ತಿರುಪತಿಯಲ್ಲಿ ವೈಕುಂಠ ಏಕಾದಶಿಗೆ ಸೇರಿದ್ದ ಭಕ್ತರ ಸಮೂಹದಲ್ಲಿ ನೂಕುನುಗ್ಗಲು ಆರು ಮಂದಿ ಸಾವು
Thursday, January 9th, 2025ಅಮರಾವತಿ : ತಿರುಪತಿಯಲ್ಲಿ ಸಂಭವಿಸಿದ ಕಾಲ್ತುಳಿತದಿಂದ ಆರು ಮಂದಿ ಸಾವನಪ್ಪಿದ್ದಾರೆ. ಘಟನೆಯಲ್ಲಿ ಹಲವು ಮಂದಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ. ಭಕ್ತಾದಿಗಳು ತಿರುಪತಿಯ ವೈಕುಂಠ ದ್ವಾರ ದರ್ಶನದ ಟಿಕೆಟ್ ತೆಗೆದುಕೊಳ್ಳುವ ವೇಳೆ ಭಾರಿ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಉಂಟಾಗಿದೆ. ಟಿಕೆಟ್ ಪಡೆದುಕೊಳ್ಳಲು ಏಕಕಾಲಕ್ಕೆ ಸಾವಿರಾರು ಮಂದಿ ನುಗ್ಗಿದ್ದರಿಂದ ಈ ದುರ್ಘಟನೆ ಸಂಭವಿಸಿದೆ. ಇದುವರೆಗೆ ಒಂದು ಮೃತದೇಹವನ್ನು ಗುರುತಿಸಲಾಗಿದೆ ಎಂದು ತಿರುಮಲ ತಿರುಪತಿ ದೇವಸ್ತಾನಮ್ಸ್ (ಟಿಟಿಡಿ) ಅಧ್ಯಕ್ಷ ಬಿಆರ್ ನಾಯ್ಡು ಹೇಳಿದ್ದಾರೆ. ಜನವರಿ 10 ರಂದು […]