ತಿರುಪತಿಯಲ್ಲಿ ವೈಕುಂಠ ಏಕಾದಶಿಗೆ ಸೇರಿದ್ದ ಭಕ್ತರ ಸಮೂಹದಲ್ಲಿ ನೂಕುನುಗ್ಗಲು ಆರು ಮಂದಿ ಸಾವು

11:48 AM, Thursday, January 9th, 2025
Share
1 Star2 Stars3 Stars4 Stars5 Stars
(No Ratings Yet)
Loading...

ಅಮರಾವತಿ : ತಿರುಪತಿಯಲ್ಲಿ ಸಂಭವಿಸಿದ ಕಾಲ್ತುಳಿತದಿಂದ ಆರು ಮಂದಿ ಸಾವನಪ್ಪಿದ್ದಾರೆ. ಘಟನೆಯಲ್ಲಿ ಹಲವು ಮಂದಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ.

ಭಕ್ತಾದಿಗಳು ತಿರುಪತಿಯ ವೈಕುಂಠ ದ್ವಾರ ದರ್ಶನದ ಟಿಕೆಟ್‌ ತೆಗೆದುಕೊಳ್ಳುವ ವೇಳೆ ಭಾರಿ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಉಂಟಾಗಿದೆ. ಟಿಕೆಟ್‌ ಪಡೆದುಕೊಳ್ಳಲು ಏಕಕಾಲಕ್ಕೆ ಸಾವಿರಾರು ಮಂದಿ ನುಗ್ಗಿದ್ದರಿಂದ ಈ ದುರ್ಘಟನೆ ಸಂಭವಿಸಿದೆ.

ಇದುವರೆಗೆ ಒಂದು ಮೃತದೇಹವನ್ನು ಗುರುತಿಸಲಾಗಿದೆ ಎಂದು ತಿರುಮಲ ತಿರುಪತಿ ದೇವಸ್ತಾನಮ್ಸ್ (ಟಿಟಿಡಿ) ಅಧ್ಯಕ್ಷ ಬಿಆರ್ ನಾಯ್ಡು ಹೇಳಿದ್ದಾರೆ.

ಜನವರಿ 10 ರಂದು ವೈಕುಂಠ ಏಕಾದಶಿಯ ಹಿನ್ನಲೆಯಲ್ಲಿ ತಿರುಪತಿಯ ಕೌಂಟರ್‌ಗಳಲ್ಲಿ ನಾಳೆ ಬೆಳಗ್ಗೆಯಿಂದ ಟಿಕೆಟ್‌ ವಿತರಿಸಲು ನಿರ್ಧರಿಸಲಾಗಿತ್ತು ಎನ್ನಲಾಗಿದೆ.

“ಒಬ್ಬ ಡಿಎಸ್ಪಿ ಗೇಟ್‌ಗಳನ್ನು ತೆರೆದರು ಮತ್ತು ತಕ್ಷಣವೇ ಎಲ್ಲರೂ ಮುಂದಕ್ಕೆ ತಳ್ಳಿದರು ಈ ಕಾಲ್ತುಳಿತಕ್ಕೆ ಕಾರಣವಾಯಿತು” ಎಂದು ನಾಯ್ಡು ಮಾಧ್ಯಮಗಳನ್ನು ಉದ್ದೇಶಿಸಿ ಹೇಳಿದರು.

ಏತನ್ಮಧ್ಯೆ, ಪೊಲೀಸರು ಒಂದಿಬ್ಬರು ಮಹಿಳಾ ಭಕ್ತರಿಗೆ ಸಿಪಿಆರ್ ನಡೆಸುತ್ತಿರುವ ಮತ್ತು ಗಾಯಗೊಂಡ ವ್ಯಕ್ತಿಗಳನ್ನು ಆಂಬ್ಯುಲೆನ್ಸ್‌ಗಳಲ್ಲಿ ಸ್ಥಳಾಂತರಿಸುವ ವೀಡಿಯೊಗಳು ವೈರಲ್ ಆಗಿವೆ. ಘಟನೆಯಲ್ಲಿ ಹಲವು ಮಂದಿ ಗಾಯಗೊಂಡಿದ್ದು ಎಲ್ಲರನ್ನೂ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎನ್ನಲಾಗಿದೆ.

ಘಟನೆಯಲ್ಲಿ ಗಾಯಗೊಂಡವರಿಗೆ ನೀಡುತ್ತಿರುವ ಚಿಕಿತ್ಸೆ ಕುರಿತು ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದಾರೆ. ಘಟನಾ ಸ್ಥಳಕ್ಕೆ ತೆರಳಿ ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡಲು ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಉನ್ನತ ಅಧಿಕಾರಿಗಳಿಗೆ ಸಿಎಂ ಆದೇಶ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಕಾರ್ಯಾಲಯ ತಿಳಿಸಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English