ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತನ ಬರ್ಬರ ಹತ್ಯೆ

10:12 AM, Wednesday, September 4th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

kartikಪುತ್ತೂರು : ಯುವಕನೋರ್ವನಿಗೆ ಚೂರಿಯಿಂದ ಇರಿದು ಬರ್ಬರವಾಗಿ ಕೊಲೆಗೈದ ಘಟನೆ ಪುತ್ತೂರಿನ ಸಂಪ್ಯ ಎಂಬಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಕೊಲೆಯಾದ ವ್ಯಕ್ತಿಯನ್ನು ಹಿಂದೂ ಜಾಗರಣ ವೇದಿಕೆಯ ತಾಲೂಕು ಕಾರ್ಯದರ್ಶಿ ಕಾರ್ತಿಕ್ ಮೇರ್ಲ ಎಂದು ಗುರುತಿಸಲಾಗಿದೆ.

ಸಂಪ್ಯದಲ್ಲಿರುವ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಗಣೇಶೊತ್ಸವ ಕಾರ್ಯಕ್ರಮ ನಡೆಯುತ್ತಿರುವ ವೇಳೆ ಸ್ಥಳೀಯರಾದ ಚರಣ್ ರಾಜ್, ಕಿರಣ್ ಮತ್ತು ಪ್ರೀತೇಶ್ ಎಂಬವರು ಚೂರಿಯಿಂದ ಇರಿದು ಕಾರ್ತಿಕ್ ಮೇಲೆ ಹಲ್ಲೆ ನಡೆಸಿ ಭೀಕರವಾಗಿ ಕೊಲೆಗೈಯ್ದಿದ್ದಾರೆ. ಬಳಿಕ, ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ಘಟನೆ ನಡೆದ ಬಳಿಕ ಸಂಪ್ಯ ಗಣೆಶೋತ್ಸವದ ಕಾರ್ಯಕ್ರಮವನ್ನು ಅರ್ಧಕ್ಕೆ ನಿಲ್ಲಿಸಲಾಗಿದ್ದು, ಸ್ಥಳದಲ್ಲಿ ತುಸು ಆತಂಕಕಾರಿ ಸ್ಥಿತಿ ನಿರ್ಮಾಣಗೊಂಡಿತ್ತು. ಕೊಲೆಗೆ ಸ್ಪಷ್ಟ ಕಾರಣ ಇನ್ನೂ ತಿಳಿದುಬಂದಿಲ್ಲ.‌ ಆದರೆ ಹಳೆ ದ್ವೇಷವೇ ಕಾರಣ ಎಂಬ ಮಾತುಗಳು ಕೇಳಿಬಂದಿದೆ.

ಸದ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ತನಿಖೆ ನಡೆಸುತ್ತಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

 

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English