ಪ್ರಕರಣಗಳನ್ನು ಇತ್ಯರ್ಥಗೊ‌ಳಿಸಲು ಪ್ರಯತ್ನಿಸಲಾಗುತ್ತದೆ. ಸುಪ್ರೀಂ ಕೋರ್ಟ್‌ನಿಂದ ಹಿಡಿದು ತಾಲೂಕು ಮಟ್ಟದವರೆಗೂ ಪ್ರಾಧಿಕಾರದ ವ್ಯಾಪ್ತಿ ಇದೆ ವಿವರಿಸಿದರು.

ನಗರದ ಜಿಲ್ಲಾ ನ್ಯಾಯಾಲಯದ ಸಮೀಪ ವಕೀಲರ ಭವನ ನಿರ್ಮಾಣಕ್ಕೆ ರಾಜ್ಯ ಸರಕಾರ 25 ಸೆಂಟ್ಸ್‌ ಜಾಗವನ್ನು ಮಂಜೂರು ಮಾಡಿದ್ದು, ಶೀಘ್ರದಲ್ಲಿಯೇ ಶಿಲಾನ್ಯಾಸ ನೆರವೇರಲಿದೆ. ಈ ಭವನವು 5 ಮಹಡಿಗಳ ಕಟ್ಟಡವಾಗಿದ್ದು, ನೀಲ ನಕ್ಷೆಯನ್ನು ತಯಾರಿಸಲಾಗಿದೆ ಎಂದು ಎಸ್‌.ಪಿ. ಚೆಂಗಪ್ಪ ತಿಳಿಸಿದರು.

2005ರಲ್ಲಿ ಆರಂಭವಾಗಿರುವ ಜಿಲ್ಲಾ ನ್ಯಾಯಾಲಯ ಕಟ್ಟಡ ಸಂಕೀರ್ಣದ ಕಾಮಗಾರಿ ಭರದಿಂದ ನಡೆಯುತ್ತಿದ್ದು, 2012 ಡಿಸೆಂಬರ್‌ ವೇಳೆಗೆ ಪೂರ್ತಿಗೊಳ್ಳಲಿದೆ ಎಂದರು.

ಜಿಲ್ಲಾಧಿಕಾರಿ ಡಾ| ಎನ್‌.ಎಸ್‌. ಚನ್ನಪ್ಪ ಗೌಡ, ಪೊಲೀಸ್‌ ಅಯುಕ್ತ ಸೀಮಂತ್‌ ಕುಮಾರ್‌ ಸಿಂಗ್‌, ಜಿಲ್ಲಾ ಪಂಚಾಯತ್‌ ಸಿಇಒ ಡಾ| ಕೆ.ಎನ್‌. ವಿಜಯ ಪ್ರಕಾಶ್‌, ಪ್ರಾದೇಶಿಕ ಸಾರಿಗೆ ಅಧಿಕಾರಿ ಮಲ್ಲಿಕಾರ್ಜುನ, ಎಸ್‌.ಡಿ.ಎಂ. ಕಾನೂನು ಕಾಲೇಜಿನ ಪ್ರಾಂಶುಪಾಲ ಡಾ| ಬಿ.ಕೆ. ರವೀಂದ್ರ, ವಕಿಲರ ಸಂಘದ ಅಧ್ಯಕ್ಷ ಎಸ್‌.ಪಿ. ಚೆಂಗಪ್ಪ, ಕಾರ್ಮಿಕ ಇಲಾಖೆಯ ಅಧಿಕಾರಿ ವೆಂಕಟೇಶ ಅಪ್ಪಯ್ಯ ಶಿಂದಿಹಟ್ಟಿ, ಡಿಡಿಪಿಐ ಮೋಸೆಸ್‌ ಜಯಶೇಖರ್‌, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಶಕುಂತಳಾ ಮುಂತಾದವರು ಉಪಸ್ಥಿತರಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English