ಬಂಟ್ವಾಳ: ಮೆಲ್ಕಾರ್ ಸಮೀಪದ ಮಾರ್ನಬೈಲು ಎಂಬಲ್ಲಿ ಕೋಳಿ ಫೀಡ್ ತುಂಬಿಸಿಕೊಂಡು ಹೋಗುತ್ತಿದ್ದ ಲಾರಿಗೆ ಬೆಂಕಿ ತಾಗಿ ಢಿಕ್ಕಿಯಾದ ಘಟನೆ ಬಂಟ್ವಾಳದ ನಡೆದಿದೆ.
ಘಟನೆಯಲ್ಲಿ ಚಾಲಕ ಮತ್ತು ನಿರ್ವಾಹಕ ಇಬ್ಬರಿಗೂ ಗಾಯಗಳಾಗಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಿನಿ ಲಾರಿಯಲ್ಲಿ ಮಂಗಳವಾರ ಬೆಳಗ್ಗೆ ಕಂದೂರಿನಿಂದ ಫೀಡ್ ಪ್ರಾಡಕ್ಟ್ ತುಂಬಿಸಿಕೊಂಡು ಹೋಗುವ ವೇಳೆ ಈ ಘಟನೆ ನಡೆದಿದ್ದು, ಘಟನೆಗೆ ಸ್ಪಷ್ಟವಾದ ಕಾರಣ ಇನ್ನೂ ಕೂಡ ತಿಳಿದುಬಂದಿಲ್ಲ. ಲಾರಿ ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ, ನಂತರ ಮನೆಯೊಂದರ ಕಂಪೌಂಡ್ ಗೋಡೆಗೆ ಢಿಕ್ಕಿ ಹೊಡೆದಿದೆ.
ಲಾರಿಗೆ ಬೆಂಕಿ ತಗುಲಿ ಬಳಿಕ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಬಂಟ್ವಾಳ ಅಗ್ನಿ ಶಾಮಕ ದಳದವರು ಸ್ಥಳಕ್ಕೆ ಆಗಮಿಸಿದ್ದು, ಲಾರಿಗೆ ತಾಗಿದ್ದ ಬೆಂಕಿಯನ್ನು ನಂದಿಸಿದ್ದಾರೆ. ಮೆಲ್ಕಾರ್ ಟ್ರಾಫಿಕ್ ಎಸ್.ಐ.ರಾಜೇಶ್ ಕೆ.ವಿ.ಅವರು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮಕೈಗೊಂಡಿದ್ದಾರೆ.
Click this button or press Ctrl+G to toggle between Kannada and English