ವೃತ್ತಿ ಕೌಶಲ್ಯ ಬೆಳೆಸಿಕೊಂಡು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಿ : ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ ಸಲಹೆ

10:56 AM, Tuesday, February 4th, 2020
Share
1 Star2 Stars3 Stars4 Stars5 Stars
(No Ratings Yet)
Loading...

kawshalya

ಮಡಿಕೇರಿ : ವಿಜ್ಞಾನ ಮತ್ತು ತಂತ್ರಜ್ಞಾನ, ವ್ಯಾಪಾರ, ವಾಣಿಜ್ಯ ಹೀಗೆ ಹಲವು ಕ್ಷೇತ್ರಗಳಲ್ಲಿ ಉದ್ಯೋಗ ಅವಕಾಶಗಳು ವಿಫುಲವಾಗಿದ್ದು, ಆ ನಿಟ್ಟಿನಲ್ಲಿ ಯುವ ಜನರು ವೃತ್ತಿ ಕೌಶಲ್ಯ ಬೆಳೆಸಿಕೊಳ್ಳುವಂತಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುನಿಲ್ ಸುಬ್ರಮಣಿ ಅವರು ಸಲಹೆ ನೀಡಿದ್ದಾರೆ.

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ನೆಲೆಸಿರುವಂತಹ ಉದ್ಯೋಗಾಕಾಂಕ್ಷಿಗಳಿಗೆ ’ಯುವ ಕೌಶಲ್ಯ’ ಯೋಜನೆಯಡಿಯಲ್ಲಿ ಮೃದು ಕೌಶಲ್ಯ ಹಾಗೂ ಉದ್ಯೋಗವನ್ನು ಪಡೆಯಲು ಬೇಕಾದ ಅವಶ್ಯಕ ಕೌಶಲ್ಯದ ಬಗ್ಗೆ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ ನಡೆದ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಯುವ ಜನರು ಸ್ವಾವಲಂಬಿ ಹಾಗೂ ಸ್ವಾಭಿಮಾನದ ಬದುಕು ಕಟ್ಟಿಕೊಳ್ಳುವಂತಾಗಲು ಸರ್ಕಾರ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಇದರ ಉಪಯೋಗ ಪಡೆದುಕೊಳ್ಳುವಂತಾಗಬೇಕು ಎಂದು ಅವರು ತಿಳಿಸಿದರು.

kawshalya

ಕೌಶಲ್ಯ ಅಭಿವೃದ್ಧಿ ಉದ್ಯಮ ಶೀಲತೆ, ಜೀವನೋಪಾಯ ಬಗ್ಗೆ ಮಾಹಿತಿ ಪಡೆಯುವಂತಾಗಬೇಕು. ಸ್ವಯಂ ಉದ್ಯೋಗ ಕಲ್ಪಿಸುವ ಗುರಿಯನ್ನು ಹೊಂದಲಾಗಿದ್ದು, ಯುವಜನರು ವೃತ್ತಿ ಕೌಶಲ್ಯ ಹೆಚ್ಚಿಸಿಕೊಳ್ಳಬೇಕು ಎಂದು ಅವರು ಸಲಹೆ ಮಾಡಿದರು.

ಸಂವಹನ ಕೌಶಲ್ಯ, ಸಮಸ್ಯೆಗಳನ್ನು ಪರಿಹರಿಸುವುದು, ಯೋಜನೆ ಮತ್ತು ಸಂಘಟನೆ, ನಿರ್ವಹಣೆ, ಪ್ರೇರಣಾ ಕೌಶಲ್ಯ, ಹೀಗೆ ಹಲವು ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಪಡೆಯಬೇಕು ಎಂದು ಅವರು ತಿಳಿಸಿದರು.

ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಮಾತನಾಡಿ ಇತ್ತೀಚಿನ ದಿನಗಳಲ್ಲಿ ಆಧುನಿಕ ಜಗತ್ತು ಬೆಳೆದಂತೆ ಮಾಹಿತಿಗಳು ದೊರೆಯಲಿದ್ದು, ಈ ಅವಕಾಶವನ್ನು ಬಳಸಿಕೊಂಡು ವೃತ್ತಿ ಕೌಶಲ್ಯ ಹೆಚ್ಚಿಸಿಕೊಳ್ಳಬೇಕು ಎಂದು ಅವರು ಸಲಹೆ ಮಾಡಿದರು.

ಪ್ರವಾಸೋದ್ಯಮ, ಜವಳಿ, ಬ್ಯಾಂಕಿಂಗ್, ವಿಮೆ, ಹೀಗೆ ವಿವಿಧ ಕ್ಷೇತ್ರಗಳಲ್ಲಿ ವೃತ್ತಿ ಕೌಶಲ್ಯ ಹೆಚ್ಚಿಸಿಕೊಂಡು ಉತ್ತಮ ಬದುಕು ಕಟ್ಟಿಕೊಳ್ಳುವಂತಾಗಬೇಕು ಎಂದು ಅವರು ಸಲಹೆ ಮಾಡಿದರು.

ತಾ.ಪಂ.ಅಧ್ಯಕ್ಷರಾದ ತೆಕ್ಕಡೆ ಶೋಭ ಮೋಹನ್ ಅವರು ಮಾತನಾಡಿ ಭವಿಷ್ಯದ ಜೀವನ ರೂಪಿಸಿಕೊಳ್ಳಲು ವೃತ್ತಿ ಕೌಶಲ್ಯ ಅತ್ಯಗತ್ಯವಾಗಿದೆ. ಆ ನಿಟ್ಟಿನಲ್ಲಿ ಗುರಿ ತಲುಪಲು ಪ್ರಯತ್ನಿಸಬೇಕು. ಯುವ ಜನರಲ್ಲಿ ಶ್ರದ್ಧೆ ಹಾಗೂ ಶ್ರಮ ಇರಬೇಕು. ಇದರಿಂದ ಉನ್ನತ ಸ್ಥಾನ ಪಡೆಯಬಹುದು ಎಂದರು.

’ಕಾಲೇಜಿನ ಪ್ರಾಂಶುಪಾಲರಾದ ಚಿತ್ರಾ ವೈ ಅವರು ಮಾತನಾಡಿ ವಿದ್ಯಾರ್ಥಿಗಳು ಓದುತ್ತಾರೆ. ಬರೆಯುತ್ತಾರೆ, ಹೆಚ್ಚು ಅಂಕ ಪಡೆಯುತ್ತಾರೆ. ಆದರೆ ಕೆಲಸವಿಲ್ಲದೆ ಉದ್ಯೋಗ ಹುಡುಕುತ್ತಾರೆ. ಆದ್ದರಿಂದ ವೃತ್ತಿ ಕೌಶಲ್ಯ ಬೆಳೆಸಿಕೊಳ್ಳುವುದು ಅತ್ಯವಶ್ಯಕ. ಆ ನಿಟ್ಟಿನಲ್ಲಿ ಸರ್ಕಾರ ಯುವ ಕೌಶಲ್ಯ ತರಬೇತಿಯನ್ನು ನೀಡುತ್ತಿದ್ದು, ಇದರ ಪ್ರಯೋಜನ ಪಡೆದುಕೊಳ್ಳುವಂತಾಗಬೇಕು ಎಂದು ಅವರು ಸಲಹೆ ಮಾಡಿದರು.’

ಯುವ ಜನರು ಆತ್ಮ ವಿಶ್ವಾಸದಿಂದ ಬದುಕು ನಡೆಸಬೇಕು. ಆ ನಿಟ್ಟಿನಲ್ಲಿ ಯುವ ಕೌಶಲ್ಯ ತರಬೇತಿ ಪಡೆಯಬೇಕು ಎಂದು ಅವರು ಹೇಳಿದರು.

ತಾ.ಪಂ.ಇಒ ಲಕ್ಷ್ಮಿ ಅವರು ಮಾತನಾಡಿ ಪ್ರತಿಯೊಬ್ಬರಲ್ಲೂ ಒಂದಲ್ಲ ಒಂದು ರೀತಿಯಲ್ಲಿ ವೃತ್ತಿ ಕೌಶಲ್ಯವಿದ್ದು, ಅದನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಅವರು ಸಲಹೆ ಮಾಡಿದರು.

ಜಿಲ್ಲಾ ಉದ್ಯೋಗ ವಿನಿಮಯಾಧಿಕಾರಿ ಸಿ.ಜಗನ್ನಾಥ್ ಅವರು ವೃತ್ತಿ ಕೌಶಲ್ಯ ಸಂಬಂಧಿಸಿದಂತೆ ಹಲವು ಮಾಹಿತಿ ನೀಡಿದರು. ಕಾಲೇಜಿನ ಪ್ರಾಧ್ಯಾಪಕರಾದ ಕೆ.ಸಿ.ದಯಾನಂದ ಅವರು ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English