- KANNADA MEGA MEDIA NEWS :: News Coverage From Mangalore and Major Cities of India and world wide - http://kannada.megamedianews.com -

ಮುಂದೂಡಲ್ಪಟ್ಟ ಸರಕಾರದ ಸಪ್ತಪದಿ ವಿವಾಹ ಕಾರ್ಯಕ್ರಮ ಶೀಘ್ರದಲ್ಲೇ ಆರಂಭ

Muzurai [1]ಮಂಗಳೂರು : ಕೋವಿಡ್-19 ಸೋಂಕಿನಿಂದ ಮುಂದೂಡಲ್ಪಟ್ಟಿ ರುವ ಸಪ್ತಪದಿ ವಿವಾಹ ಕಾರ್ಯಕ್ರಮ ನಿಶ್ಚಿತವಾಗಿ ನಡೆಯಲಿದೆ ಎಂದು ಸಚಿವರು ಹೇಳಿದ್ದಾರೆ. ಸಪ್ತಪದಿ ವಿವಾಹ ಕಾರ್ಯಕ್ರಮ ಎ.26 ಮತ್ತು ಮೇ 24 ರಂದು ನಡೆಯಬೇಕಿತ್ತು. ಆದರೆ ಸೋಂಕಿನ ಕಾರಣದಿಂದ ಅದು ಮುಂದೂಡಲ್ಪಟ್ಟಿದೆ. ಈ ವಿವಾಹ ಕಾರ್ಯಕ್ರಮ ನಿಶ್ಚಿತವಾಗಿ ನಡೆಯಲಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಸಪ್ತಪದಿ ವಿವಾಹಕ್ಕೆ ರಾಜ್ಯಾದಾದ್ಯಂತ 4500 ಅರ್ಜಿಗಳು ಬಂದಿದ್ದವು. ಇವುಗಳಲ್ಲಿ 1500 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಮುಖ್ಯಮಂತ್ರಿಗಳು 50 ಜನರಿದ್ದು ವಿವಾಹ ಕಾರ್ಯಕ್ರಮ ನಡೆಸಬಹುದು ಎಂದು ತಿಳಿಸಿದ್ದಾರೆ. ಅದರಂತೆ ಈ ಬಗ್ಗೆ ಮುಹೂರ್ತ ಸಿದ್ದಪಡಿಸಿ ಸಪ್ತಪದಿ ಕಾರ್ಯಕ್ರಮ ನಡೆಸುವ ಬಗ್ಗೆ ಚಿಂತಿಸಲಾಗುತ್ತಿದೆ ಎಂದು ತಿಳಿಸಿದರು.

ದ.ಕ. ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮಳೆಯಿಂದ ಆಗುವ ಅನಾಹುತಗಳನ್ನು ತಡೆಯಲು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾಡಳಿತ, ಆರೋಗ್ಯ ಇಲಾಖೆಯಿಂದ ಮಳೆಯಿಂದ ಆಗುವ ಅನಾಹುತಗಳನ್ನು ತಡೆಯಲು ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಕೆಲವೊಂದು ಕಡೆಗಳಲ್ಲಿ ಕೃತಕ ನೆರೆ ಸೃಷ್ಟಿಯಾಗಿದೆ. ಪ್ರವಾಹ, ಚಂಡಮಾರುತ ಬಂದರೆ ಎದುರಿಸಲು ಸಿದ್ದ ಎಂದು ಹೇಳಿದರು.