ಮಂಗಳೂರು : ಮಂಗಳೂರಿನಲ್ಲಿ ಉಚ್ಚ ನ್ಯಾಯಲಯದ ಪೀಠ ಸ್ಥಾಪನೆ ಮಾಡುವ ಬಗ್ಗೆ ಹೋರಾಟ ಸಮಿತಿಯ ಸಂಚಾಲಕರರು ಹಾಗೂ ವಿಧಾನ ಪರಿಷತ್ ನ ಸದಸ್ಯರಾದ ಐವನ್ ಡಿ ಸೋಜರವರ ನೇತ್ರತ್ವದಲ್ಲಿ ವಿಧಾನ ಸಭೆ ಯ ಸಭಾದಕ್ಷರಾದ ಯು ಟಿ ಖಾದರ್ ರವರ ಸಮುಕ್ಕದಲ್ಲಿ ಮುಖ್ಯಮಂತ್ರಿಯವರಿಗೆ, ಮಂಗಳೂರು ವಕೀಲರ ಸಂಘ ದ ಪರವಾಗಿ ಮನವಿಯನ್ನು ಸಲ್ಲಿಸಲಾಯಿತು.
ಈ ಬಗ್ಗೆ ಸಂಘದ ಅಧ್ಯಕ್ಷರಾದ ಎಚ್ ವಿ ರಾಘವೇಂದ್ರ ಮತ್ತು ಹಿರಿಯ ವಕೀಲರಾದ ಎಂ.ಪಿ ನೊರೂಂನ್ಹ ರವರು ಕರಾವಳಿಯಲ್ಲಿ ಉಚ್ಛ ನ್ಯಾಯಲಯದ ಸಂಚಾರಿ ಪೀಠ ವನ್ನು ಜರೂರಾಗಿ ಸ್ಥಾಪಿಸುವ ಬಗ್ಗೆ ಮನವರಿಕೆ ಮಾಡಿದರು .
ಈ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳು ಮತ್ತು ಕಾನೂನು ಸಚಿವರು ಉಚ್ಚ ನ್ಯಾಯಲಯದ ನ್ಯಾಯಧೀಶರೊಂದಿಗೆ ಅಭಿಪ್ರಾಯ ಪಡೆದು ಮುಂದಿನ ಕ್ರಮ ಕೈಗೊಳ್ಳುದಾಗಿ ತಿಳಿಸಿರುತಾರೆ. ನಿಯೋಗದಲ್ಲಿ ಶಾಸಕರಾದ ವೇದವ್ಯಾಸ್ ಕಾಮತ್, ಭರತ್ ಶೆಟ್ಟಿ, ಕಿಶೋರ್ ಕುಮಾರ್,. ಮಂಜುನಾಥ್ ಭಂಡಾರಿ, ಮಾಜಿ ವಿಧಾನ ಪರಿಷತ್ ಸದಸ್ಯರು ಹಾಗೂ ಹಿರಿಯ ವಕೀಲರದ ಮೋನಪ್ಪ ಭಂಡಾರಿ, ಹಾಗೂ ಹಿರಿಯ ವಕೀಲರಾದ ಟಿ. ನಾರಾಯಣ ಪೂಜಾರಿ, ಯಶವಂತ ಮರೋಳಿ,ಉಪಾಧ್ಯಕ್ಷರಾದ ಸುಜಿತ್ ಕುಮಾರ್,ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷರಾದ ರಿಚರ್ಡ್ ಡಿ ಕೊಸ್ತಾ ಶ್ರೀಮತಿ ಶಾಲಿನಿ, ಶ್ರೀಮತಿ ಸುಮನಾ ಶರಣ್, ಸಂತೋಷ್ ಕುಮಾರ್, ದಿನಕರ್ ಶೆಟ್ಟಿ, ರಾಘವೇಂದ್ರ ರಾವ್, ಪ್ರಮೋದ್ ಕೆರ್ವಾಶೆ, ಜಗದೀಶ್ ಕೆ ಆರ್, ವಿಜಯ್ ಮಹಾತೇಶ್ ಸತೀಶ್ ಕುಮಾರ್, ವೀರೇಂದ್ರ ಸಿದ್ದಕಟ್ಟೆ ಉಪಸ್ಥಿತರಿದ್ದರು.
Click this button or press Ctrl+G to toggle between Kannada and English