ಮನಮೋಹನ್ ಸಿಂಗ್ – ಭಾರತ ಕಂಡ ಪ್ರಾಮಾಣಿಕ ಪ್ರಧಾನಿ

Friday, December 27th, 2024
Manmohan singh

ಬೆಳಗಾವಿ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಬದುಕು , ಆರ್ಥಿಕ ನೀತಿಗಳು ನಮ್ಮೆಗೆಲ್ಲ ಪ್ರೇರಣೆ. ಶ್ರೇಷ್ಠ ಆರ್ಥಿಕ ತಜ್ಞರಾಗಿದ್ದ ಅವರು, 2013-18 ರವರೆಗೆ ಕರ್ನಾಟಕದ ಆರ್ಥಿಕ ಸ್ಥಿತಿ ಉತ್ತಮವಾಗಿದೆ ಎಂದು ಬಣ್ಣಿಸಿದ್ದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಮರಿಸಿದರು. ಅವರು ಇಂದು ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ನಿಧನಕ್ಕೆ ಸಂತಾಪ ಸೂಚಿಸಿದ ಮುಖ್ಯಮಂತ್ರಿಗಳು, ಈಗಿನ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಜನಿಸಿದ ಮನಮೋಹನ್ ಸಿಂಗ್ ರವರು ಜಗತ್ತಿನ ಖ್ಯಾತ ಅರ್ಥಶಾಸ್ತ್ರಜ್ಞರಾಗಿ ಬೆಳೆದವರು. ಪಿ.ವಿ. […]

ಕಾಂಗ್ರೆಸ್‌ ಪಕ್ಷವನ್ನು ವಿಸರ್ಜಿಸಿ ಎಂದು ಮಹಾತ್ಮ ಗಾಂಧೀಜಿ ಹೇಳಿದ್ದರು

Thursday, December 26th, 2024
R Ashoka

ಬೆಂಗಳೂರು : ಸರ್ಕಾರದ ಹಣವನ್ನು ಬಳಸಿ ಬೆಳಗಾವಿಯಲ್ಲಿ ಕಾಂಗ್ರೆಸ್‌ ಸರ್ಕಾರ ತನ್ನ ಪಕ್ಷದ ಸಮಾವೇಶವನ್ನು ಮಾಡುತ್ತಿರುವುದು ಖಂಡನೀಯ. ಇದರ ವಿರುದ್ಧ ವಿಧಾನಸೌಧ ಮುಂಭಾಗ ಶುಕ್ರವಾರ ಪ್ರತಿಭಟಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಾತಂತ್ರ್ಯ ದೊರೆತ ನಂತರ ಕಾಂಗ್ರೆಸ್‌ ಪಕ್ಷವನ್ನು ವಿಸರ್ಜಿಸಿ ಎಂದು ಮಹಾತ್ಮ ಗಾಂಧೀಜಿ ಹೇಳಿದ್ದರು. ನಕಲಿ ಗಾಂಧಿಗಳು ಕಾಂಗ್ರೆಸ್‌ ಪಕ್ಷವನ್ನು ಮುನ್ನಡೆಸಿ ಈಗ ಬೆಳಗಾವಿಯಲ್ಲಿ ಸಮಾವೇಶ ಮಾಡುತ್ತಿದ್ದಾರೆ. ಗಾಂಧೀಜಿ ಬಹಳ ಸರಳವಾಗಿದ್ದರು. ಆದರೆ ಕಾಂಗ್ರೆಸ್‌ ನಾಯಕರು ಆಡಂಬರದ ಬದುಕು ನಡೆಸುತ್ತಿದ್ದಾರೆ. […]

ಸಭಾಪತಿಗಳಾಗಿ ಕಲಾಪ ನಡೆಸಿ ಸೈ ಅನ್ನಿಸಿಕೊಂಡ ಶಾಸಕ ಮಂಜುನಾಥ ಭಂಡಾರಿ!

Friday, December 13th, 2024
Manjunatha-Bhandary

ಬೆಳಗಾವಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ 154ನೇ ಚಳಿಗಾಲದ ಅಧಿವೇಶನದ 4ನೇ ದಿನವಾದ ಇಂದು ವಿಧಾನ ಪರಿಷತ್ ಸದನದಲ್ಲಿ ಸಭಾಪತಿಗಳಾಗಿ ಪರಿಷತ್ ಶಾಸಕ ಮಂಜುನಾಥ ಭಂಡಾರಿಯವರು ಯಶಸ್ವಿ ಕಲಾಪ ನಡೆಸಿಕೊಟ್ಟರು. ಗುರುವಾರದಂದು ನಡೆದ ಅಧಿವೇಶನ ಸಂದರ್ಭ ಸಭಾಪತಿ ಬಸವರಾಜ ಹೊರಟ್ಟಿ ಅವರ ಸ್ಥಾನದಲ್ಲಿ ಕುಳಿತ ಮಂಜುನಾಥ ಭಂಡಾರಿ ಅವರು ಕಲಾಪವನ್ನು ಯಶಸ್ವಿಯಾಗಿ ನಿರ್ವಹಿಸುವ ಮೂಲಕ ಸೈ ಅನ್ನಿಸಿಕೊಂಡರು. ಚಳಿಗಾಲ ಅಧಿವೇಶನ ಪ್ರಾರಂಭದ ದಿನದಿಂದಲೂ ಮಂಜುನಾಥ ಭಂಡಾರಿ ಅವರು ರಾಜ್ಯದ ಜನರ ಪರವಾಗಿ ನಾನಾ ಸಮಸ್ಯೆಗಳ ಬಗ್ಗೆ ಸದನದಲ್ಲಿ […]

“ಜಲಜೀವನ ಮಿಷನ್” ಅನುಷ್ಠಾನ ಕುರಿತು ಸರಕಾರದ ಗಮನ ಸೆಳೆದ ಶಾಸಕ ಮಂಜುನಾಥ ಭಂಡಾರಿ

Monday, December 9th, 2024
Manjunath-Bhandary-Belagavi

ಬೆಳಗಾವಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಲಜೀವನ ಮಿಷನ್ ಯೋಜನೆಯಡಿಯಲ್ಲಿ ಕಾಮಗಾರಿಗಳು ಅನುಷ್ಠಾನಗೊಳ್ಳದ ಕುರಿತು ಸರಕಾರದ ಗಮನನ್ನು ಸೆಳೆದರು. ಜಲಜೀವನ ಮಿಷನ್ ಯೋಜನೆಯಲ್ಲಿ ನೀರಿನ ಮೂಲಗಳು ಅನುಷ್ಠಾನವಾಗದ ಕುರಿತು ಪ್ರಸ್ತಾಪಿಸಿ ಶೀಘ್ರವಾಗಿ ಯೋಜನೆಗೆ ಸಂಬಂಧಿಸಿದ ನೀರಿನ ಮೂಲಗಳನ್ನು ಪ್ರಥಮವಾಗಿ ಶೋಧಿಸಿ ಅಳವಡಿಸುವ ಮೂಲಕ ಸಮರ್ಪಕ ಅನುಷ್ಠಾನಕ್ಕಾಗಿ ಶೂನ್ಯ ವೇಳೆಯಲ್ಲಿ ಸರಕಾರವನ್ನು ಒತ್ತಾಯಿಸಿದರು. ಮಳೆಗಾಲ ಮುಗಿದು ಚಳಿ ಕಾಲಿರಿಸಿದ್ದರೂ ಕರಾವಳಿಯಲ್ಲಿ […]

ಸುವರ್ಣಸೌಧದೊಳಗೆ “ಅನುಭವ ಮಂಟಪ”ದ ವೈಭವ : ಯು. ಟಿ. ಖಾದರ್ ಅವರಿಂದ ಇತಿಹಾಸದ ಮರುಸೃಷ್ಟಿ

Sunday, December 8th, 2024
Basavanna

ಮಂಗಳೂರು : ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಸನ್ಮಾನ್ಯ ಯು. ಟಿ. ಖಾದರ್ ಅವರ ನೇತೃತ್ವದಲ್ಲಿ, ಜನಮಾನಸದಲ್ಲಿ ಸದಾ ಸ್ಮರಣೀಯವಾಗಿ ಉಳಿಯುವ ಮತ್ತೊಂದು ಐತಿಹಾಸಿಕ ಕ್ಷಣವು, ಬೆಳಗಾವಿಯ ಸುವರ್ಣ ಸೌಧದಲ್ಲಿ ದಾಖಲಾಗಲಿದೆ. ವಿಶ್ವಗುರು ಶ್ರೀ ಬಸವಣ್ಣನವರು ಸ್ಥಾಪಿಸಿದ, “ವಿಶ್ವದ ಮೊದಲ ಸಂಸತ್ತು” ಎಂಬ ಖ್ಯಾತಿಯ, “ಅನುಭವ ಮಂಟಪದ” ಬೃಹತ್ ತೈಲವರ್ಣ ಚಿತ್ರ ಅನಾವರಣವು ಶ್ರೀ ಯು. ಟಿ. ಖಾದರ್ ಅವರ ಅಧ್ಯಕ್ಷತೆಯಲ್ಲಿ, ಚಳಿಗಾಲ ಅಧಿವೇಶನದ ಮೊದಲ ದಿನದಂದು, ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ಅವರ ಅಮೃತ ಹಸ್ತದಿಂದ ಅನಾವರಣಗೊಳ್ಳಲಿರುವುದು. […]

ಉತ್ತರ ಕರ್ನಾಟಕದಲ್ಲಿ ರೂ 9,461 ಕೋಟಿ ಮೊತ್ತದ ಬಂಡವಾಳ ಹೂಡಿಕೆ

Tuesday, December 12th, 2023
Belgavi

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮಂಗಳವಾರ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡುವ ಸಮಿತಿಯ ಸಭೆಯಲ್ಲಿ, ಒಟ್ಟು ರೂ 34,115 ಕೋಟಿ ಮೊತ್ತದ ಬಂಡವಾಳ ಹೂಡಿಕೆಯ 14 ಉದ್ಯಮಗಳ ಸ್ಥಾಪನೆಗೆ ಅನುಮೋದನೆ ನೀಡಲಾಯಿತು. ಇದರಿಂದ 13,308 ಜನರಿಗೆ ಉದ್ಯೋಗ ದೊರೆಯುವ ನಿರೀಕ್ಷೆ ಇದೆ. ಹೆಚ್ಚುವರಿ ರೂ 13,911 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಮಾಡುವ ಫಾಕ್ಸ್‌ಕಾನ್‌ನ ಪ್ರಸ್ತಾವನೆಯನ್ನು ಸಮಿತಿಯು ಅನುಮೋದಿಸಿದೆ. ಫಾಕ್ಸ್‌ಕಾನ್‌, ಈಗಾಗಲೇ ರಾಜ್ಯದಲ್ಲಿ ರೂ 8,000 ಕೋಟಿ ಬಂಡವಾಳ […]

ದಪ್ಪ ಆಗಿದ್ದೇನೆ ಎಂದು ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ಮಹಡಿಯಿಂದ ಜಿಗಿದು ಆತ್ಮಹತ್ಯೆ

Tuesday, November 14th, 2023
Prakruti Shetty

ಮಂಗಳೂರು : ಎಷ್ಟೇ ಪ್ರಯತ್ನ ಪಟ್ಟರು ತೂಕ ಇಳಿಸಲು ಸಾಧ್ಯವಾಗದೆ ವೈದ್ಯಕೀಯ ವಿದ್ಯಾರ್ಥಿನಿ ಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ ಎಜೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್‌ ನಲ್ಲಿ ನಡೆದಿದೆ. ಬೆಳಗಾವಿಯ ಅಥಣಿ ಮೂಲದ ಪ್ರಕೃತಿ ಶೆಟ್ಟಿ (20) ಆತ್ಮಹತ್ಯೆ ಮಾಡಿಕೊಂಡಿರುವ ಯುವತಿ. ಪ್ರಕೃತಿ ಶೆಟ್ಟಿ ಮಂಗಳೂರಿನ ಎಜೆ ಮೆಡಿಕಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಸೋಮವಾರ ಬೆಳಗಿನ ಜಾವ 3 ಗಂಟೆಗೆ ಕಾಲೇಜಿನ ಹಾಸ್ಟೆಲ್‌ ಕಟ್ಟಡದ 6ನೇ ಮಹಡಿಯಿಂದ ಜಿಗಿದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾಳೆ. ” ನಾನು ತುಂಬಾ ದಪ್ಪಾ […]

ಮಹಾಪ್ರಸಾದ ಸೇವೆಗೆ ಚಾಲನೆ ನೀಡಿ ಸ್ವತಃ ಉಣಬಡಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳಕರ

Monday, September 11th, 2023
laxmi Hebbalkar

ಬೆಳಗಾವಿ: ತಾಲೂಕಿನ ಬಾಳೇಕುಂದ್ರಿ ಬಿ ಕೆ ಗ್ರಾಮದ ಶ್ರೀ ರಾಮೇಶ್ವರ ಮಂದಿರಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಹಿರಿಯ ನಾಗರಿಕರು ಮತ್ತು ವಿಕಲಚೇತನರ ಸಬಲೀಕರಣ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರು ಭೇಟಿ ನೀಡಿ ದರ್ಶನ ಆಶೀರ್ವಾದ ಪಡೆದರು. ಶ್ರಾವಣದ ಕೊನೆಯ ಸೋಮವಾರದ ಪ್ರಯುಕ್ತ ಮಹಾಪ್ರಸಾದ ಸೇವೆಗೆ ಚಾಲನೆ ನೀಡಿದ ಅವರು, ಸ್ವತಃ ಭಕ್ತಾದಿಗಳಿಗೆ ಪ್ರಸಾದವನ್ನು ಉಣಬಡಿಸಿದರು. ಗ್ರಾಮದ ಹಿರಿಯರು, ಯುವರಾಜ ಕದಂ, ಶಂಕರಗೌಡ ಪಾಟೀಲ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗುಲಾಬಿ ಕೋಲಕಾರ, ಉಮೇಶರಾವ್ ಜಾಧವ್, ಅಪ್ಸರ್ ಜಮಾದಾರ, […]

ದೈಹಿಕ ಶಿಕ್ಷಣ ಪರಿವೀಕ್ಷಕರ ಮುಂಬಡ್ತಿ ಕುರಿತು ಶಿಕ್ಷಣ ಸಚಿವರಿಗೆ ಸಭಾಪತಿ ಪತ್ರ

Tuesday, May 25th, 2021
Basavaraj Horatti

ಬೆಂಗಳೂರು : ಸಾರ್ವಜನಿಕ ಶಿಕ್ಷಣ ಇಲಾಖೆಯ ಗ್ರೂಪ್ ‘ಬಿ’ ದೈಹಿಕ ಶಿಕ್ಷಣ ಪರಿವೀಕ್ಷಕರ ತತ್ಸಮಾನ ವೃಂದದ ಹುದ್ದೆಗಳಿಗೆ ಬಡ್ತಿ ಕೊಡಲು ಕೇವಲ ಬೆಂಗಳೂರು ಮತ್ತು ಮೈಸೂರು ಪ್ರಾಧಿಕಾರವನ್ನಾಗಿ ಮಾಡಿ ಉಳಿದ ಬೆಳಗಾವಿ ಮತ್ತು ಕಲಬುರ್ಗಿ ವಿಭಾಗಗಳನ್ನು ಬಿಟ್ಟು ಬಡ್ತಿ ನೀಡುತ್ತಿರುವ ಕುರಿತು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ ಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ. 2008 ರಿಂದ 2016 ರವರೆಗೆ ಗ್ರೇಡ್-1 ದೈಹಿಕ ಶಿಕ್ಷಣ ಶಿಕ್ಷಕರುಗಳಿಗೆ […]

ಬೆಳಗಾವಿ ಲೋಕಸಭಾ ಕ್ಷೇತ್ರದ ಸಚಿವ ಸುರೇಶ್ ಚನ್ನಬಸಪ್ಪ ಅಂಗಡಿ ವಿಧಿವಶ

Thursday, September 24th, 2020
suresh-angadi

ಬೆಂಗಳೂರು  : ಬೆಳಗಾವಿ ಲೋಕಸಭಾ ಕ್ಷೇತ್ರದ ಸಚಿವರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುರೇಶ್ ಚನ್ನಬಸಪ್ಪ ಅಂಗಡಿ ಅವರು ವಿಧಿವಶರಾಗಿದ್ದಾರೆ. 65 ವರ್ಷದ ಸುರೇಶ್ ಅಂಗಡಿ ಅವರು ಕೇಂದ್ರದಲ್ಲಿ ರೈಲ್ವೆ ಇಲಾಖೆ ರಾಜ್ಯ ಸಚಿವರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. 2 ವಾರಗಳ ಹಿಂದೆ ಟ್ವೀಟ್ ಮಾಡಿದ್ದ ಅಂಗಡಿ ಅವರು ನಾನು ಕೊರೋನಾಗೆ ತುತ್ತಾಗಿದ್ದು ನನಗೆ ಯಾವುದೇ ರೋಗಲಕ್ಷಣಗಳು ಎಂದು ಟ್ವೀಟಿಸಿದ್ದರು. ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಸುರೇಶ್ ಅಂಗಡಿ ಚಿಕಿತ್ಸೆ ಪಡೆಯುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ ಎಂದು ತಿಳಿದುಬಂದಿದೆ. 4 ಬಾರಿ ಲೋಕಸಭೆ […]