ರಸ್ತೆ ಅಭಿವೃದ್ಧಿಗೆ ಜಾಗ ಬಿಟ್ಟುಕೊಡದಿದ್ದರೆ ಭೂಸ್ವಾಧೀನ – ಡಿ.ಸಿ. ಸೂಚನೆ

Tuesday, August 6th, 2019
dc

ಮಂಗಳೂರು : ಮಂಗಳೂರು ನಗರದಲ್ಲಿ ಹಲವಾರು ಪ್ರಮುಖ ರಸ್ತೆಗಳ ಅಗಲೀಕರಣ ಮತ್ತು ಅಭಿವೃದ್ಧಿ ಕಾಮಗಾರಿಗಳು ಕೆಲವು ಖಾಸಗೀ ಜಾಗದ ತಕರಾರಿನಿಂದ ಅಪೂರ್ಣಗೊಂಡಿದ್ದು, ಕೂಡಲೇ ಸಮಸ್ಯೆ ಬಗೆಹರಿಸಿ ಇಂತಹ ಕಾಮಗಾರಿಗಳನ್ನು ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ನಿರ್ದೇಶಿಸಿದ್ದಾರೆ. ಅವರು ಸೋಮವಾರ ತಮ್ಮ ಕಚೇರಿಯಲ್ಲಿ ನಡೆದ ಸ್ಮಾರ್ಟ್‍ಸಿಟಿ ಅಂತರ್ ಇಲಾಖಾ ಕ್ರಿಯಾಪಡೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಮಂಗಳೂರು ನಗರದ ಭವಿಷ್ಯದ ದೃಷ್ಠಿಯಿಂದ ಪ್ರಮುಖ ರಸ್ತೆಗಳ ಅಗಲೀಕರಣವಾಗಬೇಕಾಗಿದೆ. ನಗರದಲ್ಲಿ ಹಲವು ಪ್ರಮುಖ ರಸ್ತೆಗಳ ಅಗಲೀಕರಣ, ಫುಟ್ ಪಾತ್ ನಿರ್ಮಾಣ ಸೇರಿದಂತೆ […]

ಬಜಾಲ್-ಕಲ್ಲಗುಡ್ಡೆ ರಸ್ತೆ ಅಭಿವೃದ್ಧಿಗೆ 30 ಲಕ್ಷ ರೂಪಾಯಿ : ಶಾಸಕ ಜೆ.ಆರ್.ಲೋಬೊ

Saturday, October 21st, 2017
JR lobo

ಮಂಗಳೂರು: ಬಜಾಲ್- ಕಲ್ಲಗುಡ್ಡೆ ರಸ್ತೆಯನ್ನು ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ 30  ಲಕ್ಷ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುವುದು ಎಂದು ಶಾಸಕ ಜೆ.ಆರ್.ಲೋಬೊ ಅವರು ಹೇಳಿದರು. ಅವರು ಬಜಾಲ್-ಕಲ್ಲಗುಡ್ಡೆಯಲ್ಲಿ 30  ಲಕ್ಷ ರೂಪಾಯಿ ವೆಚ್ಚದ ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡುತ್ತಿದ್ದರು. ಮುಖ್ಯಮಂತ್ರಿಗಳು ಈ ರಸ್ತೆಯನ್ನು ಅಭಿವೃದ್ಧಿಗೊಳಿಸಲು ಅನುದಾನ ನೀಡಿದ್ದಾರೆ. ಈ ರಸ್ತೆಯನ್ನು ಮಾದರಿ ರಸ್ತೆಯನ್ನಾಗಿ ಮಾಡಬೇಕು ಎಂದು ಶಾಸಕರು ನುಡಿದರು. ಮಂಗಳೂರನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ಮುಖ್ಯಮಂತ್ರಿಗಳು ಆಸಕ್ತರಾಗಿದ್ದಾರೆ. ಅವರ ಇಚ್ಚೆಯಂತೆ ನಾವು ಜನಪ್ರತಿನಿಧಿಗಳು ಕೆಲಸ ಮಾಡಿ ಮಂಗಳೂರು ನಗರವನ್ನು ಮಾದರಿ […]