ಪುತ್ತೂರು ಕಾಂಗ್ರೇಸ್ ನಲ್ಲಿ ಅಸಮಧಾನ ಸ್ಪೋಟ : ಕೊಂಬೆಟ್ಟು ವಾರ್ಡ್ ಬೂತ್‌ ಅಧ್ಯಕ್ಷ ರಾಜೀನಾಮೆ

11:38 PM, Wednesday, December 18th, 2024
Share
1 Star2 Stars3 Stars4 Stars5 Stars
(No Ratings Yet)
Loading...

ಪುತ್ತೂರು : ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ನೂತನ ವ್ಯವಸ್ಥಾಪನಾ ಸಮಿತಿ ಪ್ರಕಟ ಬೆನ್ನಲ್ಲೇ ಪುತ್ತೂರು ಕಾಂಗ್ರೇಸ್ ನಲ್ಲಿ ಅಸಮಧಾನ ಸ್ಪೋಟಗೊಂಡಿದೆ. ಕಾಂಗ್ರೆಸ್ ಪಕ್ಷದ ಕೊಂಬೆಟ್ಟು ವಾರ್ಡ್ ನ ಬೂತ್‌ ಅಧ್ಯಕ್ಷ ಸ್ಥಾನಕ್ಕೆ ಸುದೇಶ್‌ ಕುಮಾರ್ ರಾಜೀನಾಮೆ ನೀಡಿದ್ದಾರೆ.

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನೂತನ ಸಮಿತಿಗೆ ಅರ್ಜಿ ಸಲ್ಲಿಸಿದ್ದ ಸುದೇಶ್ ಕುಮಾರ್ ಕಾಂಗ್ರೆಸ್ ಪಕ್ಷದ ಕೊಂಬೆಟ್ಟು ವಾರ್ಡ್ ನ ಬೂತ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ಬ್ಲಾಕ್ ಅಧ್ಯಕ್ಷ ಕೃಷ್ಣ ಪ್ರಸಾದ್‌ ಆಳ್ವ ರವರಿಗೆ ಪತ್ರ ಬರೆದಿರುವುದಾಗಿ ತಿಳಿದು ಬಂದಿದೆ.

ತಾನು ಕಳೆದ 35 ವರ್ಷಗಳಿಂದ ಕಾಂಗ್ರೆಸ್ ಕಾರ್ಯಕರ್ತನಾಗಿ ಕೊಂಬೆಟ್ಟು ವಾರ್ಡ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಪಕ್ಷದ ಎಲ್ಲಾ ಚಟುವಟಿಗಳಲ್ಲಿ ಸಕ್ರಿಯವಾಗಿ ಭಾಗಿಯಾಗುತ್ತಿದ್ದೇನೆ. ಪಕ್ಷದ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದೇನೆ. ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ನಾಮ ನಿರ್ದೇಶನಕ್ಕೆ ಅರ್ಜಿ ಸಲ್ಲಿಸಿದ್ದು, ಪ್ರಬಲ ಆಕಾಂಕ್ಷಿಯೂ ಆಗಿದ್ದೆ, ದೇವಸ್ಥಾನದ ಪ್ರತಿಯೊಂದು ಚಟುವಟಿಕೆಗಳಲ್ಲೂ ಸಕ್ರಿಯವಾಗಿ ಭಾಗವಹಿಸುತ್ತಿದ್ದು, ಆದರೂ ನನ್ನನ್ನು ಆಯ್ಕೆ ಮಾಡದ ಹಿನ್ನಲೆ ಮನನೊಂದು ಪಕ್ಷದ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English