ಬೆಂಗಳೂರು ರಾಜಭವನ ವೀಕ್ಷಣೆಗೆ ಸಾರ್ವಜನಿಕರಿಗೆ ಪ್ರವೇಶ

Friday, August 24th, 2018
Rajabhavana

ಬೆಂಗಳೂರು : ರಾಜಭವನ ವೀಕ್ಷಣೆಗೆ ಸಾರ್ವಜನಿಕರಿಗೆ ಗುರುವಾರ ದಿಂದ ಪ್ರವೇಶವನ್ನು ಕಲ್ಪಿಸಲಾಗಿದೆ. ಗುರುವಾರ ಸುಮಾರು 500 ಕ್ಕೂ ಹೆಚ್ಚು ಸಾರ್ವಜನಿಕರು ಭೇಟಿ ನೀಡಿದರು. ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ದೊರೆತ್ತಿದೆ. ಸಪ್ಟೆಂಬರ್ 6  ರವರೆಗೆ ಸಾರ್ವಜನಿಕರ ಭೇಟಿಗೆ ಅವಕಾಶವನ್ನು ನೀಡಲಾಗಿದ್ದು ರಾಜಭವನದ ಸೌಂದರ್ಯವನ್ನು ಸವಿಯಬಹುದಾಗಿದೆ.