ಅರೆಭಾಷೆ ಸಾಹಿತ್ಯ ಸಮ್ಮೇಳನದಲ್ಲಿ ಆಕರ್ಷಕ ವಸ್ತು ಪ್ರದರ್ಶನ
Monday, February 24th, 2020ಮಡಿಕೇರಿ : ಅರೆಭಾಷೆ ಸಾಹಿತ್ಯ ಸಮ್ಮೇಳನದಲ್ಲಿ ಕವಿಗೋಷ್ಠಿ ಮತ್ತು ವಿಚಾರ ಮಂಡನೆಗಳ ಜೊತೆಗೆ ವೇದಿಕೆಯ ಮತ್ತೊಂದು ಬದಿಯಲ್ಲಿ ಸ್ಥಾಪಿತವಾಗಿದ್ದ ವಸ್ತು ಪ್ರದರ್ಶನ ಮಳಿಗೆಗಳು ಸಾಹಿತಿಗಳು, ಮಕ್ಕಳು, ಸಾರ್ವಜನಿಕರನ್ನು ಸೂಜಿಗಲ್ಲಿನಂತೆ ಸೆಳೆಯುವಲ್ಲಿ ಯಶಸ್ವಿಯಾಯಿತು. ನೂರಾರು ವರ್ಷಗಳ ಇತಿಹಾಸವಿರುವ ಅರೆಭಾಷೆ ಮಾತನಾಡುವ ಜನಾಂಗದವರು ಹಿಂದಿನ ಕಾಲದಲ್ಲಿ ಬಳಸುತ್ತಿದ್ದ ಅನೇಕ ವಸ್ತುಗಳನ್ನು ಇಲ್ಲಿ ಪ್ರದರ್ಶನಕ್ಕಿಡಲಾಗಿತ್ತು. ಇದರ ಜೊತೆಗೆ ಪುಸ್ತಕ ಪ್ರೇಮಿಗಳಿಗಾಗಿ ಪುಸ್ತಕ ಮಳಿಗೆ, ಚಿತ್ರಕಲೆ, ಅನ್ವಯಿಕ ಕಲೆಗಳಲ್ಲಿ ಆಸಕ್ತಿ ಹೊಂದಿದವರಿಗಾಗಿ ಮಂಗಳೂರಿನ ಮಹಾಲಸ ಕಾಲೇಜ್ ಆಫ್ ವಿಶ್ಯುವಲ್ ಆರ್ಟ್ ವತಿಯಿಂದ ಮಳಿಗೆಗಳನ್ನು […]