ಕರ್ನಾಟಕ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನದ ಸಂಸ್ಕೃತಿ ಉತ್ಸವ ಸಂಪನ್ನ

2:54 PM, Sunday, November 10th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

kssap ಮಂಗಳೂರು  : ಕರ್ನಾಟಕ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನದ ಆಶ್ರಯದಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸಹಯೋಗದೊಂದಿಗೆ ಮಂಗಳೂರಿನ ಪುರಭವನದಲ್ಲಿ ಕಳೆದ ಮೂರು ದಿನಗಳಿಂದ ನಡೆದ ಗಡಿನಾಡು ಸಂಸ್ಕೃತಿ ಉತ್ಸವ ವೈಭವಪೂರ್ಣವಾಗಿ ಸಂಪನ್ನಗೊಂಡಿತು ವಿವಿಧ ಸಾಂಸ್ಕೃತಿಕ ಕಲಾ ತಂಡಗಳು ತಮ್ಮ ಕಲಾ ನೈಪುಣ್ಯತೆ ಮೆರೆದವು. ಸುಗ್ಗಿ ಕುಣಿತ , ಕಂಗೀಲು, ಭರತನಾಟ್ಯ, ಜನಪದ ನೃತ್ಯ, ಯಕ್ಷಗಾನ, ಕನ್ನಡ ಗೀತಗಾಯನ ಮುಂತಾದ ಅನೇಕ ಕಾರ್ಯಕ್ರಮಗಳು ನೆರೆದ ಸಾವಿರಾರು ಪ್ರೇಕ್ಷರ ಮನಸೂರೆಗೊಂಡವು.

ಕಾರ್ಯಕ್ರಮದ ಉದ್ಘಾಟಣೆಯನ್ನು ಜಿಲ್ಲಾ ವೈದ್ಯಾಧಿಕಾರಿ ಡಾ. ರಾಜೇಶ್ವರಿ ದೇವಿ ಉದ್ಘಾಟಿಸಿದ್ದರು.

kssap KSSAP ಅಧ್ಯಕ್ಷೆ ರಾಣಿ ಪುಷ್ಪಲತಾ ದೇವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಅನುಪಮ ಸೇವೆ ಸಲ್ಲಿಸಿದ ಡಾ. ಪೂರ್ಣಿಮಾ ಭಟ್ ಹಾಗೂ ರಂಗ ಭೂಮಿಯಲ್ಲಿ ಅನುಪಮ ಸೇವೆ ಸಲ್ಲಿಸಿದ ದಿನೇಶ್ ಅತ್ತಾವರ ಇವರನ್ನು ಸನ್ಮಾನಿಸಲಾಯಿತು. ಲೋಕಾಯುಕ್ತ ನ್ಯಾಯವಾದಿ ರವೀಂದ್ರ ಮುನ್ನಿಪ್ಪಾಡಿ ಹಾಗೂ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ ನ ದ.ಕ. ಜಿಲ್ಲಾ ಅಧ್ಯಕ್ಷ ಡಾ| ಕಾಸರಗೋಡು ಅಶೋಕ್ ಕುಮಾರ್ ಉಪಸ್ಥಿತರಿದ್ದರು.

kssap

kssap

kssap

kssap

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English