ಸಾರ್ಥಕ ಸಾಧನೆ : ಗೋವಿಂದ ಎಂ. ಕಾರಜೋಳ ಅವರಿಂದ ಕೃತಜ್ಞತೆ

12:49 PM, Friday, July 30th, 2021
Share
1 Star2 Stars3 Stars4 Stars5 Stars
(5 rating, 1 votes)
Loading...

Govinda Karajolaಬೆಂಗಳೂರು : ಜನಪ್ರಿಯ ಮುಖ್ಯಮಂತ್ರಿಗಳಾಗಿದ್ದ ಶ್ರೀ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ರಾಜ್ಯ ಸರ್ಕಾರದಲ್ಲಿ ತಾವು ಉಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ನಿರ್ವಹಿಸಿದ ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ ಇಲಾಖೆಯು ಕೋವಿಡ್ 19, ಪ್ರವಾಹ, ಅತಿವೃಷ್ಠಿಯ ವಿಷಮ ಪರಿಸ್ಥಿತಿಯ ಸಂಕಷ್ಟದ ಸಂದರ್ಭದಲ್ಲೂ ಇಲಾಖೆಗೂ ಹಾಗೂ ತಮಗೂ ಶ್ರೇಯಸ್ಸು ದೊರಕುವಂತೆ ಅಲ್ಲದೇ, ಜನತೆಯ ಪ್ರಶಂಸೆಗೂ ಪಾತ್ರವಾಗುವಂತೆ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನ ಗೊಳಿಸಿ, ರಾಜ್ಯದ ಬಲವರ್ಧನೆಗೆ ಪೂರಕವಾಗಿ ಸದೃಢ ರಸ್ತೆಗಳು, ಸೇತುವೆಗಳು, ಕಟ್ಟಡಗಳನ್ನು ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಿ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಿದ ಇಲಾಖೆಯ ಎಲ್ಲಾ ಹಿರಿಯ ಹಾಗೂ ಕಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿವರ್ಗದವರಿಗೆ ಮಾಜಿ ಉಪ ಮುಖ್ಯಮಂತ್ರಿಗಳಾದ ಶ್ರೀ ಗೋವಿಂದ ಎಂ. ಕಾರಜೋಳ ರವರು ಅಭಿನಂದಿಸಿದ್ದಾರೆ.

ಭೀಕರವಾಗಿದ್ದ ಕೋರೋನಾ ಪರಿಸ್ಥಿತಿಯನ್ನು ನಿಯಂತ್ರಿಸಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಸಮರ್ಥವಾಗಿ ನಿಭಾಯಿಸಲು ಸಲಹೆ ಸೂಚನೆಗಳನ್ನು ನೀಡಿ ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸಿ ಸಹಕರಿಸಿದ ಎಲ್ಲಾ ಅಧಿಕಾರಿಗಳು/ಸಿಬ್ಬಂದಿವರ್ಗದವರಿಗೆ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

ಈ ಅವಧಿಯಲ್ಲಿ ಸಲಹೆ ಸೂಚನೆ, ಸಹಕಾರ ನೀಡಿದ ಎಲ್ಲಾ ಸಚಿವರು, ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು, ಸ್ಥಳೀಯ ಜನಪ್ರತಿನಿಧಿಗಳು, ಮಾಧ್ಯಮ ಪ್ರತಿನಿಧಿಗಳು, ಅಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸಿದ ಶ್ರೀ ಗೋವಿಂದ ಎಂ. ಕಾರಜೋಳ ರವರು ಇನ್ನು ಮುಂದೆಯೂ ಅದೇ ರೀತಿ ಸಲಹೆ ಸಹಕಾರ ಮುಂದುವರೆಯಲಿ ಎಂದು ಆಶಯ ವ್ಯಕ್ತಪಡಿಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English