ದಕ್ಷಿಣಕನ್ನಡ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬದಲಾವಣೆಯ ಮಾತು

2:54 PM, Tuesday, March 12th, 2024
Share
1 Star2 Stars3 Stars4 Stars5 Stars
(No Ratings Yet)
Loading...

ಮಂಗಳೂರು : ದಕ್ಷಿಣಕನ್ನಡ ಲೋಕಸಭಾ ಚುನಾವಣಾ ಅಭ್ಯರ್ಥಿ ಆಯ್ಕೆಯಲ್ಲಿ ಬದಲಾವಣೆಯ ಮಾತು ಕೇಳಿ ಬಂದಿದೆ. ಬಿಜೆಪಿಯ ಹಾಲಿ ಸಂಸದ ನಳಿನ್ ಕುಮಾರ್ ಕಟೀಲು ಸತತ ಮೂರು ಬಾರಿ ಸ್ಪರ್ಧಿಸಿರುವುದರಿಂದ ಈ ಬಾರಿ ಹೊಸ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಬಿಜೆಪಿಯ ಹೈಕಮಾಂಡ್ ನಿರ್ಧರಿಸಿದೆ ಎನ್ನಲಾಗಿದೆ.

ಇಆ ಬಗ್ಗೆ ಮಂಗಳೂರಿನಲ್ಲಿ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲ್, ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸಬೇಕು ಎನ್ನುವುದು ನಮ್ಮ ಪಾರ್ಟಿಯ ವಿಶೇಷತೆ. ಪಾರ್ಟಿಯ ರಾಷ್ಟ್ರೀಯ ನಾಯಕರು ಎಲ್ಲಾ ಯೋಚನೆ ಮಾಡಿ ಆಯ್ಕೆ ಮಾಡುತ್ತಾರೆ. ಇದನ್ನು ನಾನು ಸಹ ಸ್ವಾಗತಿಸುತ್ತೇನೆ. ಪಾರ್ಟಿ ನಿಂತ ನೀರಾಗಬಾರದು. ಹೊಸಬರು ಬರುತ್ತಾ ಇರಬೇಕು, ಚಲಾವಣೆ ಆಗ್ತಾ ಇರಬೇಕು ಎಂದಿದ್ದಾರೆ.

ರಾಷ್ಟ್ರೀಯ ನಾಯಕರ ತೀರ್ಮಾನಕ್ಕೆ ನಾವೆಲ್ಲಾ ಬದ್ಧರಾಗಿರುತ್ತೇವೆ. ಯಾರೇ ಅಭ್ಯರ್ಥಿ ಆದರೂ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಬೇಕೆಂಬುದು ನಮ್ಮ ಗುರಿ. ರಾಷ್ಟ್ರೀಯ ನಾಯಕರ ಯೋಚನೆಗಳಿಗೆ ಬದ್ಧರಾಗಿ ಕೆಲಸ ಮಾಡುವವರು ನಾವು. ಪಾರ್ಟಿ ಗುಡಿಸು ಹೇಳಿದ್ರೆ ಗುಡಿಸುತ್ತೇವೆ. ಒರೆಸು ಅಂದ್ರೆ ಒರೆಸುತ್ತೇವೆ. ಪಾರ್ಟಿ ಹೇಳಿದ ಕೆಲಸ ಮಾಡುತ್ತೇವೆ. ಅಧಿಕಾರವೇ ಪ್ರಾಮುಖ್ಯ ಅಲ್ಲ. ಏನು ಬದಲಾವಣೆ ಮಾಡಬೇಕು ಅದನ್ನು ರಾಷ್ಟ್ರೀಯ ನಾಯಕರು ಮಾಡುತ್ತಾರೆ. ನಾವು ಕಾರ್ಯವನ್ನು ನಂಬಿರುವಂತವರು. ಕಾರ್ಯಕರ್ತರ ಆಧಾರದಲ್ಲಿ ಬೆಳೆದವರು ಎಂದು ಹೇಳಿದರು.

ಮಾತು ಮುಂದುವರಿಸಿದ ನಳೀನ್‌ ಕುಮಾರ್‌ ಕಟೀಲ್‌, ಪ್ರತಾಪ್ ಸಿಂಹ ಮಾತನಾಡಿರುವುದನ್ನು ರಾತ್ರಿ ನೋಡಿದೆ. ರಾಷ್ಟ್ರೀಯ ನಾಯಕರು ಯಾವ ತೀರ್ಮಾನ ತಗೊಂಡ್ರು ಅದು ಪಕ್ಷದ ತೀರ್ಮಾನ. ಆ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರುತ್ತೇವೆ. ನನಗೂ ಮೂರು ಬಾರಿ‌ ಅವಕಾಶ ನೀಡಿದ್ದಾರೆ. ಹದಿನೈದು ವರ್ಷ ಕೆಲಸ ಮಾಡಿದ್ದೇನೆ. ಪಕ್ಷ ಈ ಬಗ್ಗೆ ನಿರ್ಧಾರ ಮಾಡುತ್ತದೆ ಎಂದರು. ನಮ್ಮ ಪಾರ್ಟಿಯಲ್ಲಿ ತುಳಿಯುವ ಕೆಲಸ ಆಗಲ್ಲ. ಬೆಳೆಸುವ ಕೆಲಸ ಕಾರ್ಯ ಆಗುತ್ತದೆ. ನಾನು ಸಾಮಾನ್ಯ ಕಾರ್ಯಕರ್ತನಾಗಿ ವಿಚಾರಕ್ಕಾಗಿ ಬಂದವನು. ಸಂಘದ ಕಾರ್ಯಕ್ಕೋಸ್ಕರ ಬಂದಿದ್ದು. ಬಿಜೆಪಿ ಕೆಲಸ ಮಾಡು ಅಂದ್ರು ಮಾಡಿದೆ. ಲೋಕಸಭೆಗೆ ನಿಲ್ಲು ಅಂದ್ರು ನಿಂತೆ, ರಾಜ್ಯಾಧ್ಯಕ್ಷನೂ ಆದೆ. ಯಾವ ಪಾರ್ಟಿಯಲ್ಲಿ ಸಾಮಾನ್ಯ ಕಾರ್ಯಕರ್ತ ರಾಜ್ಯಾಧ್ಯಕ್ಷ ಆಗುತ್ತಾರೆ. ಇಲ್ಲಿ ಯಾರನ್ನು ತುಳಿಯುವುದಿಲ್ಲ. ಅವಕಾಶ ಸಿಕ್ಕಾಗ ನನಗೆ ನ್ಯಾಯ ಸಿಕ್ಕಿದೆ. ಅವಕಾಶ ಸಿಗ್ಲಿಲ್ಲ ಅಂದಾಗ ಅನ್ಯಾಯ ಆಗಿದೆ ಎಂದು ಹೇಳುವ ಹಕ್ಕು ನಮಗಿಲ್ಲ ಎಂದು ಭಾವುಕರಾದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English