Blog Archive

ಕಟ್ಟಡ ಕಾರ್ಮಿಕರಿಗೆ ಸಹಾಯಧನ: ಮುಖ್ಯಮಂತ್ರಿಗಳಿಂದ ಚಾಲನೆ

Sunday, June 6th, 2021
Construction-workers

ಬೆಂಗಳೂರು: ಕೋವಿಡ್ – 19 ಎರಡನೇ ಅಲೆಯನ್ನು ನಿಯಂತ್ರಿಸಲು ಸರ್ಕಾರ ವಾಣಿಜ್ಯ ಮತ್ತಿತರ ಚಟುವಟಿಕೆಗಳಿಗೆ ನಿರ್ಬಂಧಗಳನ್ನು ವಿಧಿಸುವುದು ಅನಿವಾರ್ಯವಾಗಿತ್ತು. ಈ ನಿರ್ಬಂಧದಿಂದಾ ಉಂಟಾದ ಆರ್ಥಿಕ ಸಂಕಷ್ಟವನ್ನು ಪರಿಹರಿಸಲು ಪ್ಯಾಕೇಜ್ ಘೋಷಣೆ ಮಾಡಿರುವ ಸರ್ಕಾರ, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಸರ್ಕಾರದಿಂದ ಘೋಷಣೆ ಮಾಡಲಾದ ಸಹಾಯಧನವನ್ನು ನೇರ ನಗದು ವರ್ಗಾವಣೆ ಮೂಲಕ ಜಮೆ ಮಾಡುವ ಕಾರ್ಯಕ್ಕೆ ಇಂದು ಮುಖ್ಯಮಂತ್ರಿಗಳು ಚಾಲನೆ ನೀಡಿದರು. ಇಂದು ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾದಲ್ಲಿ ಈ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಮುಖ್ಯಮಂತ್ರಿಗಳು […]

ಚರ್ಮ ವೃತ್ತಿಯಲ್ಲಿ ತೊಡಗಿಸಿಕೊಂಡಿರುವ ಕೆಲಸಗಾರರಿಗೆ ಕೋವಿಡ್-19 ಪರಿಹಾರ ಕ್ಕೆ ಅರ್ಜಿ ಆಹ್ವಾನ

Thursday, June 3rd, 2021
Charma kuteera

ಬೆಂಗಳೂರು : ಜಗತ್ತಿನಾದ್ಯಂತ ಕೊರೋನಾ ವೈರಾಣು ವ್ಯಾಪಕವಾಗಿ ಹರಡಿ ಮನುಕುಲವನ್ನೇ  ಘಾಸಿಗೊಳಿಸಿದೆ. ಈ ವೈರಾಣು ಹರಡಂತೆ ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ದಿಟ್ಟ ನಿರ್ಧಾರ ಕೈಗೊಂಡು 2ನೇ ಬಾರಿ ರಾಜ್ಯದ್ಯಂತ ಲಾಕ್‍ಡೌನ್ ಜಾರಿಗೊಳಿಸಲಾಗಿದೆ. ಇದರಿಂದ ಜನಜೀವನ ಸ್ಥಗಿತಗೊಂಡಿದ್ದು, ಸಣ್ಣ ಪುಟ್ಟ ಉದ್ಯೂಗಗಳಲ್ಲಿ ತೊಡಗಿಕೊಂಡು ಜೀವನ ನಿರ್ವಹಣೆ ಮಾಡುತ್ತಿದ್ದ ಬಡ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುತ್ತವೆ. ಇವರಲ್ಲಿ ರಾಜ್ಯದ್ಯಂತ ಚರ್ಮಗಾರಿಕೆ ವೃತ್ತಿಯಲ್ಲಿ ತೊಡಗಿ, ರಸ್ತೆ ಬದಿ ಹೋಟೆಲ್ ಹಾಗೂ ಬಸ್ ನಿಲ್ದಾಣಗಳ ಮುಂಭಾಗ ಕುಳಿತು ಪಾದರಕ್ಷೆ […]

ಕೋವಿಡ್ ನಿರ್ವಹಣೆ ಕುರಿತು ಶಾಸಕರು, ಸಂಸದರೊಂದಿಗೆ ಸಿಎಂ ಸಂವಾದ

Saturday, May 29th, 2021
cm talk

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಮೈಸೂರು, ಹಾಸನ, ಬೆಳಗಾವಿ, ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳ ಸಂಸದರು ಮತ್ತು ಶಾಸಕರೊಂದಿಗೆ ವಿಡಿಯೋ ಸಂವಾದ ನಡೆಸಿ ಕೋವಿಡ್ – 19ರ ಸೋಂಕು ತಡೆಗಟ್ಟುವ ಕುರಿತಂತೆ ಚರ್ಚೆ ನಡೆಸಿದರು. ಎರಡೂವರೆ ಗಂಟೆಗೂ ಹೆಚ್ಚು ಕಾಲ ನಡೆದ ಈ ಸಭೆಯಲ್ಲಿ ಕೋವಿಡ್ ನಿರ್ವಹಣೆಯಲ್ಲಿ ಎದುರಾಗುತ್ತಿರುವ ಸಮಸ್ಯೆಗಳು, ಸವಾಲುಗಳ ಕುರಿತು ಮುಕ್ತವಾಗಿ ಚರ್ಚಿಸಲಾಯಿತು. ಪಾಸಿಟಿವಿಟಿ ದರ ಶೇಕಡ 10ಕ್ಕಿಂತ ಕಡಿಮೆ ಮಾಡುವಂತೆ ಸೂಚಿಸಲಾಯಿತು. ಅಂತೆಯೇ ಮರಣ ಪ್ರಮಾಣ ರಾಜ್ಯದಲ್ಲಿ ಶೇಕಡ […]

ಮಾವು ಬೆಳೆಗಾರರಿಂದ ಗ್ರಾಹಕರಿಗೆ ನೇರ ಮಾರಾಟ

Wednesday, May 26th, 2021
Mega Media logo

ಬೆಂಗಳೂರು : ಕಳೆದ ವರ್ಷದಂತೆ ಈ ವರ್ಷವೂ ಸಹ ಕೋವಿಡ್-19ನ ಲಾಕ್‍ಡೌನ್ ಸಮಯದಲ್ಲಿ ರೈತರ ಸಹಾಯಕ್ಕಾಗಿ ಜಿ.ಕೆ.ವಿ.ಕೆ. ಮುಖ್ಯದ್ವಾರದಲ್ಲಿರುವ ಕೃಷಿ ತಂತ್ರಜ್ಞಾನ ಮಾಹಿತಿಕೇಂದ್ರದಲ್ಲಿ ಪ್ರಾರಂಭಿಸಲಾಗಿದೆ ಎಂದು ಕೃ.ವಿ.ವಿ. ಬೆಂಗಳೂರಿನ ವಿಸ್ತರಣಾ ನಿರ್ದೇಶಕರಾದ ಡಾ. ಎನ್. ದೇವಕುಮಾರ್‍ರವರು ತಿಳಿಸಿದರು. ಅವರು ಇಂದು ಜಿಕೆವಿಕೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾವು ಬೆಳೆಗಾರರಿಂದ ಗ್ರಾಹಕರಿಗೆ ನೇರ ಮಾರಾಟ ಯೋಜನೆಗೆ ಚಾಲನೆ ನೀಡಿ ಮಾತನಾಡಿ ಕೃಷಿ ವಿಶ್ವವಿದ್ಯಾನಿಲಯದ ಉಚಿತ ದೂರವಾಣಿ ಸಂಖ್ಯೆ 18004250571ಗೆ ಕರೆ ಮಾಡಿ ಕೃಷಿ ತಾಂತ್ರಿಕ ಮಾಹಿತಿ ಮತ್ತು ಮಾರುಕಟ್ಟೆ ಬಗ್ಗೆ ಮಾಹಿತಿಪಡೆಯಬಹುದು. […]

ಕಾರ್ಪೋರೇಟ್ ಕಂಪನಿಗಳು ಸರ್ಕಾರದೊಂದಿಗೆ ಕೈಜೋಡಿಸಲು ಮುಖ್ಯಮಂತ್ರಿ ಮನವಿ

Wednesday, May 26th, 2021
goldman

ಬೆಂಗಳೂರು : ಕೋವಿಡ್-19 ಸವಾಲಿನ ಪರಿಸ್ಥಿತಿಯನ್ನು ತಂದೊಡ್ಡಿದ್ದು, ಈ ಹೋರಾಟದಲ್ಲಿ ಕಾರ್ಪೋರೇಟ್ ಕಂಪನಿಗಳು ಸರ್ಕಾರಗಳೊಂದಿಗೆ ಕೈಜೋಡಿಸಿ ಆರೋಗ್ಯ ಸೇವಾ ವ್ಯವಸ್ಥೆಯನ್ನು ಬಲಿಷ್ಠಗೊಳಿಸುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮನವಿ ಮಾಡಿದರು. ಗೋಲ್ಡ್ ಮನ್ ಸಾಕ್ಸ್ ಕಂಪನಿಯ ವತಿಯಿಂದ ರಾಜ್ಯದಲ್ಲಿ ಕೋವಿಡ್ ನಿರ್ವಹಣೆಗಾಗಿ 20 ಕೋಟಿ ರೂ ಮೌಲ್ಯದ ವಿವಿಧ ಸೌಲಭ್ಯಗಳನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಇಂದು ಹಸ್ತಾಂತರಿಸಲಾಯಿತು. ಈ ಸಮಯದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು ಪ್ರಸ್ತುತ ಪರಿಸ್ಥಿತಿ ಯಾವುದೇ ಯುದ್ದಕ್ಕಿಂತ ಕಡಿಮೆಯಿಲ್ಲ, ಹಾಗಾಗಿ ಈ ಕೋವಿಡ್ ಸೋಲಿಸಲು […]

ಕೋವಿಡ್ 19 ಸೋಂಕಿನ ಮೂರನೇ ಅಲೆ ಅಪಾಯಕಾರಿ ಐಎಂಎ ಎಚ್ಚರಿಕೆ

Wednesday, May 19th, 2021
ima

ನವದೆಹಲಿ: ಕೋವಿಡ್ 19 ಸೋಂಕಿನ ಮೂರನೇ ಅಲೆ ಭಾರತದಲ್ಲಿ ಹರಡುವ ಸಾಧ್ಯತೆ ಇದೆ ಎಂದು ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ಬುಧವಾರ ಎಚ್ಚರಿಸಿದ್ದು, ಅಲೆಯನ್ನು ಎದುರಿಸುವುದು ಕಷ್ಟ ಎಂದಿದೆ. ಮಕ್ಕಳು, ವಯಸ್ಸಾದವರು ಎಚ್ಚರಿಕೆಯಿಂದಿರಬೇಕು. ಲಸಿಕೆ ತೆಗೆದುಕೊಳ್ಳವಿಕೆಯೊಂದೇ ದಾರಿಯಾಗಿದೆ ಎಂದು ಸಲಹೆ ನೀಡಿದೆ. ಕೋವಿಡ್ 3ನೇ ಅಲೆಯ ಅಪಾಯದ ಹಿನ್ನೆಲೆಯಲ್ಲಿ ಸಾಮೂಹಿಕವಾಗಿ ಕೋವಿಡ್ ಲಸಿಕೆಯನ್ನು ನೀಡುವುದು ಉತ್ತಮ ಎಂದು ಐಎಂಎ ಸಲಹೆ ನೀಡಿದೆ. ಒಂದು ವೇಳೆ ನಾವು ಬೃಹತ್ ಪ್ರಮಾಣದಲ್ಲಿ ಲಸಿಕೆ ನೀಡಲು ಮುಂದಾಗದಿದ್ದರೆ, ಮೂರನೇ ಅಲೆಯನ್ನು ಎದುರಿಸುವುದು ಕಷ್ಟ ಮತ್ತು […]

ಗ್ರಾಮಸ್ಥರ ಕೋವಿಡ್ ಪರೀಕ್ಷೆ ನಡೆಸಲು ಬರಲಿವೆ ಮೊಬೈಲ್ ಕ್ಲಿನಿಕ್

Monday, May 17th, 2021
R Ashoka

ಬೆಂಗಳೂರು : ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ, ಕೋವಿಡ್ 19 ತಪಾಸಣೆ ಹಾಗೂ ಸಾಮಾನ್ಯ ಆರೋಗ್ಯ ಪರೀಕ್ಷೆ ಕೈಗೊಳ್ಳುವ ವೈದ್ಯಾಧಿಕಾರಿಗಳ ತಂಡವಿರುವ ಮೊಬೈಲ್ ವಾಹನಗಳು ಹಳ್ಳಿಗಳಿಗೆ ತೆರಳಲಿದ್ದು, ಈ ವಿನೂತನ ಕಾರ್ಯಕ್ರಮಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಕಂದಾಯ ಸಚಿವ ಆರ್ ಅಶೋಕ್ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಆರ್ ಅಶೋಕ್ ಅವರು,”ಹೆಚ್ಚುತ್ತಿರುವ ಕೋವಿಡ್ ಸೋಂಕಿನ ಪರಿಣಾಮ ಗ್ರಾಮಾಂತರ ಪ್ರದೇಶಗಳಲ್ಲಿನ ಜನರು ಆತಂಕಿತಗೊಂಡಿದ್ದು, ಅವರ ಆರೋಗ್ಯ ಕಾಳಜಿ ಮತ್ತು ಅವರಿಗೆ […]

ಕೋವಿಡ್-19 ರ ಎರಡನೇ ಅಲೆ ನಿರೀಕ್ಷೆಗೂ ಮೀರಿ ಎಲ್ಲೆಡೆ ಸಂದಿಗ್ದತೆಯನ್ನು ಹುಟ್ಟು ಹಾಕಿದೆ : ಬಿ ಎಸ್ ಯಡಿಯೂರಪ್ಪ

Saturday, May 15th, 2021
BS Yediturappa

ಬೆಂಗಳೂರು : ಕೋವಿಡ್-19 ರ ಮೊದಲನೇ ಅಲೆಗಿಂತಲೂ ಎರಡನೇ ಅಲೆ ನಿರೀಕ್ಷೆಗೂ ಮೀರಿ ಎಲ್ಲೆಡೆ ಸಂದಿಗ್ದತೆಯನ್ನು ಹುಟ್ಟು ಹಾಕಿದೆ. ಅಲ್ಲದೆ, ವೈದ್ಯ, ಅರೆ ವೈದ್ಯಕೀಯ ಸಿಬ್ಬಂದಿ ಹಾಗೂ ಆರೋಗ್ಯ ಕಾರ್ಯಕರ್ತರ ಮೇಲೆ ಹೆಚ್ಚಿನ ಒತ್ತಡ ಹೇರಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಇಲ್ಲಿ ಇಂದು ಅಭಿಪ್ರಾಯಪಟ್ಟರು. ಕೋವಿಡ್ ಚಿಕಿತ್ಸಾ ಕಾರ್ಯದಲ್ಲಿ ತೊಡಗಿರುವ ರಾಜ್ಯದ ವಿವಿಧ ಜಿಲ್ಲಾ ಹಾಗೂ ತಾಲ್ಲೂಕು ವೈದ್ಯರೊಂದಿಗೆ ವೀಡಿಯೋ ಸಂವಾದ ನಡೆಸಿ ವೈದ್ಯರ ಕಾರ್ಯಚಟುವಟಿಕೆಗಳ ಕುರಿತು ಮಾಹಿತಿ ಪಡೆದರಲ್ಲದೆ, ವೈದ್ಯರು ಸೇವೆಯಲ್ಲಿ […]

ಬ್ಯಾರಿ ಪರಿಷತ್, ಮಂಗಳೂರು ಅಧ್ಯಕ್ಷ ಕೋವಿಡ್ ಸೋಂಕಿಗೆ ಬಲಿ

Friday, May 7th, 2021
Aboobakkar

ಮಂಗಳೂರು : ಅಖಿಲ ಭಾರತ ಬ್ಯಾರಿ ಪರಿಷತ್, ಮಂಗಳೂರು ಇದರ ಅಧ್ಯಕ್ಷ ಅಬೂಬಕರ್ ಪಲ್ಲಮಜಲು(48) ಕೋವಿಡ್-19 ಸೋಂಕಿನ ಚಿಕಿತ್ಸೆ ಫಲಿಸದೆ  ಶುಕ್ರವಾರ ಬೆಳಗ್ಗೆ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ಅವರು ಕಳೆದ ಐದು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು  ಶುಕ್ರವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಅವರು ಕೊನೆಯುಸಿರೆಳೆದರೆಂದು ಕುಟುಂಬದ ಮೂಲಗಳು ತಿಳಿಸಿವೆ. ಇವರು ಹಲವು ಸಾಮಾಜಿಕ ಸಂಘ-ಸಂಸ್ಥೆಗಳಲ್ಲಿ ಗುರುತಿಸಿಕೊಂಡಿದ್ದರು ಅಲ್ಲದೆ ಪಲ್ಲಮಲಜು ಹಯಾತುಲ್ ಇಸ್ಲಾಂ ಜುಮಾ ಮಸೀದಿಯ ಮಾಜಿ ಅಧ್ಯಕ್ಷರಾಗಿದ್ದರು. ಮೃತರು ಪತ್ನಿ, ಮೂವರು ಪುತ್ರಿಯರು […]

ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಕೊರೋನಾ ಸೋಂಕು ದೃಢ

Saturday, April 10th, 2021
kota

ಉಡುಪಿ : ಕೇರಳ ರಾಜ್ಯದಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಊರಿಗೆ ಬಂದಿದ್ದ ರಾಜ್ಯ ಮುಜರಾಯಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಕೋವಿಡ್-19 ಸೋಂಕು ತಗಲಿರುವುದು ದೃಢಪಟ್ಟಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು, ಕೋವಿಡ್-19 ಪಾಸಿಟಿವ್ ಕಾರಣಕ್ಕೆ ನಾನು ಆಸ್ಪತ್ರೆಗೆ ದಾಖಲಾಗಿದ್ದು, ಅನಿವಾರ್ಯವಾದರೆ ದೂರವಾಣಿ ಮೂಲಕ ಸಂಪರ್ಕಿಸಬಹುದು. ಒಂದೆರಡು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್-19 ಟೆಸ್ಟ್ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ. […]