ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆಯವರ ಕಾರು ಇನ್ನೊಂದು ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣ ಜಖಂ ಗೊಂಡ ಘಟನೆ ಬುಧವಾರ ಮಧ್ಯಾಹ್ನಮೀಜಾರ್ ಸಮೀಪ ನಡೆದಿದೆ.
ಕಾರನ್ನು ಸುದರ್ಶ ಅವರೇ ಚಲಾಯಿಸಿದ್ದು, ಘಟನೆಯಲ್ಲಿ ಸುದರ್ಶನ್ ಯಾವುದೇ ಗಾಯಗಳಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಿಜಾರ್ ಸಮೀಪ ಪಾದಚಾರಿಗೆ ಕಾರ್ ಡಿಕ್ಕಿ ಹೊಡೆಯುವುದನ್ನು ತಪ್ಪಿಸಿದ ವೇಳೆ ರಸ್ತೆ ಪಕ್ಕ ಕೆಸರಿಗೆ ಜಾರಿದ ಕಾರ್ ಮುಂಭಾಗದಲ್ಲಿ ಬರುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಮೂಡಬಿದ್ರೆ ಠಾಣಾ ಪೊಲೀಸರು ಭೇಟಿಕೊಟ್ಟು ಪರಿಶೀಲನೆ ನಡೆಸಿದ್ದಾರೆ.
Click this button or press Ctrl+G to toggle between Kannada and English