Blog Archive

ಸರ್ಕಾರಿ ಬಸ್ ಓಡಾಟ ನಡೆಸುತ್ತಿದ್ದ ರೂಟ್ ನಲ್ಲಿ ಖಾಸಗಿ ಬಸ್ ಓಡಾಟ

Wednesday, April 7th, 2021
private Bus

ಮಂಗಳೂರು: ಕೋವಿಡ್ -19 ಪ್ರಕರಣಗಳು ಹೆಚ್ಚುತ್ತಿರುವ ಮತ್ತು ವಿದ್ಯಾರ್ಥಿಗಳು ಪರೀಕ್ಷೆಗಳನ್ನು ಬರೆಯಲು ತಯಾರಿ ನಡೆಸುತ್ತಿರುವ ಸಮಯದಲ್ಲಿ ರಸ್ತೆ ಸಾರಿಗೆ ನಿಗಮದ ನೌಕರರ ಮುಷ್ಕರ ಸರಿಯಲ್ಲ ಎಂದು ಕರ್ನಾಟಕ ರಾಜ್ಯ ಖಾಸಗಿ ಬಸ್ ಮಾಲೀಕರ ಸಂಘ ಹೇಳಿದೆ. ಮಂಗಳೂರಿನಲ್ಲಿ ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಮಾಲೀಕರು ಮುಷ್ಕರದ  ದಿನ ಸೇವೆಗಳನ್ನು ಒದಗಿಸಿದ್ದಾರೆ. ಸಾರಿಗೆ ಸಂಸ್ಥೆ ನೌಕರರು ನಡೆಸುತ್ತಿರುವ ಮುಷ್ಕರವು ಮಂಗಳೂರಿನಲ್ಲಿ ಪ್ರಯಾಣಿಕರ ಮೇಲೆ ಯಾವುದೇ ಪರಿಣಾಮ ಬೀರಿಲ್ಲ.  ನಗರದಲ್ಲಿ ಖಾಸಗಿ ಬಸ್ ಗಳೇ  ಓಡಾಟ ನಡೆಸುತ್ತಿದೆ. ಗ್ರಾಮೀಣ ಭಾಗದಲ್ಲಿ ಮತ್ತು ಜಿಲ್ಲೆಯ ದೂರದೂರಿಗೆ ಮತ್ತು […]

ದಕ್ಷಿಣ ಕನ್ನಡ ಜಿಲ್ಲಾಡಳಿತದ ಆದೇಶಕ್ಕೆ ಜಿಲ್ಲಾ ಉಸ್ತುವಾರಿ ಮಂತ್ರಿ ಕೋಟ ಸ್ಪಷ್ಟನೆ

Tuesday, March 30th, 2021
srinivasa poojary

ಮಂಗಳೂರು : ಕೋವಿಡ್ 19 ನ್ನು ಪರಿಣಾಮ ಕಾರಿಯಾಗಿ ನಿಯಂತ್ರಿಸುವ ದೃಷ್ಟಿಯಿಂದ ದ. ಕ ಜಿಲ್ಲಾಧಿಕಾರಿಯವರು ಹೊರಡಿಸಿರುವ ಆದೇಶಕ್ಕೆ ಸಾರ್ವಜನಿಕರು ಆತಂಕ ವ್ಯಕ್ತ ಪಡಿಸಿದ್ದು, ಮರು ಸ್ಪಷ್ಟನೆ ನೀಡಲು ಜಿಲಾಧಿಕಾರಿಯವರಿಗೆ ಸೂಚನೆ ಕೊಟ್ಟಿರುವುದಾಗಿ ದ. ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಹೇಳಿದ್ದಾರೆ. ಜಿಲ್ಲೆಯಲ್ಲಿ ಯಕ್ಷಗಾನ, ಕೋಲಾ, ನೇಮ, ಪೂಜೆ, ಜಾತ್ರೆ ಮತ್ತು ಸಾಂಪ್ರದಾಯಿಕ ಧಾರ್ಮಿಕ ಕಾರ್ಯಕ್ರಮಗಳು ಕೋವಿಡ್ 19 ನಿಯಮಪಾಲನೆಯೊಂದಿಗೆ ನಡೆಸಬಹುದಾಗಿದೆ ಎಂದು ದ. ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಹೇಳಿದ್ದಾರೆ. […]

ಮಹಾರಾಷ್ಟ್ರದಲ್ಲಿ ಕೊರೋನಾ ವೈರಸ್ ಎರಡನೇ ಅಲೆ ಪ್ರಾರಂಭದ ಸೂಚನೆ

Tuesday, March 16th, 2021
Maharastra

ನವದೆಹಲಿ:  ಮಹಾಮಾರಿ ಕೊರೋನಾ ವೈರಸ್ ಎರಡನೇ ಅಲೆ ಮಹಾರಾಷ್ಟ್ರದಲ್ಲಿ ಮತ್ತೆ ಪ್ರಾರಂಭ ವಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಎಚ್ಚರಿಸಿದೆ. ದೇಶದಲ್ಲಿ ಇಂದು ಸತತ 6ನೇ ದಿನವೂ 20,000ಕ್ಕೂ ಹೆಚ್ಚು ಕರೋನಾ ವೈರಸ್ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಕಟ್ಟುನಿಟ್ಟಾದ ನಿಯಂತ್ರಣ ತಂತ್ರಗಳತ್ತ ಗಮನಹರಿಸುವಂತೆ ಕೇಂದ್ರ ಸರ್ಕಾರ ಅತಿ ಹೆಚ್ಚು ಕೊರೋನಾ ಪೀಡಿತ ಮಹಾರಾಷ್ಟ್ರಕ್ಕೆ ಸೂಚಿಸಿದೆ. ದೇಶದಲ್ಲಿ ಮಂಗಳವಾರ 24,492 ಹೊಸ ಕೋವಿಡ್ -19 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 1.14 ಕೋಟಿಗೆ ತಲುಪಿದೆ ಎಂದು ಕೇಂದ್ರ ಆರೋಗ್ಯ […]

ಕ್ರಿಸ್ಮಸ್ ಹಾಗೂ ಹೊಸ ವರ್ಷ ಸರಳ ಸಂಭ್ರಮಾಚರಣೆ – ಜಿಲ್ಲಾಧಿಕಾರಿ ಆದೇಶ

Tuesday, December 22nd, 2020
chritsmas

ಮಂಗಳೂರು : ಕೋವಿಡ್-19 ಸಾಂಕ್ರಾಮಿಕ ಸೋಂಕನ್ನು ನಿಯಂತ್ರಿಸಲು ಸರಕಾರವು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದು, ಕೋವಿಡ್-19 ಸೋಂಕಿನ ಎರಡನೇ ಅಲೆ ಹರಡುವಿಕೆಯನ್ನು ನಿಯಂತ್ರಿಸಲು ಇನ್ನೂ ಹೆಚ್ಚು ಕಟ್ಟುನಿಟ್ಟಾಗಿ ಕ್ರಮಗಳನ್ನು ಕೈಗೊಳ್ಳಬೇಕಾದ ಅನಿವಾರ್ಯತೆ ಮತ್ತು ಅವಶ್ಯಕತೆ ಇರುವ ಹಿನ್ನೆಲೆ ಕ್ರಿಸ್ಮಸ್ ಹಾಗೂ 2021ರ ಹೊಸ ವರ್ಷ ಸಂಭ್ರಮಾಚರಣೆಯನ್ನು ಸರಳವಾಗಿ ಸಾಕಷ್ಟು ಮುಂಜಾಗೃತಾ ಕ್ರಮಗಳನ್ನು ಅನುಸರಿಸಿ ಆಚರಿಸಬೇಕು. ಅದರಂತೆ ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ 26(1)(2)(3) ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ […]

ನವೆಂಬರ್ ಅಂತ್ಯದಲ್ಲಿ ಗ್ರಾ ಪಂ ಚುನಾವಣೆಗೆ ದಿನ ನಿಗದಿ

Monday, November 23rd, 2020
Basavaaraj

ಬೆಂಗಳೂರು: ಗ್ರಾಪಂ ಚುನಾವಣೆಗೆ ಆಯೋಗ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ. ಮೂರು ವಾರಗಳಲ್ಲಿ ವೇಳಾಪಟ್ಟಿ ಪ್ರಕಟಿಸುವಂತೆ ಹೈಕೋರ್ಟ್‌ ಆದೇಶಿಸಿದೆ. ಅದರಂತೆ ಕ್ರಮಕೈಗೊಳ್ಳಲಾಗುವುದು. ಪ್ರತಿ ಜಿಲ್ಲೆಯಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಸಲಾಗುವುದು ಎಂದು  ರಾಜ್ಯ ಚುನಾವಣಾ ಆಯುಕ್ತ ಡಾ. ಬಿ. ಬಸವರಾಜು ಹೇಳಿದ್ದಾರೆ. ನವೆಂಬರ್‌ ಕೊನೇ ವಾರದಲ್ಲಿ ಚುನಾವಣೆಗೆ ದಿನಾಂಕ ಘೋಷಣೆ ಮಾಡುವುದಾಗಿ ಹೈಕೋರ್ಟ್‌ಗೆ ಸಲ್ಲಿಸಿದ್ದ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿದ್ದ ಸಂಭಾವ್ಯ ವೇಳಾಪಟ್ಟಿಯಲ್ಲಿ ಚುನಾವಣಾ ಆಯೋಗ ಹೇಳಿತ್ತು. ಈ ಮಧ್ಯೆ ಮೂರು ವಾರಗಳಲ್ಲಿ ಚುನಾವಣೆಗೆ ಅಧಿಸೂಚನೆ ಹೊರಡಿಸುವಂತೆ ಹೈಕೋರ್ಟ್‌ ನ.13ಕ್ಕೆ ಆದೇಶಿಸಿದೆ. ಅದರಂತೆ ಡಿಸೆಂಬರ್‌ […]

ಪ್ಲಾಸ್ಮಾ ದಾನಮಾಡಿ ಕೋವಿಡ್ -19 ರೋಗಿಯ ಜೀವ ಉಳಿಸಿದ ಪೊಲೀಸ್

Saturday, September 12th, 2020
Ranjith Police

ಪುತ್ತೂರು : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಡಿ ಆರ್ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿರುವ ಹೆಡ್ ಕಾನ್‌ಸ್ಟೆಬಲ್ ರಂಜಿತ್ ಕುಮಾರ್ ರೈ ಅವರು ಪ್ಲಾಸ್ಮಾ ದಾನ ಮಾಡುವ ಮೂಲಕ ಕೋವಿಡ್ -19 ರೋಗಿಯ ಜೀವ ಉಳಿಸಿದ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕೆಯ್ಯಾರು ಗ್ರಾಮದ ಮೂಲದ ರಂಜಿತ್ ಕುಮಾರ್, ದೇರಳಕಟ್ಟೆಯ ಕೆ ಎಸ್ ಹೆಗ್ಡೆ ಆಸ್ಪತ್ರೆಗೆ ದಾಖಲಾದ ಬ್ರಹ್ಮವಾರ ಮೂಲದ ಪೂರ್ಣಾನಂದ ಎಂಬ ನಿವೃತ್ತ ಬ್ಯಾಂಕ್ ಅಧಿಕಾರಿ ತನ್ನ ರಕ್ತದಲ್ಲಿ ಪ್ಲಾಸ್ಮಾ ಎಣಿಕೆ ಕಡಿಮೆಯಾದ ನಂತರ ಜೀವನಕ್ಕಾಗಿ ಹೋರಾಡುತ್ತಿದ್ದಾರೆ ಎಂದು […]

ತಂಬಾಕು ಹಾಗೂ ಪಾನ್ ಮಸಾಲ ಜಗಿದು ಉಗಿಯುವುದರಿಂದ ಕೋವಿಡ್ 19, ದಂಡ ವಸೂಲಿ

Saturday, August 22nd, 2020
siptting

ಮಂಗಳೂರು : ಸಾರ್ವನಿಕ ಸ್ಥಳಗಳಲ್ಲಿ ಜಗಿಯುವ ತಂಬಾಕು ಹಾಗೂ ಪಾನ್ ಮಸಾಲ ಉತ್ಪನ್ನಗಳನ್ನು ಜಗಿದು ಉಗಿಯುವುದರಿಂದ ಕೋವಿಡ್ 19 ಹಾಗೂ ಇತರೆ ಸಾಂಕ್ರಾಮಿಕ ರೋಗಗಳು ಇತರರಿಗೆ ಹರಡುವ ಸಂಭವ ಹೆಚಾಗ್ಚಿದು, ಆ ಕಾರಣದಿಂದ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ಪೊಲೀಸ್ ಇಲಾಖೆ ತಂಡವು ಆಗಸ್ಟ್ 20 ರಂದು ಸಾರ್ವಜನಿಕ ಸ್ಥಳಗಳಲ್ಲಿ ಜಗಿಯುವ ತಂಬಾಕು ಉತ್ಪನ್ನಗಳ ಸೇವನೆ ಹಾಗೂ COTPA-2003 ಕಾಯಿದೆ ಉಲ್ಲಂಘನೆ ವಿರುದ್ಧ ಉರ್ವಸ್ಟೋರ್ ಪರಿಸರದಲ್ಲಿ ಕಾರ್ಯಚರಣೆ ನಡೆಸಿ 21 ಕೇಸ್ ದಾಖಲಿಸಿ ಸುಮಾರು ರೂ. […]

ಸೆಪ್ಟೆಂಬರ್ 23 ರೊಳಗೆ ರಾಜ್ಯ ವಿಧಾನಸಭಾ ಅಧಿವೇಶನ : ಸಭಾಧ್ಯಕ್ಷರಿಂದ ಪರಿಶೀಲನೆ

Thursday, August 6th, 2020
Kageri

ಬೆಂಗಳೂರು :ಕಳೆದ ಮಾರ್ಚ್‍ನಲ್ಲಿ ರಾಜ್ಯ ವಿಧಾನ ಸಭಾ ಅಧಿವೇಶನವು ನಡೆದಿದ್ದು, ಸಂವಿಧಾನಬದ್ದವಾಗಿ ಆರು ತಿಂಗಳ ಒಳಗೆ ಅಂದರೆ ಸೆಪ್ಟೆಂಬರ್ 23 ರೊಳಗೆ, ಮತ್ತೊಮ್ಮೆ ಸಮಾವೇಶಗೊಳ್ಳಬೇಕಿರುವ ಹಿನ್ನೆಲೆಯಲ್ಲಿ ಸದನದಲ್ಲಿ ರಾಜ್ಯ ಸಚಿವ ಸಂಪುಟದ ಸದಸ್ಯರು ಮತ್ತು ಸದನದ ಸದಸ್ಯರು, ಸದನದಲ್ಲಿ ಹಾಜರಿರುವ ಅಧಿಕಾರಿಗಳು ಹಾಗೂ ಮಾಧ್ಯಮದವರ ಆರೋಗ್ಯಕ್ಕೆ ಕೋವಿಡ್-19 ರ ಸೋಂಕು ತಗುಲದಂತೆ ಕ್ರಮ ವಹಿಸುವುದು ಹೇಗೆ ? ಎಂಬುದರ ಕುರಿತು ರಾಜ್ಯ ವಿಧಾನ ಸಭೆಯ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಇಲ್ಲಿ ಇಂದು ಸದನದಲ್ಲಿನ ವ್ಯವಸ್ಥೆಗಳನ್ನು […]

ಕೋವಿಡ್ -19 ಹಿನ್ನೆಲೆಯಲ್ಲಿ ಬಕ್ರೀದ್ ಹಬ್ಬವನ್ನು ಸರಳವಾಗಿ ಆಚರಿಸಿದ ಮುಸ್ಲಿಮರು

Friday, July 31st, 2020
eid

ಮಂಗಳೂರು : ಕೋವಿಡ್ -19 ಹಿನ್ನೆಲೆಯಲ್ಲಿ ಬಕ್ರೀದ್ ಹಬ್ಬವನ್ನು ಸರಳವಾಗಿ ಆಚರಿಸಲು ಸರಕಾರ ಹೊರಡಿಸಿದ ಮಾರ್ಗಸೂಚಿಯಂತೆ ಅಂತರ ಕಾಪಾಡುವುದರೊಂದಿಗೆ ಜುಲೈ 31 ರಂದು ಮಸೀದಿಗಳಲ್ಲಿ ಸಾಮೂಹಿಕವಾಗಿ ಮುಸ್ಲಿಮರು ನಮಾಝ್ ನಿರ್ವಹಿಸಿದರು. ಈದ್ಗಾದಲ್ಲಿ ಸಾಮೂಹಿಕ ನಮಾಝ್ ಮತ್ತು ಈದ್ ಖುತ್ಬಾಕ್ಕೆ ನಿರ್ಬಂಧ ವಿಧಿಸಲಾದ ಕಾರಣ ಇದೇ ಮೊದಲ ಬಾರಿಗೆ ಮಂಗಳೂರು ಸಹಿತ ಜಿಲ್ಲೆಯ ಯಾವುದೇ ಈದ್ಗಾಗಳಲ್ಲಿ ನಮಾಝ್, ಈದ್ ಖುತ್ಬಾ ನಡೆಯಲಿಲ್ಲ. ಬಹುತೇಕ ಮಸೀದಿಗಳಲ್ಲಿ ತಲಾ 50 ಮಂದಿಯಂತೆ ಸರದಿ ಸಾಲಿನಲ್ಲಿ ನಮಾಝ್ ನಿರ್ವಹಿಸಿದರು. 60 ವರ್ಷಕ್ಕಿಂತ ಮೇಲ್ಪಟ್ಟ ಮತ್ತು […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್ ಡೌನ್ ಮತ್ತೊಂದು ವಾರ ವಿಸ್ತರಣೆ, ಇವತ್ತು ಸಂಜೆ ನಿರ್ಧಾರ

Wednesday, July 22nd, 2020
koto Srinivas

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ  ದಿನಂಪ್ರತಿ ನೂರರ ಗಡಿ ದಾಟುತ್ತಿರುವುದರಿಂದ ಒಂದು ವಾರಗಳ ಕಾಲ ವಿಧಿಸಲಾಗಿರುವ ಲಾಕ್ ಡೌನ್ ಅನ್ನು ಮತ್ತೊಂದು ವಾರಗಳ ಕಾಲ ವಿಸ್ತರಣೆ ಮಾಡಲು ಜಿಲ್ಲೆಯ ಜನಪ್ರತಿನಿಧಿಗಳು ಒಲವು ತೋರಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಜಿಲ್ಲೆಯಲ್ಲಿ ಮತ್ತೊಂದು ವಾರಕ್ಕೆ ಲಾಕ್ ಡೌನ್ ವಿಸ್ತರಣೆ ಮಾಡಲು ಜನಪ್ರತಿನಿಧಿಗಳು, ಸಾರ್ವಜನಿಕರು ಒಲವು ತೋರಿಸುತ್ತಿದ್ದಾರೆ. ಜಿಲ್ಲಾಡಳಿತ ಈ ಬಗ್ಗೆ ಚಿಂತನೆ ನಡೆಸುತ್ತಿದೆ […]