ಪಾಂಡೇಶ್ವರ ನ್ಯೂ ರೋಡ್ ಪರಿಶಿಷ್ಟರ ಕೊಲೊನಿಯಲ್ಲಿ ಬಿ. ಆರ್ ಅಂಬೇಡ್ಕರ್ ಜನ್ಮದಿನಾಚರಣೆ

Tuesday, April 14th, 2020
DSS

ಮಂಗಳೂರು : ಪಾಂಡೇಶ್ವರ ನ್ಯೂ ರೋಡ್ ನಲ್ಲಿರುವ ಪರಿಶಿಷ್ಟರ ಕೊಲೊನಿಯಲ್ಲಿ ಸಂವಿದಾನ ಶಿಲ್ಪಿ ಬಿ. ಆರ್ ಅಂಬೇಡ್ಕರ್ ಅವರ 129 ನೇ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. ದಸಂಸ (ಅಂಬೇಡ್ಕರ್ ವಾದ)  ಜಿಲ್ಲಾ ಪ್ರಧಾನ ಸಂಚಾಲಕರಾದ ಜಗದೀಶ್ ಪಾಂಡೇಶ್ವರ ಅವರು ಅಂಬೇಡ್ಕರ್ ಭಾವ ಚಿತ್ರಕ್ಕೆ ಹೂ ಮಾಲೆ ಹಾಕಿ ಗೌರವ ಸಮರ್ಪಿಸಿದರು

ಬಿ. ಆರ್ ಅಂಬೇಡ್ಕರ್ ಬಗ್ಗೆ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಬರಹ ಒಬ್ಬ ಅರೆಸ್ಟ್

Thursday, January 12th, 2017
deepak

ಮಂಗಳೂರು: ಎರಡು ತಿಂಗಳ ಹಿಂದೆ ಡಾ. ಬಿ. ಆರ್ ಅಂಬೇಡ್ಕರ್ ಬಗ್ಗೆ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಬರಹ ಪೋಸ್ಟ್‌ ಮಾಡಿದ್ದ ವ್ಯಕ್ತಿಯೊಬ್ಬರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ದೀಪಕ್ ಎಂಬಾತ ಬಂಧಿತ ಆರೋಪಿಯಗಿದ್ದು, ಈತ ಎರಡು ತಿಂಗಳ ಹಿಂದೆ ಅಂಬೇಡ್ಕರ್‌ ಕುರಿತು ಅವಹೇಳನಕಾರಿ ಬರಹವನ್ನು ಪೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದ. ಈ ಸಂಬಂಧ ದಲಿತ ಮುಖಂಡ ರಮೇಶ್ ಕೋಟ್ಯಾನ್ ಎಂಬುವರು ದೀಪಕ್‌ ವಿರುದ್ಧ ದೂರು ದಾಖಲಿಸಿದ್ದರು. ಮಂಗಳೂರು ಪಾಂಡೇಶ್ವರ ಠಾಣೆಯ ಪೊಲೀಸರು ದೀಪಕ್‌ನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.