ಕಲಬುರಗಿಯಲ್ಲಿ ಭೀಕರ ಅಪಘಾತ : ಐವರು ದುರ್ಮರಣ

12:42 PM, Wednesday, August 28th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

kalaburgiಕಲಬುರಗಿ : ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಸಾವಳಗಿ ಕ್ರಾಸ್ ಬಳಿ ಸಂಭವಿಸಿದೆ.

ಸೋಲಾಪುರ ಮೂಲದ ಸಂಜಯ್ ಚಡಚಣ್ (29), ರಾಣಿ ಚಡಚಣ್(26), ಶ್ರೇಯಸ್(3), ಭಾಗ್ಯಶ್ರೀ (22) ಮತ್ತು ಧೀರಜ್(2) ಮೃತರು.

ತಿರುಪತಿಯಿಂದ ಸೋಲಾಪುರಕ್ಕೆ ವಾಪಸಾಗುವ ವೇಳೆ ತಡರಾತ್ರಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಸಂಚಾರಿ ಪೊಲೀಸ್ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಉಳಿದಂತೆ ಘಟನೆಯಲ್ಲಿ ಮೂವರು ಗಾಯಗೊಂಡಿದ್ದು, ಅವರನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

 

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English