ದ.ಕ. ಜಿಲ್ಲೆಯ ಮೂರು ತಾಲೂಕು ಒಟ್ಟುಗೂಡಿ ಪುತ್ತೂರು ಜಿಲ್ಲೆ ರಚನೆಯಾಗಬೇಕು: ಹೋರಾಟ ಸಮಿತಿ ಒತ್ತಾಯ
Friday, November 16th, 2018ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೂರು ತಾಲೂಕುಗಳು ಒಟ್ಟುಗೂಡಿ ಪ್ರತ್ಯೇಕ ಪುತ್ತೂರು ಜಿಲ್ಲೆ ರಚನೆಯಾಗಬೇಕು ಎಂಬ ಒತ್ತಾಯ ಕೇಳಿಬಂದಿದೆ. ಈಗಾಗಲೇ ಈ ಕುರಿತು ಹೋರಾಟ ಸಮಿತಿಯನ್ನೂ ರಚಿಸಲಾಗಿದೆ ಎನ್ನಲಾಗುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿದ್ದ ಉಡುಪಿ ಜಿಲ್ಲೆಯನ್ನು ಸರ್ಕಾರ ಪ್ರತ್ಯೇಕ ಜಿಲ್ಲೆಯಾಗಿ ಘೋಷಿಸಿದ ಬಳಿಕ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಐದು ತಾಲೂಕುಗಳಿವೆ. ಇದರಲ್ಲಿ ಪುತ್ತೂರು, ಬೆಳ್ತಂಗಡಿ, ಸುಳ್ಯ ತಾಲೂಕುಗಳನ್ನು ಸೇರಿಸಿ ಪ್ರತ್ಯೇಕ ಪುತ್ತೂರು ಜಿಲ್ಲೆ ಮಾಡಬೇಕೆಂಬ ಕೂಗು ಕೇಳಿಬಂದಿದೆ. ಇದಕ್ಕಾಗಿ ಈ ಭಾಗದ ಪ್ರಮುಖರು ಒಂದು ಹಂತದ ಸಭೆಯನ್ನು […]