ಮಂಗಳೂರು : ರಾಜ್ಯದಲ್ಲಿ ಶಾಲಾ ಕಾಲೇಜು, ಮಾಲ್‌ಗಳು, ಸಿನೆಮಾ ಮಂದಿರಗಳ ಬಂದ್ ವಿಸ್ತರಣೆಗೆ ಸಂಬಂಧಿಸಿ ಮುಖ್ಯಮಂತ್ರಿ ಸಭೆ ನಡೆಸಿ ಸೂಕ್ತ ನಿರ್ಧಾರ ಪ್ರಕಟಿಸಲಿದ್ದಾರೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ ಇಲ್ಲಿಯವರೆಗೆ 10 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಪೈಕಿ ಕಲ್ಬುರ್ಗಿಯ ವ್ಯಕ್ತಿ ಮೃತಪಟ್ಟಿದ್ದಾರೆ. ಅವರ ಸಂಬಂಧಿಕರ ನಾಲ್ವರ ಪೈಕಿ ಈಗ ಒಬ್ಬರಿಗೆ ಪಾಸಿಟಿವ್ ಬಂದಿದೆ. ದ.ಕ. ಜಿಲ್ಲೆಯಲ್ಲಿ 115 ಜನರನ್ನು ಅತ್ಯಂತ ಸೂಕ್ಷ್ಮವಾಗಿ ತಪಾಸಣೆ ನಡೆಸಲಾಗಿದೆ. ಅವರ ಮೇಲೆ ವಿಶೇಷ ನಿಗಾ ಇರಿಸಲಾಗಿದೆ ಎಂದರು.
Click this button or press Ctrl+G to toggle between Kannada and English