ಗ್ಯಾಸ್ ಟ್ಯಾಂಕರ್ ಹಾಗು ಟೂರಿಸ್ಟ್ ಕಾರು ಭೀಕರ ಅಪಘಾತ ; ನಾಲ್ವರು ಮೃತ್ಯು

3:34 PM, Friday, July 19th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

accidentಬಂಟ್ವಾಳ: ಗ್ಯಾಸ್ ಟ್ಯಾಂಕರ್ ಹಾಗು ಟೂರಿಸ್ಟ್ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ನಾಲ್ವರು ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ರಾ.ಹೆದ್ದಾರಿಯ ಬ್ರಹ್ಮರಕೂಟ್ಲು ಟೋಲ್ ಸಮೀಪ ಶುಕ್ರವಾರ ಮಧ್ಯಾಹ್ನ ನಡೆದಿದೆ.

ಮೃತಪಟ್ಟವರು ಭಟ್ಕಳ ನಿವಾಸಿಗಳು ಎಂದು ತಿಳಿದು ಬಂದಿದ್ದು, ಧರ್ಮಸ್ಥಳ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಕಾರು ಹಾಗೂ ಮಂಗಳೂರು ಕಡೆಯಿಂದ ಬರುತ್ತಿದ್ದ ಗ್ಯಾಸ್ ಟ್ಯಾಂಕರ್ ಬ್ರಹ್ಮರಕೂಟ್ಲು ಮೇಲ್ಸೆತುವೆ ಸಮೀಪ ಢಿಕ್ಕಿಯಾಗಿದೆ.

ಘಟನೆಯಿಂದ ನಾಲ್ವರು ಮೃತಪಟ್ಟಿದ್ದು, ಉಳಿದವರು ಗಂಭಭೀರವಾಗಿ ಗಾಯಗೊಂಡಿದ್ದಾರೆಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.  ಘಟನಾ ಸ್ಥಳಕ್ಕೆ ಬಂಟ್ವಾಳ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.

ಅಪಘಾತದಿಂದ ಹೆದ್ದಾರಿಯಲ್ಲಿ ಕೆಲ ತಾಸುಗಳ ಕಾಲ ಸಂಚಾರಕ್ಕೆ ಉಂಟಾಗಿದ್ದು, ಭಾರೀ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English