ಪ್ರಶ್ನೆ ಪತ್ರಿಕೆಗಳ ಸೋರಿಕೆಯ ಕಿಂಗ್‌ಪಿನ್‌ ಶಿವಕುಮಾರ್ ಕೋವಿಡ್‌ನಿಂದ ಸಾವು

8:00 PM, Wednesday, May 19th, 2021
Share
1 Star2 Stars3 Stars4 Stars5 Stars
(4 rating, 1 votes)
Loading...

shivakumarತುಮಕೂರು  : ಶಿಕ್ಷಣ ವ್ಯವಸ್ಥೆಯನ್ನೇ ಅಲ್ಲೋಲ ಕಲ್ಲೋಲ ಮಾಡಿದ ವಿವಿಧ ಪಶ್ನೆ ಪತ್ರಿಕೆಗಳ ಸೋರಿಕೆ ಪ್ರಕರಣದ ಕಿಂಗ್‌ಪಿನ್‌ ಶಿವಕುಮಾರ್ ಕೋವಿಡ್‌ನಿಂದ  ಸಾವನ್ನಪ್ಪಿದ್ದಾನೆ.

ಶಿವಕುಮಾರ್ ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕು ಬಿದರೆಕಾಗ್ಗೆರೆ ಗ್ರಾಮದವರಾಗಿದ್ದು,  ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದು ಚಿಕಿತ್ಸೆ ಫಲಿಸದೆ ಮಂಗಳವಾರ  ಸಾವನ್ನಪ್ಪಿದ್ದಾನೆ.

ಮೇ 16ರಂದು ಕೋವಿಡ್ ಚಿಕಿತ್ಸೆಗಾಗಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದು ಆತನಿಗೆ ಕೋವಿಡ್ ಪಾಸಿಟಿವ್ ಆಗಿತ್ತು.

ಗುಬ್ಬಿ ಪೊಲೀಸ್‌ ಠಾಣೆಯಲ್ಲಿ 2011ರಲ್ಲಿ ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧ ಈತನ ವಿರುದ್ಧ ಪ್ರಕರಣ ದಾಖಲಾಗಿತ್ತು. 2012ರಲ್ಲಿ ತುಮಕೂರಿನ ಹೊಸ ಬಡಾವಣೆ ಪೊಲೀಸ್‌ ಠಾಣೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರವಾಗಿ ದೂರು ದಾಖಲಾಗಿತ್ತು. ಅಲ್ಲೂ ಶಿವಕುಮಾರ್‌ ಹೆಸರು ಕೇಳಿ ಬಂದಿತ್ತು.

ಬೆಂಗಳೂರಿನ ನಂದಿನಿ ಲೇಔಟ್‌ ನಿವಾಸಿ ದೇವೇಂದ್ರ, ತುಮಕೂರಿನ ಗುಬ್ಬಿ ಮೂಲದ ಮಲ್ಲೇಶ್‌ ಎಂಬಾತನನ್ನು ತುಮಕೂರು ಪೊಲೀಸರು 2013ರಲ್ಲಿ ದ್ವಿತೀಯ ಪಿಯುಸಿ ಜೀವಶಾಸ್ತ್ರ ಪ್ರಶ್ನೆ ಪತ್ರಿಕೆ ಮಾರಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿಸಿದ್ದರು. ಆಗ ವಿಚಾರಣೆ ವೇಳೆ ಕಿಂಗ್‌ಪಿನ್‌ ಇದೇ ಶಿವಕುಮಾರ್‌ ಎಂಬ ವಿಷಯ ಬೆಳಕಿಗೆ ಬಂದಿತ್ತು.

ಆರೋಪಿಗಳು ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯು, ಪೊಲೀಸ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳ ಸೋರಿಕೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದು, ವಿಚಾರಣೆ ಹಂತದಲ್ಲಿವೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English