ಹಬ್ಬದ ದಿನ ಶಾಂತಿ ಕದಡುವ ಉದ್ದೇಶದಿಂದ ಕಾಂಗ್ರೆಸ್‌ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲೆ ಸುಸಜ್ಜಿತ ದಾಳಿ

12:26 PM, Wednesday, August 12th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

miscrentsಬೆಂಗಳೂರು: ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್‌ ಪ್ರಕಟಿಸಲಾಗಿದೆ ಎಂದು ಆರೋಪಿಸಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ ಮೇಲೆ ಮಂಗಳವಾರ ರಾತ್ರಿ ಸುಸಜ್ಜಿತ ದಾಳಿಕೋರರ ಗುಂಪೊಂದು ಕಲ್ಲು ತೂರಾಟ ನಡೆಸಿ ಅಟ್ಟಹಾಸ ಮೆರೆದಿದ್ದಾರೆ.  ಪ್ರಕರಣದಲ್ಲಿ ಮೂವರು ಸಾವನ್ನಪ್ಪಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಇದುವರೆಗೂ 110 ಮಂದಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಇನ್ನೂ ಡಿಜೆ ಹಳ್ಳಿ ವ್ಯಾಪ್ತಿಯಲ್ಲಿ  ಈ ಸ್ಥಳದಲ್ಲಿ 144 ಸೆಕ್ಷನ್ ಜಾರಿ ಮಾಡಿ ಪೊಲೀಸರನ್ನು ನಿಯೋಜಿಸಲಾಗಿದೆ.

ಸುಮಾರು 500ಕ್ಕೂ ಹೆಚ್ಚು ಸುಸಜ್ಜಿತ ದಾಳಿಕೋರರು ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಹಾಗೂ ಕಾವಲ್‌ ಬೈರಸಂದ್ರದಲ್ಲಿ ಮಂಗಳವಾರ ರಾತ್ರಿ ವಾಹನಗಳಿಗೆ ಬೆಂಕಿ ಹಚ್ಚಿ  ಸಾರ್ವಜಿನಿಕ ಸೊತ್ತುಗಳನ್ನು ಹಾನಿಮಾಡಿದ್ದಾರೆ.

ರಸ್ತೆಯಲ್ಲಿ ಹಾಗೂ ಠಾಣೆ ಎದುರೇ ವಾಹನಗಳು ಹೊತ್ತಿ ಉರಿದವು. ಕೈಯಲ್ಲಿ ಕಟ್ಟಿಗೆ ಹಾಗೂ ಕಲ್ಲು ಹಿಡಿದಿದ್ದ ದುಷ್ಕರ್ಮಿಗಳು, ಪೊಲೀಸ್ ಹಾಗೂ ಸಾರ್ವಜನಿಕರ ವಾಹನಗಳ ಕಿಟಕಿ ಗಾಜುಗಳನ್ನು ಒಡೆದರು. ಪುಲಿಕೇಶಿನಗರ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆಯ ಮೇಲೂ ದಾಳಿ ಮಾಡಿದ್ದ ಕೆಲವರು, ವಿದ್ಯುತ್ ದೀಪ ಹಾಗೂ ಗಾಜುಗಳನ್ನು ಒಡೆದು ಹಾಕಿದರು. ಉದ್ವಿಗ್ನಗೊಂಡಿದ್ದ ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.

miscrentsಗಲಾಟೆ ನಡೆದ ಕೆಲ ನಿಮಿಷಗಳ ನಂತರ ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಘಟನಾ ಸ್ಥಳಕ್ಕೆ ಭೇಟಿ ನೀಡಿದರು. ನಗರದ ಎಲ್ಲ ವಲಯಗಳ ಡಿಸಿಪಿ ಹಾಗೂ ಎಸಿಪಿಗಳನ್ನು ಕೆ.ಜಿ.ಹಳ್ಳಿ–ಡಿ.ಜೆ.ಹಳ್ಳಿಗೆ ಠಾಣೆಗೆ ಕರೆಸಿಕೊಂಡು ತುರ್ತು ಸಭೆ ನಡೆಸಿದರು. ಎರಡೂ ಠಾಣೆ ವ್ಯಾಪ್ತಿಯಲ್ಲೂ ಪುಂಡಾಟಿಕೆ ಮಾಡಿದವರನ್ನು ಪತ್ತೆ ಹಚ್ಚಿ ಬಂಧಿಸುವಂತೆಯೂ ಅಧಿಕಾರಿಗಳಿಗೆ ಸೂಚನೆ ನೀಡಿದರು.

‘ಎರಡೂ ಧರ್ಮದವರು ಅಣ್ಣ–ತಮ್ಮಂದಿರಂತೆ. ಯಾರೋ ‌ಕಿಡಿಗೇಡಿಗಳು ಮಾಡಿರುವ ತಪ್ಪು ಇದು. ನಾವು ಜಗಳ ಮಾಡಿಕೊಳ್ಳುವುದು ಬೇಡ. ತಪ್ಪು ಯಾರೇ ಮಾಡಿದ್ದರೂ ಶಿಕ್ಷೆಯಾಗಲಿ. ನಾವೆಲ್ಲರೂ ಶಾಂತಿ ಕಾಪಾಡೋಣ’ ಎಂದು ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನವಿ ಮಾಡಿದ್ದಾರೆ.

ಈ ಸಂಬಂಧ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರ ಜೊತೆ ಚರ್ಚಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಹಿಂಸಾಚಾರ ಹರಡದಂತೆ ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ನನ್ನ ಫೇಸ್ ಬುಕ್ ಖಾತೆಯನ್ನು ಯಾರೋ ಹ್ಯಾಕ್ ಮಾಡಿದ್ದಾರೆಂದು ಅಖಂಡ ಶ್ರೀನಿವಾಸ ಮೂರ್ತಿ ಸೋದರಳಿಯ ನವೀನ್ ಹೇಳಿದ್ದು, ಶೀಘ್ರವೇ ಪೊಲೀಸರ ಮುಂದೆ ಹಾಜರಾಗುವುದಾಗಿ ತಿಳಿಸಿದ್ದಾರೆ.

ಇನ್ನು ಘಟನೆಯಲ್ಲಿ 80ಕ್ಕೂ ಹೆಚ್ಚು ಪೊಲೀಸರಿಗೆ ಗಾಯಗಳಾಗಿವೆ. ಈ ಸಂಬಂಧ ಡಿ ಜೆ ಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶಾಸಕ ಜಮೀರ್ ಮತ್ತು ರಿಜ್ವಾನ್ ಅರ್ಷದ್ ಪರಿಸ್ಥಿತಿಯನ್ನು ತಹಬದಿಗೆ ತರಲು ಯತ್ನಿಸಿದರು. ಇನ್ನೂ ಈ ಸ್ಥಳದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English