ಪುತ್ತೂರು: ಒಂದು ವಾರದಿಂದ ಜ್ವರ ದಿಂದ ಬಳಲುತ್ತಿದ್ದು ವಿವಾಹಿತ ಮಹಿಳೆ ಜೂ. 18 ರಂದು ತಡರಾತ್ರಿ ಮೃತಪಟ್ಟ ಘಟನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದೆ.
ಪುತ್ತೂರು ತಾಲೂಕಿನ ಅರಿಯಡ್ಕ ನಿವಾಸಿ ನಜೀರ್ ಮಾಸ್ಟರ್ ಅವರ ಪತ್ನಿ ನಸೀಮಾ (32) ಮೃತಪಟ್ಟ ಮಹಿಳೆ.
ನಸೀಮಾ ಅವರು ಕಳೆದ ಒಂದು ವಾರದಿಂದ ಪುತ್ತೂರಿನಲ್ಲಿ ಚಿಕಿತ್ಸೆ ಪಡೆದಿದ್ದರು. ಆದರೆ ಜ್ವರ ಉಲ್ಭಣಗೊಂಡ ಹಿನ್ನೆಲೆಯಲ್ಲಿ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿ ಆಗದೇ ಮೃತಪಟ್ಟಿದ್ದಾರೆ. ಮೃತರು ಪತಿ, ಮೂವರು ಪುತ್ರರನ್ನು ಅಗಲಿದ್ದಾರೆ.
ಪುತ್ತೂರು ತಾಲೂಕಿನಲ್ಲಿ ಡೆಂಗ್ಯೂ ಜ್ವರಕ್ಕೆ ಬಲಿಯಾದ ಎರಡನೆ ಪ್ರಕರಣ ಇದಾಗಿದ್ದು, ವಾರದ ಹಿಂದೆ ಬೆಟ್ಟಂಪಾಡಿಯಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದರು
Click this button or press Ctrl+G to toggle between Kannada and English