ಉಡುಪಿ : ಕಂಠಪೂರ್ತಿ ಕುಡಿದು ಸ್ನೇಹಿತನ ಕತ್ತು ಸೀಳಿ ಕೊಲೆಗೈದು ಪೊಲೀಸರಿಗೆ ಕರೆ ಮಾಡಿದ ವ್ಯಕ್ತಿ

11:31 PM, Tuesday, October 22nd, 2024
Share
1 Star2 Stars3 Stars4 Stars5 Stars
(No Ratings Yet)
Loading...

ಉಡುಪಿ : ತನ್ನ ಸ್ನೇಹಿತನನ್ನೇ ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿಯೋರ್ವ ಕತ್ತು ಸೀಳಿ ಭೀಕರವಾಗಿ ಕೊಲೆಗೈದಿರುವ ಘಟನೆ ಉಡುಪಿ ಹಳೆ ಕೆಎಸ್ ಆರ್ ಟಿಸಿ ಬಳಿಯ ಕೃಷ್ಣ ಕೃಪಾ ಬಿಲ್ಡಿಂಗ್ ನ ನೆಲ ಅಂತಸ್ತಿನ ಕೊಠಡಿಯಲ್ಲಿ ನಡೆದಿದೆ.

ಕೊರಂಗ್ರಪಾಡಿಯ ಪ್ರಶಾಂತ್ ಶೆಟ್ಟಿ (32) ಕೊಲೆಯಾದ ವ್ಯಕ್ತಿ. ಈತನ ಸ್ನೇಹಿತ ವಿಜಯನಗರ ಜಿಲ್ಲೆಯ ಹೂವಿನಹಡಗಲಿಯ ನಿವಾಸಿ ಈರಣ್ಣ ಯಾನೆ ದಿನೇಶ್ ಎಂಬಾತ ಕೊಲೆ ಮಾಡಿದ ಆರೋಪಿ.

ಕಂಠಪೂರ್ತಿ ಕುಡಿದು ಇಬ್ಬರು ಜಗಳ ಮಾಡಿಕೊಂಡಿದ್ದು, ಗಲಾಟೆ ವಿಕೋಪಕ್ಕೆ ತಿರುಗುತ್ತಿದ್ದಂತೆ ಆರೋಪಿ ಈರಣ್ಣ ಹರಿತವಾದ ಚೂರಿಯಿಂದ ಪ್ರಶಾಂತ್ ನ ಕತ್ತು ಸೀಳಿದ್ದಾನೆ. ಗಂಭೀರವಾಗಿ ಗಾಯಗೊಂಡ ಪ್ರಶಾಂತ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ.

ಕತ್ತು ಸೀಳಿದ ಬಳಿಕ ಆರೋಪಿಯು ಖುದ್ದು ಪೊಲೀಸರಿಗೆ ಕರೆ ಮಾಡಿ, ಸ್ನೇಹಿತನನ್ನು ಕೊಲೆ ಮಾಡಿರುವುದಾಗಿ ಮಾಹಿತಿ ನೀಡಿದ್ದಾನೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ. ಘಟನಾ ಸ್ಥಳಕ್ಕೆ ಎಸ್ಪಿ ಡಾ. ಅರುಣ್ ಕೆ., ಎಎಸ್ಪಿ ಸಿದ್ದಲಿಂಗಪ್ಪ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬೆರಳಚ್ಚು ತಜ್ಞರು ಸ್ಥಳಕ್ಕೆ ಭೇಟಿ ಸಾಕ್ಷ್ಯಧಾರಗಳನ್ನು ಸಂಗ್ರಹಿಸಿದ್ದಾರೆ. ಕೊಲೆಗೆ ಬೇರೆ ಏನಾದರೂ ಕಾರಣ ಇದೆಯೇ ಎಂಬುವುದನ್ನು ಪೊಲೀಸರು ತನಿಖೆ ನಡೆಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English