Blog Archive

ಸಿಎಂ ಗೆ ವಿಧಾನ ಪರಿಷತ್‌ ಸಭಾಪತಿ ಹೊರಟ್ಟಿ ಪತ್ರ

Sunday, June 6th, 2021
Horatti

ಬೆಂಗಳೂರು: ಸಿಎಂ ಯಡಿಯೂರಪ್ಪಗೆ ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಶಿಕ್ಷಕರ ಕುರಿತು ಪತ್ರ ಬರೆದಿದ್ದಾರೆ. ಅವರ ಪತ್ರದ ವಿವರ ಈ ಕೆಳಗಿನಂತಿದೆ. ರಾಜ್ಯದಲ್ಲಿ ಮಾಹಾಮಾರಿ ಕೊರೋನಾ ಸೋಂಕು ತೀವ್ರವಾಗಿ ಹರಡುತ್ತಿದ್ದ ಹಿನ್ನೆಲೆಯಲ್ಲಿ ತಮ್ಮ ನೇತೃತ್ವದ ಸರಕಾರ ಕೈಗೊಂಡ ಲಾಕ್‌ಡೌನ್ ಸಮಯೋಚಿತ ಹಾಗೂ ಅವಶ್ಯಕ ನಿರ್ಧಾರದ ಆರಂಭದ ದಿನಗಳಿಂದ ನನ್ನ ಗಮನಕ್ಕೆ ಬಂದಿರುವ ಹಲವು ವಿಷಯಗಳ ಕುರಿತು ಸಲಹೆಗಳ ರೂಪದಲ್ಲಿ ತಮಗೆ ಅನೇಕ ಪತ್ರಗಳನ್ನು ಬರೆದಿದ್ದೇನೆ. ಅವುಗಳಲ್ಲಿ ನಾನು ನೀಡಿರುವ ಬಹುತೇಕ ಸಲಹೆಗಳನ್ನು ತಾವು ಮಾನ್ಯ ಮಾಡಿ […]

ರಾಜ್ಯದಲ್ಲಿದ್ದ ರೌಡಿಸಂ ರಾಜಕಾರಣ ಕೊನೆಗೊಳಿಸಲು ಬಿಜೆಪಿಗೆ ಬಂದೆವು, ಆದರೆ ಕಡೆಗಣಿಸಿದರು : ಎಚ್.ವಿಶ್ವನಾಥ್

Tuesday, December 1st, 2020
HVishwanath

ಬೆಂಗಳೂರು: ನನಗೂ ಪರಿಷತ್ ಚುನಾವಣೆಗೆ ಟಿಕೆಟ್ ನೀಡಿದ್ದರೆ ಮಂತ್ರಿ ಆಗುತ್ತಿದ್ದೆಆದರೆ ಕಡೆಗಣಿಸಿದರು  ನಮ್ಮಿಂದಲೇ ಸರ್ಕಾರ ಬಂದರೂ ನಮ್ಮ ಜೊತೆ ನಿಲ್ಲಲಿಲ್ಲ ಎಂದು ಬಿಜೆಪಿ ನಾಯಕರ ವಿರುದ್ಧ  ಎಚ್.ವಿಶ್ವನಾಥ್ ಅಸಮಧಾನ ಹೊರ ಹಾಕಿದ್ದಾರೆ. ಹೈ ಕೋರ್ಟ್ ತೀರ್ಪಿನ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿದ್ದ ರೌಡಿಸಂ ರಾಜಕಾರಣ, ಕುಟುಂಬ ರಾಜಕಾರಣ ಕೊನೆಗೊಳಿಸಲು ಬಿಜೆಪಿಗೆ ಬಂದೆವು. ಕ್ಷಿಪ್ರ ಕ್ರಾಂತಿ ನಡೆದು ಬಿಜೆಪಿ ಸರ್ಕಾರ ಬಂತು. ನಾವು ಮಂತ್ರಿ ಆಗಬೇಕು ಎಂದು ಬಯಸಿ ಸರ್ಕಾರ ಬೀಳಿಸಲಿಲ್ಲ. ಕೆಲವರು ಅನಾವಶ್ಯಕವಾಗಿ ಮಾತನಾಡುತ್ತಿದ್ದಾರೆ ಎಂದರು. […]

ಅಭಿವೃದ್ಧಿ ವೇಗ ಹೆಚ್ಚಿಸಲು ಎರಡೂ ಸದನಗಳಲ್ಲಿ ಬಹುಮತ ಬೇಕು: ಸದಾನಂದಗೌಡ

Tuesday, October 27th, 2020
Sadananda Gowda

ಬೆಂಗಳೂರು: ಅಭಿವೃದ್ದೀಯ ವೇಗ ಹೆಚ್ಚಿಸಲು ಸರ್ಕಾರಕ್ಕೆ ಮೇಲ್ಮನೆಯಲ್ಲಿಯೂ ಬಹುಮತ ಬೇಕು. ಇಲ್ಲವಾದರೆ ಅನಗತ್ಯ ಅಡಚಣೆ ಉಂಟಾಗುತ್ತದೆ. ಈ ಮುಂಚೆ ನರೇಂದ್ರ ಮೋದಿ ನೇತೃತ್ವದ ನಮ್ಮ ಕೇಂದ್ರ ಸರ್ಕಾರಕ್ಕೆ ರಾಜ್ಯಸಭೆಯಲ್ಲಿ ಬಹುಮತ ಇಲ್ಲದೆ ಅನೇಕ ಕ್ರಾಂತಿಕಾರಕ ಮಸೂದೆಗಳು ವಿಳಂಬಗೊಂಡವು. ಆ ಪರಿಸ್ಥಿತಿ ರಾಜ್ಯ ಬಿಜೆಪಿ ಸರ್ಕಾರಕ್ಕೆ ಬರಬಾರದು. ಹಾಗಾಗಿ ವಿಧಾನ ಪರಿಷತ್‌ ಚುನಾವಣೆಯಲ್ಲಿ ಪಕ್ಷದ ಎಲ್ಲ ನಾಲ್ವರು ಅಭ್ಯರ್ಥಿಗಳನ್ನೂ ಗೆಲ್ಲಿಸಿ ಎಂದು ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಸಚಿವ ಡಿ ವಿ ಸದಾನಂದ ಗೌಡ ಅವರು ಕರೆ ನೀಡಿದ್ದಾರೆ. […]

ರಾಜ್ಯಸಭಾ ಸ್ಥಾನದ ಆಕಾಂಕ್ಷಿ ಹೊರತು ವಿಧಾನ ಪರಿಷತ್ ಸ್ಥಾನದ ಆಕಾಂಕ್ಷಿಯಲ್ಲ : ಕೆ. ಪ್ರಕಾಶ್ ಶೆಟ್ಟಿ

Sunday, June 14th, 2020
prakash-shetty

ಬೆಂಗಳೂರು : ನಾನು ರಾಜ್ಯ ಸಭಾ ಸ್ಥಾನದ ಆಕಾಂಕ್ಷಿಯಾಗಿದ್ದೆ. ಆದರೆ ವಿಧಾನ ಪರಿಷತ್ ಸದಸ್ಯ ಸ್ಥಾನದ ಆಕಾಂಕ್ಷಿ ಅಲ್ಲ ಎಂದು ಎಂಆರ್‌ಜಿ ಗ್ರೂಪ್‌ನ ಸ್ಥಾಪಕಾಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ ಸ್ಪಷ್ಟಪಡಿಸಿದ್ದಾರೆ. ನಾನು ಕಳೆದ ಹಲವಾರು ವರ್ಷಗಳಿಂದ ಭಾರತೀಯ ಜನತಾ ಪಕ್ಷದಲ್ಲಿ ಗುರುತಿಸಿಕೊಂಡಿದ್ದು, ಇತ್ತೀಚೆಗೆ ನನಗೆ ರಾಜ್ಯಸಭಾ ಸದಸ್ಯರ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಹೈಕಮಾಂಡ್‌ಗೆ ಶಿಫಾರಸ್ಸು ಮಾಡಿತ್ತು. ಆದರೆ ಪಕ್ಷದ ಸಂಘಟನೆ ಹಾಗೂ ಬೆಳವಣಿಗೆಯ ದೃಷ್ಟಿಯಿಂದ ಇಬ್ಬರು ಹಿರಿಯ ಕಾರ್ಯಕರ್ತರನ್ನು ಹೈಕಮಾಂಡ್ […]

ವೃತ್ತಿ ಕೌಶಲ್ಯ ಬೆಳೆಸಿಕೊಂಡು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಿ : ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ ಸಲಹೆ

Tuesday, February 4th, 2020
kawshalya

ಮಡಿಕೇರಿ : ವಿಜ್ಞಾನ ಮತ್ತು ತಂತ್ರಜ್ಞಾನ, ವ್ಯಾಪಾರ, ವಾಣಿಜ್ಯ ಹೀಗೆ ಹಲವು ಕ್ಷೇತ್ರಗಳಲ್ಲಿ ಉದ್ಯೋಗ ಅವಕಾಶಗಳು ವಿಫುಲವಾಗಿದ್ದು, ಆ ನಿಟ್ಟಿನಲ್ಲಿ ಯುವ ಜನರು ವೃತ್ತಿ ಕೌಶಲ್ಯ ಬೆಳೆಸಿಕೊಳ್ಳುವಂತಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುನಿಲ್ ಸುಬ್ರಮಣಿ ಅವರು ಸಲಹೆ ನೀಡಿದ್ದಾರೆ. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ನೆಲೆಸಿರುವಂತಹ ಉದ್ಯೋಗಾಕಾಂಕ್ಷಿಗಳಿಗೆ ’ಯುವ ಕೌಶಲ್ಯ’ ಯೋಜನೆಯಡಿಯಲ್ಲಿ ಮೃದು ಕೌಶಲ್ಯ ಹಾಗೂ ಉದ್ಯೋಗವನ್ನು ಪಡೆಯಲು ಬೇಕಾದ ಅವಶ್ಯಕ ಕೌಶಲ್ಯದ ಬಗ್ಗೆ ನಗರದ ಸರ್ಕಾರಿ […]

ಪುರಾತನ ಶ್ರೀ ಕಾಟೋಳಪ್ಪ ದೇವಾಲಯದ ಪುನರ್ ನಿರ್ಮಾಣ ಕಾರ್ಯ ಆರಂಭ : 25 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿ

Tuesday, January 21st, 2020
temple

ಮಡಿಕೇರಿ : ಮುಕೋಡ್ಲುವಿನ ಆವಂಡಿ ಗ್ರಾಮದಲ್ಲಿ ಸುಮಾರು ಐದು ವರ್ಷಗಳ ಹಿಂದೆ ಮರಬಿದ್ದು ಹಾನಿಗೀಡಾಗಿದ್ದ ಪುರಾತನ ಶ್ರೀಕಾಟೋಳಪ್ಪ ದೇವಾಲಯದ ಪುನರ್ ನಿರ್ಮಾಣಕ್ಕೆ ಕಾಲ ಕೂಡಿ ಬಂದಿದ್ದು, ಭೂಮಿಪೂಜೆ ನೆರವೇರಿಸಲಾಗಿದೆ. ವಿಧಾನ ಪರಿಷತ್ ಸದಸ್ಯರಾದ ಶಾಂತೆಯಂಡ ವೀಣಾಅಚ್ಚಯ್ಯ ಅವರು ಭೂಮಿ ಪೂಜೆ ನೆರವೇರಿಸಿ ಮಾತನಾಡಿ ದೇವಾಲಯದ ಅಭಿವೃದ್ಧಿಗೆ ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಸುಮಾರು 25 ಲಕ್ಷ ರೂ. ವೆಚ್ಚದಲ್ಲಿ ದೇವಾಲಯ ನಿರ್ಮಾಣಗೊಳ್ಳಲಿದ್ದು, ಸರ್ಕಾರದಿಂದ ಈಗಾಗಲೇ ರೂ.18 ಲಕ್ಷ ಅನುದಾನ ಬಿಡುಗಡೆಯಾಗಿದೆ. ಅನುದಾನ ತರುವಲ್ಲಿ ಪ್ರಮುಖ ಪಾತ್ರ […]

ರಾಜ್ಯದಲ್ಲಿ ವಿದ್ಯುತ್ ಅಭಾವವಿಲ್ಲದಂತೆ ಕ್ರಮ : ಡಿ.ಕೆ.ಶಿವಕುಮಾರ್

Wednesday, February 7th, 2018
D-K-Shivkumar

ಬೆಂಗಳೂರು : ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ವಿದ್ಯುತ್ ಅಭಾವ ತಲೆದೋರದಂತೆ ಮಾಡಿಕೊಳ್ಳಲಾಗುವುದು ಎಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್ ವಿಧಾನ ಪರಿಷತ್‍ನಲ್ಲಿ ಭರವಸೆ ನೀಡಿದ್ದಾರೆ. ಪ್ರಶ್ನೋತ್ತರ ಕಲಾಪದಲ್ಲಿ ಮೋಟಮ್ಮ ಅವರ ಪರವಾಗಿ ಐವನ್ ಡಿಸೋಜಾ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ರೈತರಿಗೆ ಕೈಗಾರಿಕೆಗಳಿಗೆ ಸೇರಿದಂತೆ ಯಾರಿಗೂ ಯಾವುದೇ ಕಾರಣಕ್ಕೂ ವಿದ್ಯುತ್ ಅಭಾವ ತಲೆದೋರದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು. ಪ್ರಸ್ತುತ ರಾಜ್ಯದಲ್ಲಿ ಸರಾಸರಿ ವಿದ್ಯುತ್ ಬೇಡಿಕೆ ಪ್ರಮಾಣ 10 ಸಾವಿರ ಮೆಗಾ ವ್ಯಾಟ್‍ಗಳಾಗಿದ್ದು, ಕಳೆದ ಜನವರಿ ತಿಂಗಳಲ್ಲಿ […]

ಮೋಜು – ಮಾಂಸಕ್ಕಾಗಿ 3 ವರ್ಷಗಳಲ್ಲಿ 262 ಕಾಡು ಪ್ರಾಣಿಗಳ ಹತ್ಯೆ : ರೈ

Thursday, February 9th, 2017
Rai

ಬೆಂಗಳೂರು: ಮೋಜು ಹಾಗೂ ಮಾಂಸಕ್ಕಾಗಿ ಕಳೆದ 3 ವರ್ಷಗಳಲ್ಲಿ 262 ಕಾಡು ಪ್ರಾಣಿಗಳನ್ನು ಹತ್ಯೆ ಮಾಡಲಾಗಿದೆ. ಶಿವಮೊಗ್ಗ ಮತ್ತು ಚಾಮರಾಜ ನಗರ ಜಿಲ್ಲೆಗಳಲ್ಲೇ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಕಾಡು ಪ್ರಾಣಿಗಳನ್ನು ಕೊಲ್ಲಲಾಗಿದೆ ಎಂದು ಅರಣ್ಯ ಸಚಿವ ರಮಾಮಾಥ ರೈ ಹೇಳಿದ್ದಾರೆ. ಬಿಜೆಪಿ ಎಂಎಲ್ ಸಿ ಸುನೀಲ್ ಸುಬ್ರಮಣ್ಯ ಅವರ ಪ್ರಶ್ನೆಗೆ ವಿಧಾನ ಪರಿಷತ್ ನಲ್ಲಿ ಉತ್ತರಿಸಿದ ಸಚಿವ ರಮಾನಾಥ ರೈ ರಾಜ್ಯದ 11 ಅರಣ್ಯ ವಿಭಾಗಗಳಲ್ಲಿ ಪ್ರಾಣಿಗಳನ್ನು ಕೊಲ್ಲಲಾಗಿದೆ, ಚಾಮರಾಜನಗರದಲ್ಲಿ ಅತಿ ಹೆಚ್ಚಿನ ಅಂದರೆ 90 ಪ್ರಾಣಿಗಳನ್ನು […]

ಕುವೈತ್ ಗೆ ವಿಮಾನ ಪುನಾರಂಭಿಸಲು ಐವನ್ ಡಿಸೋಜಾ ಒತ್ತಾಯ

Friday, July 25th, 2014
Ivan D souza

ಮಂಗಳೂರು : ಮಂಗಳೂರಿನಿಂದ ಕುವೈತ್ ಗೆ ನೇರ ವಿಮಾನ ರದ್ದು ಪಡಿಸಿದ್ದರ ಹಿಂದೆ ಲಾಭಿ ಕೆಲಸ ಮಾಡಿದೆ ಎಂದು ಆರೋಪಿಸಿರುವ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಖಾಸಗಿ ವಿಮಾನ ಸಂಸ್ಥೆಯ ಸಹಯೋಗ ಪಡೆದು ಕುವೈತ್ ವಿಮಾನ ಪುನಾರಂಭಿಸುವಂತೆ ಒತ್ತಾಯಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಇಂದು ಮೂಲಬೂತ ಸೌಲಭ್ಯ ಅಭಿವೃದ್ದಿ ಸಚಿವ ರೋಷನ್ ಬೇಗ್ ರಿಗೆ ಕುವೈತ್ ಗೆ ವಿಮಾನ ಆರಂಭಿಸಲು ಇರುವ ತೊಡಕುಗಳ ಬಗ್ಗೆ ಪ್ರಶ್ನಿಸಿದ್ದು, ಪ್ರಯಾಣಿಕರ ಕೊರತೆಯಿಂದ ವಿಮಾನ ರದ್ದು ಪಡಿಸಲಾಗಿದೆ ಎಂಬ ಉತ್ತರಕ್ಕೆ […]