Blog Archive

ಐಎಂಎ ವಂಚನೆ ಪ್ರಕರಣ : ಜಾಮೀನು ಪಡೆದು ಹೊರ ಬಂದ ಆರೋಪಿಗೆ ಅದ್ಧೂರಿ ಸ್ವಾಗತ; ಸಾರ್ವಜನಿಕರಿಂದ ತೀವ್ರ ಟೀಕೆ

Wednesday, October 16th, 2019
muzaahiddin

ಬೆಂಗಳೂರು : ಐಎಂಎ ವಂಚನೆ ಪ್ರಕರಣದಲ್ಲಿ ಜೈಲಿನಲ್ಲಿದ್ದ ಮುಜಾಹಿದ್ದೀನ್ ಜಾಮೀನು ಪಡೆದು ಹೊರ ಬಂದ ಬಳಿಕ ಅದ್ಧೂರಿ ಸ್ವಾಗತ ದೊರೆತಿದೆ. ಮುಜಾಹಿದ್ದೀನ್ಗೆ ಸ್ವಾಗತ ಮಾಡುವ ವೇಳೆ ಬೆಂಬಲಿಗರು ಸಂಭ್ರಮಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದಕ್ಕೆ ಸಾರ್ವಜನಿಕರಿಂದ ತೀವ್ರ ಟೀಕೆ ವ್ಯಕ್ತವಾಗಿದೆ. ಬೆಂಬಲಿಗರು ಫ್ರೆಜರ್ ಟೌನ್ ನಲ್ಲಿ ಪಟಾಕಿ‌ ಸಿಡಿಸಿ ಹಾರ ಹಾಕಿ ಸ್ವಾಗತಿಸಿದ್ದಾರೆ. ಈ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಹೈಕೋರ್ಟ್ ಏಕಸದಸ್ಯ ಪೀಠ ಮುಜಾಹಿದ್ದೀನ್ ಗೆ ಜಾಮೀನು ನೀಡಿತ್ತು. ಆತ ಅ.11ರಂದು ಜೈಲಿನಿಂದ ಬಿಡುಗಡೆಯಾಗಿದ್ದ. […]

ಸಾಮಾಜಿಕ ಜಾಲತಾಣದಲ್ಲಿ ಕೊರಗಜ್ಜ ದೈವಕ್ಕೆ ಅವಮಾನಿಸಿದ ವ್ಯಕ್ತಿ ಸನ್ನಿಧಾನದಲ್ಲಿ ಕ್ಷಮೆ ಯಾಚನೆ

Tuesday, November 7th, 2017
koragajja

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಕೊರಗಜ್ಜ ದೈವಗೆ ಅವಮಾನಿಸಿದ ವ್ಯಕ್ತಿಯು, ತುಳುನಾಡಿನ ಆರಾಧ್ಯ ಕೊರಗಜ್ಜ ದೈವ ಸನ್ನಿಧಾನಕ್ಕೆ ತೆರಳಿ, ಹರಕೆ ಒಪ್ಪಿಸಿ, ಕ್ಷಮೆ ಯಾಚಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಶಿರಸಿ ಮೂಲದ ಮನೋಜ್ ಪಂಡಿತ್ ಎಂಬಾತ ಕೆಲ ದಿನಗಳ ಹಿಂದೆ ಫೇಸ್ ಬುಕ್ ನಲ್ಲಿ ತುಳುನಾಡಿನ ಕಾರಣಿಕ ದೈವ ಎಂದೇ ನಂಬಲಾಗಿರುವ ಸ್ವಾಮಿ ಕೊರಗಜ್ಜ ಗೆ ಕೀಳು ಭಾಷೆ ಬಳಸಿ, ಬರಹ ಪೋಸ್ಟ್ ಮಾಡಿದ್ದ. ಈ ಕುರಿತು ಪೊಲೀಸ್ ಠಾಣೆಯಲ್ಲಿ ಮನೋಜ್ ಪಂಡಿತ್ ವಿರುದ್ಧ ಪ್ರಕರಣ ಕೂಡ ದಾಖಲಾಗಿತ್ತು. […]

ದೇವಿ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅಪಮಾನ ಮಾಡಿರುವುದನ್ನು ಹಿಂದೂಗಳು ಸಹಿಸಲು ಸಾಧ್ಯವಿಲ್ಲ: ಕಟೀಲ್‌

Saturday, November 4th, 2017
nalin kumar kateel

ಮಂಗಳೂರು:ಸ್ವಾಭಿಮಾನಿ ಹಿಂದೂಗಳು, ಹಿಂದೂಗಳ ಶ್ರದ್ಧಾ ಕೇಂದ್ರವಾದ ಕಟೀಲಿನ ಶ್ರೀ ದುರ್ಗಾಪರಮೇಶ್ವರಿ ದೇವಿ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅಪಮಾನ ಮಾಡಿರುವುದನ್ನು  ಸಹಿಸಲು ಸಾಧ್ಯವಿಲ್ಲ ಎಂದು ದ.ಕ. ಸಂಸದ ನಳಿನ್‌ ಕುಮಾರ್ ಕಟೀಲ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಮಾಜದಲ್ಲಿ ಅಶಾಂತಿ ಮೂಡಿಸಲು ಯತ್ನಿಸುತ್ತಿರುವ ಇಂತಹ ಮತಾಂಧರನ್ನು ಪೊಲೀಸರು ತಕ್ಷಣ ಬಂಧಿಸದಿದ್ದರೆ ಉಗ್ರ ಹೋರಾಟ ನಡೆಸಲಾಗುವುದೆಂದು ಎಚ್ಚರಿಸಿದ್ದಾರೆ. ಹಿಂದೂ ದೇವರನ್ನು ಅಪಮಾನ ಮಾಡುವ ಘಟನೆ ನಿರಂತರ ನಡೆಯುತ್ತಿದೆ. ತುಷ್ಟೀಕರಣದ ರಾಜಕೀಯ ಮಾಡುವ  ಕಾಂಗ್ರೆಸ್ ಜನಪ್ರತಿನಿಧಿಗಳು ಪೊಲೀಸ್ ಇಲಾಖೆಯ ಕಾರ್ಯದಲ್ಲಿ ಹಸ್ತಕ್ಷೇಪ ನಡೆಸುವ ಕಾರಣ […]

ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ವಿರುದ್ಧ ವ್ಯಂಗ್ಯ

Thursday, November 2nd, 2017
Face book comment

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಕುರಿತಂತೆ ವ್ಯಂಗ್ಯ ಮಾಡಿ ಸಂದೇಶವನ್ನು ಶೇರ್‌ ಮಾಡಿದ್ದಕ್ಕೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯ ಕಾನ್ಸ್‌ಸ್ಟೇಬಲ್ ರಾಜ ಶಿವಪ್ಪ ಎಂಬುವವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಅವಮಾನಿಸಿದ ಫೇಸ್‌ಬುಕ್‌ನಲ್ಲಿನ ಸಂದೇಶವನ್ನು ಶೇರ್ ಮಾಡಿಕೊಂಡಿದ್ದರು. ‘ಕೋಟ್ಯಂತರ ಹಿಂದೂ ಜನ ಆರಾಧಿಸುವ ನಾಡಿನ ಪ್ರಮುಖ ದೇವಸ್ಥಾನವನ್ನು ಮಾಂಸದ ಊಟ ಸೇವಿಸಿ ದೇವರ ದರ್ಶನ ಮಾಡಿದ ಮುಖ್ಯಮಂತ್ರಿ’ ಎಂದು ಫೇಸ್‌ಬುಕ್ ಖಾತೆಯೊಂದರಲ್ಲಿ ಹಾಕಲಾಗಿತ್ತು. ಅಲ್ಲದೇ, ‘ಮೈಲಾರಿ ಕಂಡಾಗ ಸಿಡುಕಿದ […]

ಶಾಸಕ ಮೊಯ್ದೀನ್ ಬಾವಾ ಅಧಿಕಾರಿ ಜೊತೆ ಅನುಚಿತ ವರ್ತನೆ: ಸಾಮಾಜಿಕ ಜಾಲತಾಣದಲ್ಲಿ ಘಟನೆ ವೈರಲ್

Friday, February 3rd, 2017
Moiddin-bava

ಮಂಗಳೂರು: ಶಾಸಕ ಬಿ.ಎ. ಮೊಯ್ದೀನ್ ಬಾವಾ ಅವರು ಇಲ್ಲಿನ ಕೈಗಾರಿಕಾಭಿವೃದ್ಧಿ ಅಧಿಕಾರಿ ಪ್ರಕಾಶ್ ಎನ್ನುವವರ ಜೊತೆ ಅನುಚಿತವಾಗಿ ವರ್ತಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಈ ಘಟನೆ ವೈರಲ್ c ಆಗಿದೆ. ಜೋಕಟ್ಟೆ-ಬೈಕಂಪಾಡಿ ರಸ್ತೆ ಕಾಮಗಾರಿ ವಿಚಾರದಲ್ಲಿ ಸಾರ್ವಜನಿಕರ ಜೊತೆ ಕಚೇರಿಗೆ ನುಗ್ಗಿದ ಶಾಸಕ ಮೊಯ್ದೀನ್ ಬಾವಾ ಅಧಿಕಾರಿ ಜೊತೆ ಅನುಚಿತವಾಗಿ ವರ್ತಿಸಿದ್ದಲ್ಲದೆ ಏಕವಚನದಲ್ಲಿ ಮಾತನಾಡಿ ಪ್ರಕಾಶ್ ಅವರನ್ನು ಎದ್ದು ನಿಂತು ಕ್ಷಮಾಪಣೆ ಕೇಳುವಂತೆ ಒತ್ತಾಯಿಸಿದ್ದಾರೆ ಎನ್ನಲಾಗುತ್ತಿದೆ. ಇದಕ್ಕೂ ಮುನ್ನ ಸಾರ್ವಜನಿಕರ ಜೊತೆ ಅಧಿಕಾರಿ […]

‘ಪಿಲಿಬೈಲ್ ಯಮುನಕ್ಕ’ ಚಿತ್ರದ ಪೈರಸಿ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಅಪ್‌‌ಲೋಡ್ ಮಾಡುವವರ ವಿರುದ್ಧ ದೂರು ದಾಖಲು

Tuesday, December 13th, 2016
Pilibail-yamunakka

ಮಂಗಳೂರು: ತುಳು ನಾಡಿನ್ಯಾದಂತ ಯಶಸ್ವಿ ಪ್ರದರ್ಶನ ಕಾಣುತ್ತಿರುವ ‘ಪಿಲಿಬೈಲ್ ಯಮುನಕ್ಕ’ ಚಿತ್ರದ ಪೈರಸಿ ಪ್ರಕರಣ ಬೆಳಕಿಗೆ ಬಂದಿದೆ. ಥಿಯೇಟರ್‌ನಲ್ಲಿ ದೃಶ್ಯ ಚಿತ್ರೀಕರಣ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಅಪ್‌‌ಲೋಡ್ ಮಾಡುವವರ ವಿರುದ್ಧ ದೂರು ದಾಖಲು ಮಾಡಲಾಗಿದೆ. ಮಂಗಳೂರು ತುಳು ಕಾಮಿಡಿ ವಿಡಿಯೋಸ್ ಎನ್ನುವ ಫೇಸ್‌‌‌‌ಬುಕ್ ಪೇಜ್‌‌ನಲ್ಲಿ ಸಿನಿಮಾದ ಹಾಸ್ಯ ದೃಶ್ಯಗಳನ್ನು ಒಳಗೊಂಡ ಸುಮಾರು ಮೂರು ನಿಮಿಷಗಳ ತುಣುಕಗಳನ್ನು ಹರಿಬಿಡಲಾಗಿದೆ ಎನ್ನಲಾಗಿದೆ. ಅನುಮತಿ ಇಲ್ಲದೆ ಅಪ್‌‌ಲೋಡ್ ಮಾಡಿದ ಹಿನ್ನೆಲೆಯಲ್ಲಿ ಚಿತ್ರ ತಂಡ ಮಂಗಳೂರು ಬಂದರು ಠಾಣೆಯಲ್ಲಿ ದೂರು ದಾಖಲಿಸಿದೆ. ಬೆಳ್ತಂಗಡಿಯಲ್ಲೂ […]

ಕಟೀಲು ದೇವಿಯ ಅವಹೇಳನ ಪೋಸ್ಟ್‌ ಪ್ರಕರಣ: ಮುಂಬೈನಲ್ಲಿರುವ ಫೇಸ್‌ಬುಕ್‌ ಕಚೇರಿಗೆ ಭೇಟಿ ನೀಡಿದ ಪೊಲೀಸರು

Friday, December 9th, 2016
Mumbai-facebook-office

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಿಯ ಅವಹೇಳನ ಪೋಸ್ಟ್‌ ಪ್ರಕರಣದ ತನಿಖೆಗೆ ಸಹಕರಿಸದ ಹಿನ್ನೆಲೆ ಮುಂಬೈನಲ್ಲಿರುವ ಫೇಸ್‌ಬುಕ್‌ ಕಚೇರಿಗೆ ಭೇಟಿ ನೀಡಿದ ಪೊಲೀಸರು, ಅಲ್ಲಿಯ ಸಿಬ್ಬಂದಿಗಳ ವಿಚಾರಣೆ ನಡೆಸಿದ್ದಾರೆ. ಸಾಮಾಜಿಕ ಜಾಲತಾಣ ಫೇಸ್‍ಬುಕ್‍ನಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಿಯ ಕುರಿತ ಅವಹೇಳನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಪತ್ತೆಗೆ ಫೇಸ್‍ಬುಕ್ ಅಸಹಕಾರ ತೋರಿದ ಹಿನ್ನೆಲೆ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಮಂಗಳೂರು ಪೊಲೀಸರು ಹಾಗೂ ಬೆಂಗಳೂರು ಸೈಬರ್ ಕ್ರೈಂ ಪೊಲೀಸರು ಜಂಟಿಯಾಗಿ ಮುಂಬೈನಲ್ಲಿರುವ ಫೇಸ್‍ಬುಕ್ ಕಚೇರಿಗೆ […]

ಟಿಪ್ಪು ಜಯಂತಿಯಂದು ನಿಯಮ ಮೀರಿದವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು: ಜಗದೀಶ್

Wednesday, November 9th, 2016
chandrashekhar

ಮಂಗಳೂರು: ಟಿಪ್ಪು ಜಯಂತಿಯಂದು ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಸಜ್ಜಾಗಿದೆ. ಈ ನಿಟ್ಟಿನಲ್ಲಿ ನಾಳೆ ಬೆಳಗ್ಗೆ ಆರು ಗಂಟೆಯಿಂದ ನ. 12ರ ಸಂಜೆ ಆರು ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಗದೀಶ್ ತಿಳಿಸಿದ್ದಾರೆ. ಟಿಪ್ಪು ಜಯಂತಿ ಆಚರಣೆಯಂಗವಾಗಿ ನಡೆದ ಪೂರ್ವಭಾವಿ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತಣಾಡಿದ ಅವರು, ನಿಷೇಧಾಜ್ಞೆಯಿಂದ ಯಾವುದೇ ಸಾರ್ವಜನಿಕ ಹಾಗೂ ಮದುವೆ ಅಥವಾ ಇನ್ನಿತರ ಕಾರ್ಯಕ್ರಮಗಳಿಗೆ ಧಕ್ಕೆಯಾಗುವುದಿಲ್ಲ. ಆದರೆ, ಕೋಮು ಪ್ರಚೋದನಕಾರಿ ಭಾಷಣ, ಪ್ರತಿಭಟನೆಯಂತಹ ಕಾರ್ಯಕ್ರಮಗಳಿಗೆ ನಿಷೇಧ […]

ಕಟೀಲು ಪರಮೇಶ್ವರಿ ದೇವರನ್ನು ಅವಹೇಳನ ಮಾಡಿದ ಕಿಡಿಗೇಡಿಗಳ ವಿರುದ್ಧ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ: ಖಾದರ್

Tuesday, September 6th, 2016
Khadar

ಮಂಗಳೂರು: ಯಾವುದೇ ಧಮ೯,ದೇವರನ್ನು ನಿಂದಿಸುವುದು ಅಥವಾ ಅವಹೇಳನ ಮಾಡುವುದು ಸಹಿಸಲು ಸಾಧ್ಯವಿಲ್ಲ. ಅಂತಹ ಕಿಡಿಗೇಡಿಗಳ ವಿರುದ್ಧ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಆಹಾರ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ‌ ಹೇಳಿಕೆ ನೀಡಿರುವ ಅವರು ಕಟೀಲು ಪರಮೇಶ್ವರಿ ದೇವಸ್ಥಾನದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಟೀಕೆಗಳನ್ನು ಬರೆದಿರುವುದು ಅಕ್ಷಮ್ಯ ಅಪರಾಧ. ನಿಜವಾದ ಆರೋಪಿಗಳನ್ನು ಪತ್ತೆ ಹಚ್ಚಲು ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ. ಫೇಸ್‌ಬುಕ್‌ನಲ್ಲಿ ಈ ರೀತಿ ಬರೆದ ಆರೋಪಿ ಮುಸ್ಲಿಂ ಆಗಿದ್ದರೆ […]