ಮಂಗಳೂರು : ಫೆಂಗಲ್ ಚಂಡಮಾರುತದಿಂದ ಉಂಟಾದ ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ತೀವ್ರ ಮಳೆಯಾಗುವ ಸಾಧ್ಯತೆ ಇರುವುದರಿಂದ ಎಲ್ಲಾ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಸಾರ್ವಜನಿಕರ ಹಾಗೂ ಎಲ್ಲಾ ಜಾನುವಾರುಗಳ ರಕ್ಷಣೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ ಸೂಚಿಸಿದ್ದಾರೆ
ಮಳೆಗಾಲದಲ್ಲಿ ಅನುಸರಿಸುವ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಅನುಷ್ಠಾನಕ್ಕೆ ತರಲು ಎಲ್ಲಾ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ತಕ್ಷಣದಿಂದಲೇ ಸಿದ್ದರಾಗಬೇಕು. ಆಯಾ ತಹಶೀಲ್ದಾರರು ಈ ಬಗ್ಗೆ ಮೇಲ್ವಿಚಾರಣೆ ವಹಿಸಬೇಕು.
ಈ ನಿಟ್ಟಿನಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ತಕ್ಷಣವೇ ವರದಿ ನೀಡುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.
ತೀವ್ರ ಮಳೆಯಾಗುವ ಮುನ್ಸೂಚನೆಯಂತೆ ಡಿಸೆಂಬರ್ 3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ
Click this button or press Ctrl+G to toggle between Kannada and English