ಮಂಗಳೂರು : ನಿವೃತ್ತ ಜಿಲ್ಲಾ ರೋಟರಿ ಗವರ್ನರ್​​ ಸೂರ್ಯಪ್ರಕಾಶ್ ಭಟ್ ನಿಧನ

11:10 AM, Thursday, January 9th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

surya-prakash

ಮಂಗಳೂರು : ನಿವೃತ್ತ ಜಿಲ್ಲಾ ರೋಟರಿ ಗವರ್ನರ್ ಸೂರ್ಯಪ್ರಕಾಶ್ ಭಟ್ (62) ಅಲ್ಪಕಾಲದ ಅಸೌಖ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ತೀವ್ರ ಮಧುಮೇಹ ರೋಗದಿಂದ ಬಳಲುತ್ತಿದ್ದ ಸೂರ್ಯಪ್ರಕಾಶ್ ಭಟ್ ಎರಡು ವಾರಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೋಮಾ ತಲುಪಿ ಬುಧವಾರ ರಾತ್ರಿ ಮೃತಪಟ್ಟಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು-ಬಳಗ ಅಗಲಿದ್ದಾರೆ.

ಸೂರ್ಯಪ್ರಕಾಶ್ ಭಟ್ 1989ರಲ್ಲಿ ಮಂಗಳೂರು ರೋಟರಿ ಕ್ಲಬ್ ಸೇರ್ಪಡೆಗೊಂಡಿದ್ದು, ಸಕ್ರಿಯ ರೋಟರಿಯನ್ ಆಗಿ ಸೇವೆ ಸಲ್ಲಿಸಿದ್ದರು. 1995-96ರ ಅವಧಿಯಲ್ಲಿ ಮಂಗಳೂರು ರೋಟರಿ ಕ್ಲಬ್ ಜಿಲ್ಲಾ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಾ ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದರು. ಪ್ರಸ್ತುತ ಅವರು ರೋಟರಿ ಜಿಲ್ಲಾ ಸಲಹಾ ಮಂಡಳಿಯ ಸದಸ್ಯರಾಗಿದ್ದರು. ಮೃತರ ಅಂತ್ಯ ಸಂಸ್ಕಾರ ಇಂದು ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English