ಗ್ರಾಮ ಪಂಚಾಯಿತಿ ಚುನಾವಣೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸುಳ್ಳು ಸುದ್ದಿ

1:48 PM, Saturday, January 11th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

grama-panchayiti

ಬೆಂಗಳೂರು : ಗ್ರಾಮ ಪಂಚಾಯಿತಿ ಚುನಾವಣೆ 2020 ವರ್ಷದ ವೇಳಾಪಟ್ಟಿಯನ್ನು ರಾಜ್ಯಸರ್ಕಾರ ಪ್ರಕಟಿಸಿದೆ. ಎಂಬ ಒಕ್ಕಣೆಯೊಂದಿಗೆ ರಾಜ್ಯಪತ್ರದ ಚಿತ್ರವೊಂದು ಹರಿದಾಡುತ್ತಿದೆ.

ಏಪ್ರಿಲ್ 5 ಮತ್ತು ಏಪ್ರಿಲ್ 9 ರಂದು ಎರಡು ಹಂತಗಳಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗಳು ನಡೆಯಲಿದೆ. ಈ ಚುನಾವಣೆಗಳನ್ನು ಕರ್ನಾಟಕ ರಾಜ್ಯ ಪಂಚಾಯತ್ ರಾಜ್ ನಡೆಸಲಿದೆ ಎಂದು ಮುದ್ರಿತವಾಗಿರುವ ರಾಜ್ಯಪತ್ರದ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು. ಈ ಸುದ್ದಿ ಸುಳ್ಳಾಗಿದೆ.

ಮೊದಲ ಹಂತದಲ್ಲಿ ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಮಂಡ್ಯ, ಹಾಸನ, ಮೈಸೂರು, ಮಡಿಕೇರಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಪಂಚಾಯಿತಿಗಳಿಗೆ ನಡೆಸಲಾಗುತ್ತದೆ ಎಂಬ ಮಾಹಿತಿ ಇದರಲ್ಲಿದೆ, ಆದರೆ ಯಾರೋ ಕಿಡಿಗೇಡಿಗಳು ರಾಜ್ಯಪತ್ರದ ಹಳೆಯ ಪ್ರತಿಯನ್ನು ತಿದ್ದಿ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English