“ಫೆ.22ರಂದು ಹೊಂಬೆಳಕು ಎರಡನೇ ಆವೃತ್ತಿಯ ಕಾರ್ಯಕ್ರಮ“ -ಮಂಜುನಾಥ ಭಂಡಾರಿ
Wednesday, February 5th, 2025
ಮಂಗಳೂರು: “ಫೆ.22ರಂದು ಸಹ್ಯಾದ್ರಿ ಕ್ಯಾಂಪಸ್ ನಲ್ಲಿ ಗ್ರಾಮ ಸ್ವರಾಜ್ ಪ್ರತಿಷ್ಠಾನದ ಆಶ್ರಯದಲ್ಲಿ ಎರಡನೇ ಆವೃತ್ತಿಯ “ಹೊಂಬೆಳಕು“ ಕಾರ್ಯಕ್ರಮ ಏರ್ಪಡಿಸಲಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 355 ಗ್ರಾಮ ಪಂಚಾಯತ್ ನ 6082 ಮಂದಿ ಚುನಾಯಿತ ಸದಸ್ಯರಿದ್ದಾರೆ. 2000-2500 ಮಂದಿ ಪಂಚಾಯತ್ ನೌಕರರಿದ್ದಾರೆ. ಅವರೆಲ್ಲರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಜಿಲ್ಲಾ ಪಂಚಾಯತಿಗಳ ಸಹಕಾರದೊಂದಿಗೆ ಹೊಂಬೆಳಕು ಕ್ರೀಡೋತ್ಸವ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ“ ಎಂದು ವಿಧಾನ ಪರಿಷತ್ ಶಾಸಕ ಹಾಗೂ ಸಂಘಟನೆಯ ಅಧ್ಯಕ್ಷರಾದ ಮಂಜುನಾಥ ಭಂಡಾರಿ ಅವರು ಪತ್ರಿಕಾಗೋಷ್ಟಿಯಲ್ಲಿ […]