ಲಾಕ್ ಡೌನ್ ಸಂಕಷ್ಟದ್ದ ರೈತನಿಂದ 3000 ಕೆಜಿ ಈರುಳ್ಳಿ ಖರೀದಿಸಿದ ನಟ ಉಪೇಂದ್ರ

Monday, May 17th, 2021
onion

ಹಿರಿಯೂರು: ಲಾಕ್ ಡೌನ್ ನಿಂದ ಬೆಳೆದ ಬೆಳೆ ಮಾರಲಾಗದೆ ಸಂಕಷ್ಟದಲ್ಲಿದ್ದ ಹಿರಿಯೂರು ತಾಲ್ಲೂಕಿನ ಪಟ್ರೇಹಳ್ಳಿ ಗ್ರಾಮದ ಮಹೇಶ್ ಅವರ 60 ಚೀಲ ಈರುಳ್ಳಿಯನ್ನು ನಟ ಉಪೇಂದ್ರ ಖರೀದಿಸಿದ್ದಾರೆ. ಲಾಕ್ ಡೌನ್ ವೇಳೆ ವ್ಯಾಪಾರವಾಗದೇ ಸಂಕಷ್ಟದಲ್ಲಿರುವ ರೈತರಿಗೆ ನಟ ಉಪೇಂದ್ರ ಅವರು ” ನಮಗೆ ಅವಶ್ಯಕತೆ ಇರುವ ಬೆಳೆಯನ್ನು ನಿಮ್ಮ ಬಳಿ ಸೂಕ್ತ ಬೆಲೆಗೆ ಕೊಂಡು ಬೇಕಿರುವವರಿಗೆ ಹಂಚುತ್ತೇವೆ” ಎಂದು ತನ್ನ ಮೊಬೈಲ್ ನಂಬರ್ ನೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಕರೆ ನೀಡಿದ್ದರು. ಇದನ್ನು ಗಮನಿಸಿದ ಮಹೇಶ್ ಉಪೇಂದ್ರ ಅವರಿಗೆ ಕರೆ ಮಾಡಿ ವಿಚಾರಿಸಿ […]

ಕೊರೋನಾ ಮಾರಕ ರೋಗ ಬರದಂತೆ ತಡೆಯಲು ಇಲ್ಲಿದೆ ನಾಟಿ ಔಷಧಿ !

Tuesday, March 10th, 2020
cm-ibrahim

ಬೆಂಗಳೂರು:  ರೋಗಿಯ ರಕ್ತ ಪರೀಕ್ಷೆ ನಡೆಸಿ ಕೊರೋನಾ ಪತ್ತೆಹಚ್ಚುವುದರಲ್ಲಿ ಆತ ಸಾವನ್ನಪ್ಪಿರುತ್ತಾನೆ. ನಮ್ಮಲ್ಲಿ ಕೊರೋನಾ ತಪಾಸಣೆ ಕೇಂದ್ರಗಳಿಲ್ಲ. ಚೀನಾ ಸೇರಿ ಅನೇಕ ದೇಶದಲ್ಲಿರುವಂತೆ ತಪಾಸಣಾ ಕೇಂದ್ರ ಸ್ಥಾಪನೆ ಆಗಬೇಕು. ರಾಜ್ಯದಲ್ಲಿ ಕೊರೋನಾ ಹಾವಳಿ ತಡೆಯಲು ಸರ್ಕಾರ ಗಂಭೀರ ಕ್ರಮ ತೆಗೆದುಕೊಳ್ಳಬೇಕು ಎಂದು ಮಾಜಿ ಸಚಿವರು ಅಭಿಪ್ರಾಯ ಪಟ್ಟರು. ಇಷ್ಟೇ ಅಲ್ಲದೆ ಕೊರೋನಾ ವೈರಸ್ ದಾಳಿಯಿಂದ  ದೇಶದ ಆರ್ಥಿಕತೆಗೆ ಹೊಡೆತ ಬಿದ್ದಿದ್ದು ಪ್ರಧಾನಿ ನರೇಂದ್ರ ಮೋದಿ ಈ ಬಗ್ಗೆ ಕಾಳಜಿವಹಿಸಬೇಕು ಎಂದು ಇಬ್ರಾಹಿಂ ಹೇಳಿದ್ದಾರೆ. ನಾಟಿ ಔಷಧಿ ಕೊರೋನಾ ಮಾರಕ […]

ಗೋದಾಮುಗಳಲ್ಲಿ 50 ಕ್ವಿಂಟಾಲ್ ಈರುಳ್ಳಿ ದಾಸ್ತಾನು ಮಿತಿಗೊಳಿಸಿ : ಜಿಲ್ಲಾಧಿಕಾರಿ

Tuesday, December 10th, 2019
irulli

ಮೈಸೂರು : ಮುಕ್ತ ಮಾರುಕಟ್ಟೆಯಲ್ಲಿ ಮತ್ತು ಸಗಟು ಗೋದಾಮುಗಳಲ್ಲಿ ಈರುಳ್ಳಿ ದಾಸ್ತಾನಿರಿಸುವುದನ್ನು 50 ಕ್ವಿಂಟಾಲ್ ಗೆ ಮಿತಿಗೊಳಿಸಿ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಆದೇಶಿಸಿದ್ದಾರೆ. ಈ ಕುರಿತು ಅಧಿಸೂಚನೆ ಹೊರಡಿಸಿರುವ ಅವರು ಸರ್ಕಾರವು ಉಲ್ಲೇಖಿತ ಅಧಿಸೂಚನೆಯಲ್ಲಿ ಕರ್ನಾಟಕ ಅಗತ್ಯ ವಸ್ತುಗಳ ಪರವಾನಿಗೆ ಆದೇಶ 1986 ಅಡಿಯಲ್ಲಿ ಮುಕ್ತ ಮಾರುಕಟ್ಟೆಯಲ್ಲಿ ಈರುಳ್ಳಿ ಸಗಟು ಮಾರಾಟಗಾರರಲ್ಲಿ/ಡೀಲರ್ ಗಳಲ್ಲಿ/ಉತ್ಪಾದಕರಲ್ಲಿ/ಕಮಿಷನ್ ಏಜೆಂಟ್ ಗಳಲ್ಲಿ ದಾಸ್ತಾನಿನ ಮಿತಿಯನ್ನು 250ಕ್ವಿಂಟಾಲ್ ಗೆ ಹಾಗೂ ಈರುಳ್ಳಿ ಚಿಲ್ಲರೆ ಮಾರಾಟಗಾರರಲ್ಲಿ ದಾಸ್ತಾನಿನ ಮಿತಿಯನ್ನು 50ಕ್ವಿಂಟಾಲ್ ಗೆ ಮಿತಿಗೊಳಿಸಿ ಆದೇಶಿಸಲಾಗಿದೆ ಎಂದಿದ್ದಾರೆ. […]

ಹಣವನ್ನು ಬಿಟ್ಟು ಈರುಳ್ಳಿಯನ್ನೇ ಕದ್ದೊಯ್ದ ಕಳ್ಳರು

Thursday, November 28th, 2019
Erulli

ಕೊಲ್ಕತ್ತಾ : ಈರುಳ್ಳಿ ಬೆಲೆ ಶತಕ ದಾಟಿದ್ದು ದೇಶಾದ್ಯಂತ ಗ್ರಾಹಕರು ಕಣ್ಣೀರುಡುತ್ತಿದ್ದಾರೆ. ಪಶ್ಚಿಮ ಬಂಗಾಳದ ಮಿಡ್ನಾಪೂರ್ ಜಿಲ್ಲೆಯಲ್ಲಿ ಕಳ್ಳರು ಹಣವನ್ನು ಬಿಟ್ಟು ಈರುಳ್ಳಿಯನ್ನೇ ಕದ್ದೊಯ್ದ ಸ್ವಾರಸ್ಯಕರ ಘಟನೆ ನಡೆದಿದೆ. ಹೌದು. ಪಶ್ಚಿಮ ಬಂಗಾಳದಲ್ಲಿ ಒಂದು ಕಿಲೋ ಈರುಳ್ಳಿ ದರ 100 ರೂ. ಗಡಿ ದಾಟಿದ್ದು ರೈತರ ಮೊಗದಲ್ಲಿ ಮಂದಹಾಸವಿದ್ದರೇ ಗ್ರಾಹಕರ ಮೊಗದಲ್ಲಿ ಕಣ್ಣಿರನ್ನು ತರಿಸಿದೆ. ಇದನ್ನೇ ಬಂಡವಾಳ ಮಾಡಿಕೊಂಡ ಕಳ್ಳರು ನಗದಿಗಿಂತ ಈರುಳ್ಳಿಯೇ ಹೆಚ್ಚು ಬೆಲೆಬಾಳುತ್ತದೆಯೆಂದರಿತು ತರಕಾರಿ ಅಂಗಡಿಯೊಂದಕ್ಕೆ ಕನ್ನ ಹಾಕಿದ್ದಾರೆ. ಅಕ್ಷಯ್ ಎಂಬ ವ್ಯಾಪರಿಯೊಬ್ಬ ಈರುಳ್ಳಿ […]

ಭಾರೀ ಮಳೆಯಿಂದಾಗಿ ಈರುಳ್ಳಿ ಬೆಲೆ ಕುಸಿತ: ರೈತರು ಕಂಗಾಲು

Friday, September 28th, 2018
onion-cost

ಚಿಕ್ಕಮಗಳೂರು: ಕಳೆದ ಮೂರು ವರ್ಷದ ಹಿಂದೆ ಬಂಪರ್ ಬೆಳೆಯಿಂದಾಗಿ ರೈತರಿಗೆ ಹೆಚ್ಚಿನ ಲಾಭ ತಂದುಕೊಟ್ಟಿದ್ದ ಈರುಳ್ಳಿ ಈ ಬಾರಿ ರೈತರಿಗೆ ಕಣ್ಣೀರು ತರಿಸಿದೆ. ಚಿಕ್ಕಮಗಳೂರಿನ ಬಯಲುಸೀಮೆ ಭಾಗದಲ್ಲಿ ಬೆಳೆದ ಶೇ. 50 ರಷ್ಟು ಈರುಳ್ಳಿ ಈ ಬಾರಿಯ ಅತಿಯಾದ ಮಳೆಯಿಂದ ಸಂಪೂರ್ಣ ಹಾನಿಯಾಗಿತ್ತು. ಸದ್ಯ ಮಾರುಕಟ್ಟೆಯಲ್ಲಿ ಈರುಳ್ಳಿ ಧಾರಣೆ ಕೆಜಿಗೆ 3 ರಿಂದ 4 ರೂ. ಕುಸಿತ ಕಂಡಿರೋದು ಈರುಳ್ಳಿ ಬೆಳೆಗಾರರನ್ನ ಕಂಲಾಗಿಸಿದೆ. ಹೌದು, ಬಿರು ಬಿಸಿಲಲ್ಲಿ ಈರುಳ್ಳಿ ಚೀಲ ರೆಡಿ ಮಾಡ್ತಿರೋ ರೈತರ ಮನದಲ್ಲಿ ಈಗ […]