ಮಂಗಳೂರು: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ರೈತರು ಆರ್ಥಿಕವಾಗಿ ಸಂಕಷ್ಟದಲ್ಲಿದ್ದಾರೆ. ಇದನ್ನು ಮನಗಂಡು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ರೈತರಿಗೆ ತುರ್ತಾಗಿ ಅಡಿಕೆ ಅಡಮಾನ ಸಾಲವನ್ನು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ನೀಡಲು ಮುಂದಾಗಿದೆ ಎಂದು ಬ್ಯಾಂಕಿನ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.
ಅವಿಭಜಿತ ದ. ಕ. ಜಿಲ್ಲೆಯಲ್ಲಿ ಅಡಿಕೆ ಮಾರಾಟದಲ್ಲಿ ವ್ಯತ್ಯಯಗಳು ಕಂಡು ಬಂದಿರುವುದರಿಂದ ಅಡಿಕೆ ಧಾರಣೆಯಲ್ಲೂ ಕುಸಿತ ಕಂಡಿದೆ. ಇಂತಹ ಸಂದರ್ಭದಲ್ಲಿ ಅಡಿಕೆ ಬೆಳೆಗಾರರಿಗೆ ಆರ್ಥಿಕ ತುರ್ತು ಸಾಲದ ನೆರವನ್ನು ನೀಡಲು ಎಸ್‌ಸಿಡಿಸಿಸಿ ಬ್ಯಾಂಕ್ ಮುಂದಾಗಿದೆ ಎಂದು ಹೇಳಿದ್ದಾರೆ.
ಸದ್ಯ ಕೋವಿಡ್ 19 ಮಹಾಮಾರಿಯಿಂದ ರೈತರ ಪರಿಸ್ಥಿತಿ ಬಿಗಡಾಯಿಸಿದೆ. ರೈತರು ಬೆಳೆದಿರುವ ಕೃಷಿ ಉತ್ಪನ್ನಗಳು ಸೂಕ್ತ ಮಾರುಕಟ್ಟೆ ಇಲ್ಲದೆ ಹಾಳಾಗುತ್ತಿವೆ. ರೈತರಿಗೆ ಅಡಿಕೆಯೇ ಜೀವನಾಧಾರವಾಗಿದೆ. ರೈತರೇ ಬ್ಯಾಂಕಿನ ಆಸ್ತಿಯಾಗಿದ್ದು ಅವರ ನೆರವಿಗೆ ಧಾವಿಸುವುದು ನಮ್ಮ ಕರ್ತವ್ಯ ಎಂದು ಈ ಸೌಲಭ್ಯ ಕಲ್ಪಿಸಲಾಗಿದೆ ಎಂದು ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.
Click this button or press Ctrl+G to toggle between Kannada and English