ಚಲಿಸುತ್ತಿದ್ದ ಬೊಲೆರೋ ವಾಹನದ ಮೇಲೆ ಮರ ಬಿದ್ದು ಜಖಂ
Saturday, June 15th, 2019ಸಿದ್ದಾಪುರ: ಮಾಸ್ತಿಕಟ್ಟೆಯಿಂದ ಹೊಸಂಗಡಿ ಕಡೆಗೆ ಘಾಟಿಯ ರಸ್ತೆಯಲ್ಲಿ ಚಲಿಸುತ್ತಿದ್ದ ಬೊಲೆರೋ ವಾಹನದ ಮೇಲೆ ಮರ ಬಿದ್ದು, ವಾಹನ ಜಖಂಗೊಂಡ ಘಟನೆಯು ಶುಕ್ರವಾರ ಸಂಜೆ ನಡೆದಿದೆ. ಹೊಸಂಗಡಿ ಕೆಪಿಸಿಯ ಕಚೇರಿಗೆ ಗುತ್ತಿಗೆ ಆಧಾರದ ಮೇಲೆ ಬಾಡಿಗೆ ನೀಡಿದ ಬೊಲೆರೋ ವಾಹನವು ಮಾಸ್ತಿಕಟ್ಟೆಯ ಕೆಪಿಸಿ ಕಚೇರಿಯಿಂದ ಹೊಸಂಗಡಿ ಕಡೆಗೆ ಬರುವಾಗ ಈ ಘಟನೆ ನಡೆದಿದೆ. ವಾಹನದಲ್ಲಿ ಚಾಲಕ ಮತ್ತು ಇಬ್ಬರು ಕೆಪಿಸಿ ಅಧಿಕಾರಿಗಳು ಪ್ರಯಾಣಿಸುತ್ತಿದ್ದರು. ಯಾರಿಗೂ ಅಪಾಯವಾಗಿಲ್ಲ. ಸುಮಾರು ಅರ್ಧ ತಾಸು ಕಾಲ ಹೆದ್ದಾರಿ ಬಂದ್ ಆಗಿದ್ದು, ಇತರ ವಾಹನ […]