ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ`ಕೋಟಿ ಚೆನ್ನಯ’ ಹೆಸರು

2:59 PM, Saturday, August 3rd, 2019
Share
1 Star2 Stars3 Stars4 Stars5 Stars
(4 rating, 1 votes)
Loading...

Koti-chennaya airport ಮಂಗಳೂರು :  ತುಳುನಾಡಿನ ವೀರ ಪುರುಷರಾದ ಕೋಟಿ ಚೆನ್ನಯ ಹೆಸರನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಡಬೇಕೆಂಬ ಒತ್ತಾಯ ಕೇಳಿ ಬರುತ್ತಿರುವ ಬೆನ್ನಲ್ಲೇ ಜಿಲ್ಲಾಧಿಕಾರಿಯ ಮೂಲಕ ರಾಜ್ಯ ಸರ್ಕಾರಕ್ಕೆ ಈ ಪ್ರಸ್ತಾವನೆ ಕಳುಹಿಸಲಾಗಿದೆ ಎಂಬ ಮಹತ್ವದ ಮಾಹಿತಿ ಬೆಳಕಿಗೆ ಬಂದಿದೆ.

ಆ. 3 ಮಂಗಳವಾರದಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಸಿಇಓ ಡಾ.ಸೆಲ್ವಮಣಿ ಈ ವಿಚಾರವನ್ನು ಹಂಚಿಕೊಂಡಿದ್ದಾರೆ. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಧರಣೇಂದ್ರ ಕುಮಾರ್, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತುಳುನಾಡಿನ ವೀರ ಪುರುಷರಾದ ಕೋಟಿ- ಚೆನ್ನಯ ಅವರ ಹೆಸರಿಡುವಂತೆ ನಿರ್ಣಯಿಸಿ ಕಳುಹಿಸಬೇಕೆಂದು ಆಗ್ರಹಿಸಿದಾಗ ಮಾಹಿತಿ ನೀಡಿದ ಜಿಲ್ಲಾ ಪಂಚಾಯತ್ ಸಿಇಓ, ಈಗಾಗಲೇ ಈ ಪ್ರಸ್ತಾವನೆ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಕಳುಹಿಸಲಾಗಿದ್ದು ವಿಧಾನ ಮಂಡಲ ಅಧಿವೇಶನ ಸಂದರ್ಭದಲ್ಲಿ ಈ ಬಗ್ಗೆ ಚರ್ಚಿಸಿ ನಂತರ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಬೆಂಗಳೂರು ಏರ್ ಪೋರ್ಟ್ ಗೆ ಕೆಂಪೇಗೌಡ, ಮುಂಬೈ ಏರ್ ಪೋರ್ಟ್ ಗೆ ಶಿವಾಜಿ’ ಹೆಸರಿಟ್ಟಂತೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹೆಸರು ಬದಲಾವಣೆ ಮಾಡಿ ತುಳುನಾಡಿನ ವೀರ ಪುರುಷರಾದ ಕೋಟಿ-ಚೆನ್ನಯ ಅಥವಾ ತುಳುನಾಡಿನ ವೀರ ಮಹಿಳೆ ಅಬ್ಬಕ್ಕ ರಾಣಿ ಹೆಸರಿಡಬೇಕು ಎಂಬ ಕೂಗು ಕೇಳಿಬಂದಿತ್ತು. ಈಗ ಕೋಟಿ-ಚೆನ್ನಯ ಎಂಬ ಹೆಸರನ್ನಿಡಲು ನಿರ್ಧರಿಸಿದ್ದು ತುಳುನಾಡಿನ ಜನರಲ್ಲಿ ಸಂತಸವನ್ನು ತಂದಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English