Blog Archive

ರಾಜ್ಯದಲ್ಲಿ ಶನಿವಾರ ಒಂದೇ ದಿನ 42 ಮಂದಿ ಕೊರೋನಾ ಸೋಂಕಿನಿಂದ ಮೃತ,1839 ಮಂದಿಗೆ ಪಾಸಿಟಿವ್

Sunday, July 5th, 2020
Karnataka Corona

ಬೆಂಗಳೂರು: ರಾಜ್ಯದಲ್ಲಿ ಶನಿವಾರ ಒಂದೇ ದಿನ  42 ಮಂದಿ ಕೊರೋನಾ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 335ಕ್ಕೇರಿಕೆಯಾಗಿದೆ. ಕೊರೋನಾ ವೈರಸ್ ನಿಂದಾಗಿ ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 24 ಸೇರಿದಂತೆ ರಾಜ್ಯದಲ್ಲಿ ಒಟ್ಟು 42 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 1172 ಪ್ರಕರಣಗಳು ಸೇರಿದಂತೆ ರಾಜ್ಯದಲ್ಲಿ ಒಟ್ಟು 1839 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ […]

ಮುಂದೂಡಲ್ಪಟ್ಟ ಸರಕಾರದ ಸಪ್ತಪದಿ ವಿವಾಹ ಕಾರ್ಯಕ್ರಮ ಶೀಘ್ರದಲ್ಲೇ ಆರಂಭ

Monday, June 1st, 2020
Muzurai

ಮಂಗಳೂರು : ಕೋವಿಡ್-19 ಸೋಂಕಿನಿಂದ ಮುಂದೂಡಲ್ಪಟ್ಟಿ ರುವ ಸಪ್ತಪದಿ ವಿವಾಹ ಕಾರ್ಯಕ್ರಮ ನಿಶ್ಚಿತವಾಗಿ ನಡೆಯಲಿದೆ ಎಂದು ಸಚಿವರು ಹೇಳಿದ್ದಾರೆ. ಸಪ್ತಪದಿ ವಿವಾಹ ಕಾರ್ಯಕ್ರಮ ಎ.26 ಮತ್ತು ಮೇ 24 ರಂದು ನಡೆಯಬೇಕಿತ್ತು. ಆದರೆ ಸೋಂಕಿನ ಕಾರಣದಿಂದ ಅದು ಮುಂದೂಡಲ್ಪಟ್ಟಿದೆ. ಈ ವಿವಾಹ ಕಾರ್ಯಕ್ರಮ ನಿಶ್ಚಿತವಾಗಿ ನಡೆಯಲಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಸಪ್ತಪದಿ ವಿವಾಹಕ್ಕೆ ರಾಜ್ಯಾದಾದ್ಯಂತ 4500 ಅರ್ಜಿಗಳು ಬಂದಿದ್ದವು. ಇವುಗಳಲ್ಲಿ 1500 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಮುಖ್ಯಮಂತ್ರಿಗಳು 50 ಜನರಿದ್ದು ವಿವಾಹ ಕಾರ್ಯಕ್ರಮ ನಡೆಸಬಹುದು […]

ಮಂಗಳೂರು : ಶುಕ್ರವಾರ 170 ಮಂದಿಯ ಗಂಟಲ ದ್ರವ ಪರೀಕ್ಷೆಗೆ ರವಾನೆ, 59 ಸಕ್ರಿಯ ಪ್ರಕರಣಗಳು

Friday, May 29th, 2020
covid-test

ಮಂಗಳೂರು : ದ.ಕ. ಜಿಲ್ಲೆಯಲ್ಲಿಸುಮಾರು 170 ಮಂದಿಯ ಗಂಟಲ ದ್ರವ ಸ್ಯಾಂಪಲ್ ಗಳನ್ನು ಪರೀಕ್ಷೆಗೆ ರವಾನಿಸಲಾಗಿದೆ. ಒಟ್ಟು  59 ಮಂದಿ ಕೊರೋನಾ ಚಿಕಿತ್ಸೆಯಲ್ಲಿದ್ದಾರೆ. ಜಿಲ್ಲೆಯಲ್ಲಿ ಶುಕ್ರವಾರದಂದು 581 ಮಂದಿಯ ವರದಿ ಲಭ್ಯವಾಗಿದ್ದು, ಈ ಪೈಕಿ ಯಾವುದೇ ಪಾಸಿಟಿ ವರದಿ ಬಂದಿಲ್ಲ ಎಂದು ದ.ಕ. ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಅಧಿಕೃತ ಮಾಹಿತಿ ನೀಡಿದೆ. 593 ಮಂದಿಯ ವರದಿ ಬರಬೇಕಿದೆ. ಇನ್ನು 11 ಮಂದಿಯನ್ನು ನಿಗಾ ಹಿನ್ನೆಲೆ ಕ್ವಾರಂಟೈನ್ ಕೇಂದ್ರಗಳಿಗೆ ದಾಖಲಿಸಲಾಗಿದೆ. ಈಗಾಗಲೇ ಜಿಲ್ಲೆಯಲ್ಲಿ 99 ಮಂದಿಯಲ್ಲಿ ಪಾಸಿಟಿವ್ ಕಂಡುಬಂದಿದ್ದು, […]

ಇಬ್ಬರು ಮಕ್ಕಳು ಸೇರಿ, ದಕ್ಷಿಣ ಕನ್ನಡ ಜಿಲ್ಲೆಯ11 ಮಂದಿಯಲ್ಲಿ ಕೊರೊನಾ ಸೋಂಕು

Wednesday, May 27th, 2020
Mangalore Covid

ಮಂಗಳೂರು  : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  11 ಮಂದಿಯಲ್ಲಿ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಇಂದು ದೃಢವಾದ 11 ಮಂದಿಯಲ್ಲಿ 10 ಮಂದಿ ಮಹಾರಾಷ್ಟ್ರ ಹಾಗೂ ಒಬ್ಬರು ಗುಜರಾತ್ ರಾಜ್ಯದಿಂದ ಹಿಂತಿರುಗಿದವರಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 81ಕ್ಕೆ ಏರಿಕೆಯಾಗಿದೆ. ಬುಧವಾರದ ಆರೋಗ್ಯ ಇಲಾಖೆಯ ಬೆಳಗ್ಗಿನ ಬುಲೆಟಿನ್ ಪ್ರಕಾರ  3, 11, ವರ್ಷದ ಮಕ್ಕಳಿಗೂ ಸೋಂಕು ತಗುಲಿದೆ. ಇದಲ್ಲದೆ 36, 59,17, 45, 37 ಮಹಿಳೆ ಹಾಗೂ 35, 46, 39 ವರ್ಷದ ಪುರುಷರಲ್ಲಿ ಸೋಂಕು […]

ಸುರತ್ಕಲ್ ನಲ್ಲಿ ಅನಧಿಕೃತ ಕ್ಲಿನಿಕ್ ಬಂದ್ ಮಾಡಿದ‌ ಆರೋಗ್ಯ ಇಲಾಖೆ

Thursday, April 16th, 2020
Raghavendra-clinic

ಮಂಗಳೂರು : ನೋಂದಣಿಗೊಳ್ಳದೆ ಸುರತ್ಕಲ್ ಪೇಟೆಯಲ್ಲಿ ಕಾರ್ಯಾಚರಿಸುತ್ತಿದ್ದ ಖಾಸಗೀ ವೈದ್ಯರ ಕ್ಲಿನಿಕ್ ಮೇಲೆ‌‌ ದಾಳಿ ನಡೆಸಿದ ಆರೋಗ್ಯ ಇಲಾಖೆ ಅಧಿಕಾರಿಗಳು, ಕ್ಲಿನಿಕ್ ಗೆ ಗುರುವಾರ  ಬೀಗ ಜಡಿದಿದ್ದಾರೆ. ಸುರತ್ಕಲ್ ನಲ್ಲಿ ಡಾ. ದಿನಕರ ರಾವ್ ಎಂಬವರಿಗೆ ಸೇರಿದ  ಶ್ರೀ ರಾಘವೇಂದ್ರ ಕ್ಲಿನಿಕ್ ಇದರ ನೋಂದಣಿ 2017ರಲ್ಲಿಯೇ ಮುಕ್ತಾಯವಾಗಿದ್ದು, ನಂತರ ನವೀಕರಣಗೊಳ್ಳದೆ ಕ್ಲಿನಿಕ್ ಕಾರ್ಯಾಚರಿಸುತ್ತಿತ್ತು. ಜಿಲ್ಲಾ ಆರೋಗ್ಯ ಮತ್ತು‌ ಕುಟುಂಬ ಕಲ್ಯಾಣಾಧಿಕಾರಿಯವರ ನಿರ್ದೇಶನದ ಮೇರೆಗೆ ಇಲಾಖೆಯ ಅಧಿಕಾರಿ ಡಾ.ಸಿಖಂದರ್ ಪಾಶಾ ಅವರು ಕ್ಲಿನಿಕ್ ಗೆ ದಾಳಿ ಮಾಡಿ, ಕ್ಲಿನಿಕನ್ನು ಮುಂದಿನ‌ ಆದೇಶದವರೆಗೆ […]

ಆಶಾ ಕಾರ್ಯಕರ್ತೆಯ ಕೆಲಸಕ್ಕೆ ಅಡ್ಡಿಪಡಿಸಿದಕ್ಕೆ ಇಬ್ಬರ ಬಂಧನ

Saturday, April 11th, 2020
asraf

ಮಂಗಳೂರು: ನಗರದ ಹೊರವಲಯ ಮಲ್ಲೂರಿನಲ್ಲಿ ಆಶಾ ಕಾರ್ಯಕರ್ತೆಯ ಕೆಲಸಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಆರೋಪಿಗಳು ಆರೋಗ್ಯ ಇಲಾಖೆಗೆ ಸಂಬಂಧಿಸಿದಂತೆ ಕಾರ್ಯನಿರ್ವಹಿಸುತ್ತಿದ್ದ ವಸಂತಿ ಎಂಬ ಆಶಾ ಕಾರ್ಯಕರ್ತೆಯ ಕೆಲಸಕ್ಕೆ ಅಡ್ಡಿಪಡಿಸಿದ್ದಾರೆ. ಈ ಹಿನ್ನೆಲೆ ಇಲ್ಲನ ಬದ್ರಿಯಾ ನಗರದ ಇಸ್ಮಾಯಿಲ್(45), ಅಶ್ರಫ್ (32) ಎಂಬುವರನ್ನು ಮಂಗಳೂರು ಗ್ರಾಮೀಣ ಪೊಲೀಸರು ಬಂಧಿಸಿದ್ದಾರೆ. ಆಶಾ ಕಾರ್ಯಕರ್ತೆ ವಸಂತಿ ಆರೋಗ್ಯ ಇಲಾಖೆಗೆ ಸಂಬಂಧಿಸಿದ ತನ್ನ ಅಧಿಕೃತ ಕರ್ತವ್ಯಗಳನ್ನು ನಿರ್ವಹಿಸುತ್ತಿರುವಾಗ ಅಲ್ಲಿಗೆ ಬಂದ ಆರೋಪಿಗಳು ಸಾರ್ವಜನಿಕ ಹಿತದೃಷ್ಟಿಯಿಂದ ಕರ್ತವ್ಯ ನಿರ್ವಹಿಸುವುದನ್ನು ತಡೆದಿದ್ದಾರೆ. ಅಲ್ಲದೆ ಕರ್ತವ್ಯಕ್ಕೆ ಅಡ್ಡಿಗೊಳಿಸಿ […]

ಆರೋಗ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ತುರ್ತು ನೇಮಕಾತಿ, ಅರ್ಜಿ ಆಹ್ವಾನ

Friday, April 3rd, 2020
health jobs

ಮಂಗಳೂರು : ಕೊರೋನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾ ಆಸ್ಪತ್ರೆಗಳಲ್ಲಿ ಪ್ರಕರಣಗಳನ್ನು ಸಮರ್ಪಕವಾಗಿ ನಿಭಾಯಿಸಲು ವೈದ್ಯಕೀಯ ಸೇವೆಗಳನ್ನು ಒದಗಿಸಲು ಅಗತ್ಯವಿರುವ ಈ ಕೆಳಗೆ ನಮೂದಿಸಿದ ಹುದ್ದೆಗಳನ್ನು ಮಂಗಳೂರು ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ತಾತ್ಕಾಲಿಕವಾಗಿ 6 ತಿಂಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ನಡೆಯಲಿದೆ. ಏಪ್ರಿಲ್07 ರಂದು ಬೆಳಿಗ್ಗೆ 10.00 ಗಂಟೆಗೆ ಮಂಗಳೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಇಲ್ಲಿ ನೇರ ಸಂದರ್ಶನಕ್ಕೆ ನಡೆಯಲಿದೆ. ಹುದ್ದೆಯ ವಿವರ ಇಂತಿವೆ :- ವೈದ್ಯರು/ತಜ್ಞರು – 10 ಹುದ್ದೆಗಳು ವೇತನ ; 60 […]

ಕೋವಿಡ್ – 19 : ಜ್ವರ ಪತ್ತೆ ಹಚ್ಚಲು 13 ಜ್ವರ ಕ್ಲಿನಿಕ್‌ ತೆರೆದ ಆರೋಗ್ಯ ಇಲಾಖೆ

Wednesday, April 1st, 2020
ಕೋವಿಡ್ - 19 : ಜ್ವರ ಪತ್ತೆ ಹಚ್ಚಲು 13 ಜ್ವರ ಕ್ಲಿನಿಕ್‌ ತೆರೆದ ಆರೋಗ್ಯ ಇಲಾಖೆ

ಮಂಗಳೂರು  : ರಾಷ್ಟ್ರವ್ಯಾಪಿ ಪಸರಿಸುವ ಕೊರೋನ ವೈರಸ್/ ಕೋವಿಡ್ – 19 ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕಾರ್ಯಕ್ರಮದನ್ವಯ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಸದ್ರಿ ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸಲು ಜಿಲ್ಲಾಡಳಿತ, ಆರೋಗ್ಯ ಇಲಾಖೆ ಅವಿರತ ಶ್ರಮಿಸುತ್ತಿದ್ದು ಜನ ಸಾಮಾನ್ಯರ ಆರೋಗ್ಯದ ಬಗ್ಗೆ ಕಾಳಜಿವಹಿಸಿ ಜ್ವರ ಕ್ಲಿನಿಕ್‌ಗಳನ್ನು ಪ್ರಮುಖ ಆರೋಗ್ಯ ಸಂಸ್ಥೆಗಳಲ್ಲಿ ತೆರೆಯಲಾಗಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದ.ಕ ಮಂಗಳೂರು ಜಿಲ್ಲಾ ವ್ಯಾಪ್ತಿಯಲ್ಲಿ ಒಟ್ಟು 13 ಜ್ವರದ ಚಿಕಿತ್ಸಾಲಯಗಳನ್ನು (Fever Clinic) ತೆರೆಯಲಾಗಿದ್ದು ಅವುಗಳ ಪ್ರಯೋಜನವನ್ನು ಸಾರ್ವಜನಿಕರು ಪಡೆಯಲು […]

ರಾಜ್ಯದಲ್ಲಿ ಕೊರೊನಾ ಭೀತಿ : ಆರೋಗ್ಯ ಇಲಾಖೆಯಿಂದ ಮಾಹಿತಿ ಪಡೆದ ಸಿಎಂ ಬಿಎಸ್‌ ಯಡಿಯೂರಪ್ಪ

Tuesday, March 10th, 2020
bsy

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ ಸರ್ಕಾರ ಎಚ್ಚೆತ್ತುಕೊಂಡಿದ್ದು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆಗೆ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಮಾಹಿತಿ ಪಡೆದುಕೊಂಡಿದ್ದಾರೆ. ಕೊರೊನಾ ತಡೆಗಟ್ಟುವಲ್ಲಿ ಕೈಗೊಂಡಿರುವ ಮುನ್ನೆಚ್ಚರಿಕಾ ಕ್ರಮಗಳ ಕುರಿತಾಗಿ ಬಿಎಸ್‌ವೈ ಮಾಹಿತಿ ಸಂಗ್ರಹ ಮಾಡಿದರು. ಹಿರಿಯ ಅಧಿಕಾರಿಗಳ ಜೊತೆಗೆ ಫೋನ್‌ನಲ್ಲಿ ಮಾತುಕತೆ ನಡೆಸಿದ ಬಿಎಸ್‌ವೈ ಪ್ರತಿಯೊಂದ ವಿವರಗಳನ್ನು ಕಲೆಹಾಕಿದ್ದಾರೆ. ಈ ವೇಳೆ ಅಧಿಕಾರಿಗಳಿಗೆ ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ ಸಿಎಂ ಸರ್ಕಾರದ ಕಡೆಯಿಂದ ಎಲ್ಲಾ ರೀತಿಯ […]

ಮಂಗಳೂರು : ಕೊರೋನಾ ಪರೀಕ್ಷೆ ನಡೆಸುವಂತೆ ಶಿಕ್ಷಕರಿಂದ ಒತ್ತಡ ; ದೂರು

Wednesday, March 4th, 2020
Corona

ಮಂಗಳೂರು : ಜಿಲ್ಲೆಯ ಕೆಲವು ಖಾಸಗೀ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸಾಮಾನ್ಯ ಜ್ವರ ಬಂದರೂ, ಕೊರೋನಾ ಪರೀಕ್ಷೆ ನಡೆಸುವಂತೆ ಶಿಕ್ಷಕರು ಒತ್ತಡ ಹೇರುತ್ತಿರುವ ಬಗ್ಗೆ ದೂರುಗಳು ಬಂದಿದ್ದು, ಇದನ್ನು ನಿಲ್ಲಿಸಲು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಸೂಚಿಸಿದ್ದಾರೆ. ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋರೋನಾ ರೋಗ ಸಂಬಂಧ ಆರೋಗ್ಯ ಇಲಾಖೆ ಅಧಿಕಾರಿಗಳು, ವೈದ್ಯಕೀಯ ಕಾಲೇಜುಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೊರೋನಾ ಹಿನ್ನೆಲೆಯಲ್ಲಿ ಶಿಕ್ಷಣ ಸಂಸ್ಥೆಗಳಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆಗಳ ಬಗ್ಗೆ ಈಗಾಗಲೇ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. […]