ಸಾಲ ಮರುಪಾವತಿಗೆ ಬ್ಯಾಂಕ್‌ ಅಧ್ಯಕ್ಷರ ಕಿರುಕುಳ : ಸಾಲಗಾರ ವಿಡಿಯೋ ಮಾಡಿ ಆತ್ಮಹತ್ಯೆ

Wednesday, December 18th, 2024
Manohar Perera

ಮಂಗಳೂರು : ಮಂಗಳೂರು ಕೆಥೋಲಿಕ್ ಬ್ಯಾಂಕ್‌ನಲ್ಲಿ ಸಾಲ ಪಡೆದ ಪೆರ್ಮಂಕಿ ಗ್ರಾಮದ ಮನೋಹರ ಪಿರೇರಾ (47) ಎಂಬವರು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಕೆಥೋಲಿಕ್ ಬ್ಯಾಂಕ್‌ನ ಅಧ್ಯಕ್ಷ ಅನಿಲ್ ಲೋಬೊ ಅವರನ್ನು ಮಂಗಳೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಉಳಾಯಿಬೆಟ್ಟು ಕುಟಿನ್ಹೋ ಪದವು ನಿವಾಸಿ ಮನೋಹರ್ ಪಿರೇರಾ(47) ತನ್ನ ಸಾವಿಗೆ ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ಕಿರುಕುಳ ಕಾರಣವೆಂದು ವಿಡಿಯೋ ಮಾಡಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ತನ್ನ […]