ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಮಂಗಳೂರು ಆಸ್ಪತ್ರೆಯಲ್ಲಿ ಸಾವು

Tuesday, April 21st, 2020
vidya

ಮಂಗಳೂರು :  ಬಾಳುಗೋಡು ಗ್ರಾಮದ ಉಪ್ಪುಕಳದ ನಿವಾಸಿ ವಿದ್ಯಾ (20) ಬಂದ್ಯಡ್ಕ ಅವರು ಮಂಗಳವಾರ  ಮಂಗಳೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಮಂಗಳೂರಿನಲ್ಲಿ ನರ್ಸಿಂಗ್‌ ಮಾಡುತ್ತಿದ್ದ ಯುವತಿ ಇತ್ತೀಚೆಗೆ ಊರಿಗೆ ಬಂದಿದ್ದು ಮೂರು ದಿನದ ಹಿಂದೆ ಮನೆಯಲ್ಲಿ ವಿಷ ಸೇವಿಸಿದ್ದರು. ಅಸ್ವಸ್ಥಗೊಂಡ ಆಕೆಯನ್ನು ಮನೆಯವರು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಕೆ ಮಂಗಳವಾರ ಕೊನೆಯುಸಿರೆಳೆದಿರುವುದಾಗಿ ತಿಳಿದು ಬಂದಿದೆ. ಮೃತರು ಉಪ್ಪುಕಳದ ವೆಂಕಟ್ರಮಣ ಅವರ ಪುತ್ರಿಯಾಗಿದ್ದು ತಾಯಿ, ಸಹೋದರರನ್ನು ಅಗಲಿದ್ದಾರೆ.

ಬಾಳುಗೋಡುವಿನಲ್ಲಿ ನಿವೇಶನ ನೀಡಲು ಒತ್ತಾಯ : ಜಿಲ್ಲಾಧಿಕಾರಿಗಳಿಗೆ ಮನವಿ

Saturday, February 1st, 2020
manavi

ಮಡಿಕೇರಿ : ವಿರಾಜಪೇಟೆ ತಾಲೂಕಿನ ಬಾಳುಗೋಡು ಗ್ರಾಮದ ಸರಕಾರಿ ಜಾಗದಲ್ಲಿ ದಲಿತರು, ಪೌರಕಾರ್ಮಿಕರು, ಸಫಾಯಿ ಕರ್ಮಚಾರಿಗಳು, ಆದಿವಾಸಿಗಳು, ಹಿಂದುಳಿದ ವರ್ಗದವರು ನಿವೇಶನದ ಹಕ್ಕುಪತ್ರ ಮತ್ತು ಮೂಲಭೂತ ಸೌಲಭ್ಯಕ್ಕಾಗಿ ಒತ್ತಾಯಿಸಿ ಕಳೆದ 28 ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಇವರ ಬೇಡಿಕೆಗಳಿಗೆ ತಕ್ಷಣ ಸ್ಪಂದಿಸುವಂತೆ ಆಗ್ರಹಿಸಿ ಅಖಿಲ ಕರ್ನಾಟಕ ಅರುಂಧತಿಯರ್ ಮಹಾಸಭಾದ ಕೊಡಗು ಜಿಲ್ಲಾ ಘಟಕ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿತು. ಈ ಸಂದರ್ಭ ಮಾತನಾಡಿದ ಮಹಾಸಭಾದ ರಾಜ್ಯ ಉಪಾಧ್ಯಕ್ಷ ಕೆ.ಪಳನಿ ಪ್ರಕಾಶ್, ವಿರಾಜಪೇಟೆ ತಾಲೂಕಿನ ಬಾಳುಗೋಡು ಗ್ರಾಮದ […]