ಉಜಿರೆ ಎಸ್.ಡಿ.ಎಂ. ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಉದ್ಘಾಟನೆ

Thursday, January 9th, 2025
SDM Higher Primary School

ಉಜಿರೆ: ಕಳೆದ ನೂರು ವರ್ಷಗಳಲ್ಲಿ ಗ್ರಾಮೀಣ ಪ್ರದೇಶದಲ್ಲಿ ಜ್ಞಾನದಾಸೋಹದ ಮೂಲಕ ಸಾವಿರಾರು ಮಂದಿ ಸಭ್ಯ, ಸುಸಂಸ್ಕೃತ ನಾಗರಿಕರನ್ನು ರೂಪಿಸಿ ಸಮಾಜಕ್ಕೆ ಅರ್ಪಿಸಿದ ಉಜಿರೆಯ ಎಸ್.ಡಿ.ಎಂ. ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಆಚರಣೆಯ ಅಂಗವಾಗಿ ವರ್ಷವಿಡಿ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಹೇಳಿದರು. ಅವರು ಗುರುವಾರ ಉಜಿರೆಯಲ್ಲಿ ಎಸ್.ಡಿ.ಎಂ. ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಮಾರಂಭವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಶಾಲೆಯ ಹಿರಿಯ ವಿದ್ಯಾರ್ಥಿಗಳು ಹಾಗೂ ಊರಿನ […]

ಓದುವ ಹವ್ಯಾಸದಿಂದ ವ್ಯಕ್ತಿತ್ವ ವಿಕಸನ : ಹುಕ್ಕೇರಿ ಸದಾಶಿವ ಮಹಾಸ್ವಾಮೀಜಿ

Saturday, August 10th, 2024
Hukkeri

ಉಜಿರೆ: ಆಟ-ಪಾಠಗಳು ಜೊತೆಯಾಗಿದ್ದಾಗ ಶಿಕ್ಷಣ ಅರ್ಥಪೂರ್ಣವಾಗಿದ್ದು ವಿದ್ಯಾರ್ಥಿಗಳು ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ. ಪುಸ್ತಕದ ಜೊತೆ ಇದ್ದಾಗ ಮಸ್ತಕದ ವಿಕಾಸವೂ ಆಗುವುದರಿಂದ ವಿದ್ಯಾರ್ಥಿಗಳು ಓದುವ ಹವ್ಯಾಸವನ್ನು ಬೆಳೆಸಿಕೊಂಡು ವ್ಯಕ್ತಿತ್ವ ವಿಕಸನ ಮಾಡಿಕೊಳ್ಳಬೇಕು ಎಂದು ಹಾವೇರಿಯ ಹುಕ್ಕೇರಿ ಮಠದ ಸದಾಶಿವ ಮಹಾಸ್ವಾಮೀಜಿ ಹೇಳಿದರು. ಅವರು ಶನಿವಾರ ಧರ್ಮಸ್ಥಳದಲ್ಲಿ ಮಹೋತ್ಸವ ಸಭಾಭವನದಲ್ಲಿ ಶಾಂತಿವನ ಟ್ರಸ್ಟ್ ನಿಂದ ಪ್ರಕಟಿಸಿದ “ಜ್ಞಾನದರ್ಶಿನಿ ಮತ್ತು ಜ್ಞಾನವರ್ಷಿಣಿ” ಪುಸ್ತಕಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಪುಸ್ತಕಗಳನ್ನು ಓದುವುದರಿಂದ ಜ್ಞಾನವೃದ್ಧಿಯೊಂದಿಗೆ ಮಸ್ತಕದ ವಿಕಾಸವೂ ಆಗುತ್ತದೆ. ಕಾಲಹರಣ ಮಾಡುವ ಮೊಬೈಲ್ ಫೋನ್ […]