ಅಕ್ಟೊಬರ್ 24, ವಿಧಾನಪರಿಷತ್ ಚುನಾವಣೆ ಮತಗಳ ಎಣಿಕೆ : ಫಲಿತಾಂಶ ವಿಳಂಭ ಸಾಧ್ಯತೆ

Wednesday, October 23rd, 2024
vote box

ಮಂಗಳೂರು : ವಿಧಾನಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದ ಉಪಚುನಾವಣೆಯ ಮತಗಳ ಎಣಿಕೆ ಗುರುವಾರ ನಡೆಯಲಿದೆ. ನಗರದ ಸಂತ ಅಲೋಶಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಮತ ಎಣಿಕೆಗೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಲಾಗಿದೆ. ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಲಿದೆ. ಮತ ಎಣಿಕೆಗೆ ಒಂದು ಕೊಠಡಿ ವ್ಯವಸ್ಥೆ ಮಾಡಲಾಗಿದ್ದು 12 ಮೇಜುಗಳಲ್ಲಿ ಎಣಿಕೆ ನಡೆಯಲಿದೆ. ಪ್ರತಿ ಮೇಜಿಗೆ ಒಬ್ಬ ಎಣಿಕೆ ಮೇಲ್ವಿಚಾರಕ, ಒಬ್ಬರು ಸಹಾಯಕರು ಮತ್ತು ಒಬ್ಬರು “ಡಿ” ಗ್ರೂಪ್ ಸಿಬ್ಬಂದಿ […]

ವಿಧಾನಪರಿಷತ್ ಸ್ಥಾನದ ಉಪಚುನಾವಣೆ, ಮಂಗಳೂರಿನಲ್ಲಿ ಸಂಸದ ಬಸವರಾಜ ಬೊಮ್ಮಾಯಿ

Thursday, September 5th, 2024
Bommai-Mangalore

ಮಂಗಳೂರು: ದಕ್ಷಿಣ ಕನ್ನಡ-ಉಡುಪಿ ವಿಧಾನಪರಿಷತ್ ಸ್ಥಾನದ ಉಪಚುನಾವಣೆ ಹಿನ್ನೆಲೆ ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಅಭಿಪ್ರಾಯ ಸಂಗ್ರಹದ ಬಗ್ಗೆ ಮಾತನಾಡಿ, ಮುಂಬರುವ ಸ್ಥಳೀಯಾಡಳಿತದ ಪರಿಷತ್ ಕ್ಷೇತ್ರದ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಇಂದು ಸಭೆ ನಡೆಸಲಾಗಿದೆ. ಮೂಲಭೂತ ತಳಹದಿಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ನಾಯಕರು, ಹಿರಿಯರ ಜೊತೆ ಚರ್ಚಿಸಿ ಯಾವ ರೀತಿ ಚುನಾವಣಾ ಪ್ರಕ್ರಿಯೆ ಮಾಡಬೇಕು ಅಂತ ಚರ್ಚಿಸುತ್ತೇವೆ. ಈ ಬಗ್ಗೆ ವರದಿ ಕೊಡಲು ಕೋರ್ ಕಮಿಟಿಯಲ್ಲಿ ನಿರ್ಧಾರ ಆಗಿತ್ತು ಅದರಂತೆ ಮಂಗಳೂರಿಗೆ ನನ್ನನ್ನು ಕಳುಹಿಸಿ ಕೊಟ್ಟಿದ್ದಾರೆ. ಎಲ್ಲರ […]

ವಿಧಾನಪರಿಷತ್ ಉಪಸಭಾಪತಿ ಧರ್ಮೇಗೌಡರ ಅಂತ್ಯಕ್ರಿಯೆ ಸ್ವಗ್ರಾಮ ಸರಪನಹಳ್ಳಿ ತೋಟದಲ್ಲಿ

Tuesday, December 29th, 2020
dharmegowda

ಶಿವಮೊಗ್ಗ: ವಿಧಾನಪರಿಷತ್ ಉಪಸಭಾಪತಿ ಧರ್ಮೇಗೌಡರ ಮರಣೋತ್ತರ ಪರೀಕ್ಷೆ ಮುಕ್ತಾಯವಾಗಿದ್ದು, ಪಾರ್ಥಿವ ಶರೀರವನ್ನು ಸ್ವಗ್ರಾಮ ಸರಪನಹಳ್ಳಿಗೆ ತೆಗೆದುಕೊಂಡು ಹೋಗಲಾಯಿತು. ಬೆಳಗ್ಗೆ ಸುಮಾರು 9 ಗಂಟೆಯಿಂದ ಪ್ರಾರಂಭವಾದ ಮರಣೋತ್ತರ ಪರೀಕ್ಷೆ ಮಧ್ಯಾಹ್ನ 1.20 ರ ಸುಮಾರಿಗೆ ಮುಗಿದಿದೆ. ನಂತರ ಪಾರ್ಥಿವ ಶರೀರಕ್ಕೆ ರಾಷ್ಟ್ರಧ್ವಜ ಹೊದಿಸಿ ಡಿಸಿ ಕೆ.ಬಿ.ಶಿವಕುಮಾರ್ ಹೂಗುಚ್ಚವಿಟ್ಟು ಗೌರವ ವಂದನೆ ಸಲ್ಲಿಸಿದರು. ಸಚಿವ ಬಸವರಾಜ್, ಸಂಸದ ಬಿ.ವೈ.ರಾಘವೇಂದ್ರ ಸಹ ಹೂಗುಚ್ಚವಿಟ್ಟು ಅಂತಿಮ ನಮನ ಸಲ್ಲಿಸಿದರು. ನಂತರ ಮೇಯರ್ ಸುವರ್ಣ ಶಂಕರ್, ಉಪಮೇಯರ್ ಸುರೇಖಾ ಮುರುಳಿಧರ್ ಸೇರಿದಂತೆ ಜೆಡಿಎಸ್ ಹಾಗೂ […]

ಅಭಿವೃದ್ದಿಗೆ ಪ್ರಾಮಾಣಿಕವಾಗಿ ದುಡಿದಿದ್ದೇನೆ : ನನಗೆ ಟಿಕೆಟ್ ನೀಡಿ; ಅನರ್ಹ ಶಾಸಕ ಆರ್. ಶಂಕರ್

Friday, November 15th, 2019
Shankar

ಬೆಂಗಳೂರು : ರಾಣೆಬೆನ್ನೂರು ಕ್ಷೇತ್ರದಿಂದ ಸ್ಪರ್ಧಿಸಲು ನನಗೆ ಬಿಜೆಪಿ ಟಿಕೆಟ್ ನೀಡಲೇಬೇಕು. ಚುನಾವಣೆಯಲ್ಲಿ ಸ್ಪರ್ಧಿಸಲು ನನಗೆ ಅವಕಾಶ ನೀಡಲೇಬೇಕು ಎಂದು ಅನರ್ಹ ಶಾಸಕ ಆರ್. ಶಂಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾನು ನನ್ನ ನಿರ್ಧಾರದಿಂದ ಹಿಂದೆ ಸರಿಯುವ ಪ್ರಶ್ನೆಯಿಲ್ಲ. ನನಗೆ ವಿಧಾನಪರಿಷತ್ ಸದಸ್ಯ ಸ್ಥಾನದ ಅಗತ್ಯವಿಲ್ಲ. ಎರಡು ಬಾರಿ ಸಚಿವನಾಗಿ ಕೆಲಸ ಮಾಡಿದ್ದೇನೆ. ನನ್ನ ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಗೆ ಪ್ರಾಮಾಣಿಕವಾಗಿ ದುಡಿದಿದ್ದೇನೆ ಹಾಗಾಗಿ ಟಿಕೆಟ್ ನೀಡಬೇಕು ಎಂದರು. ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮೇಲೆ ನನಗೆ ಪೂರ್ಣ […]

ನೆರೆಪರಿಹಾರದಲ್ಲಿ ನಿರ್ಲಕ್ಷ್ಯ ಆರೋಪ : ವಿಧಾನಸಭಾ ಅಧಿವೇಶನ ಬಹಿಷ್ಕಾರದ ಎಚ್ಚರಿಕೆ; ಐವನ್ ಡಿಸೋಜ

Wednesday, October 2nd, 2019
Ivan-disoza

ಮಂಗಳೂರು : ನೆರೆ ಪರಿಹಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ರಾಜ್ಯವನ್ನು ನಿರ್ಲಕ್ಷಿಸಿರುವುದರಿಂದ ಅ.10 ರಿಂದ ನಡೆಯುವ ವಿಧಾನಸಭಾ ಅಧಿವೇಶನದಲ್ಲಿ ಕಾಂಗ್ರೆಸ್ನಿಂದ ಪ್ರತಿಭಟನೆ ನಡೆಸಲಾಗುವುದು. ನಾವು ಅಧಿವೇಶನ ಬಹಿಷ್ಕರಿಸಿದರೆ ಅದಕ್ಕೆ ಬಿಜೆಪಿ ಕಾರಣವೆಂದು ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ನೆರೆ ಹಾನಿಯಿಂದ 35 ಸಾವಿರ ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಸರ್ಕಾರವೇ ಹೇಳಿದೆ. ಆದರೆ ಕೇಂದ್ರ ಸರ್ಕಾರ ಈವರೆಗೂ ನೆರೆ ಪರಿಹಾರ ಬಿಡುಗಡೆ ಮಾಡಿಲ್ಲ. ಬಿಹಾರದಲ್ಲಿ ಪ್ರವಾಹವಾದಾಗ ಟ್ವೀಟ್ ಮೂಲಕ ನೆರವಿನ‌ […]

ವಿಧಾನಪರಿಷತ್ ಸಭಾಪತಿಯಾಗಿ ಕಾಂಗ್ರೆಸ್ ನ ಪ್ರತಾಪ್‍ಚಂದ್ರ ಶೆಟ್ಟಿ

Wednesday, December 12th, 2018
prathap-chandra

ಉಡುಪಿ: ವಿಧಾನಪರಿಷತ್ ಹಿರಿಯ ಸದಸ್ಯರಾದ ಕಾಂಗ್ರೆಸ್ ನ ಪ್ರತಾಪ್‍ಚಂದ್ರ ಶೆಟ್ಟಿ ಮೇಲ್ಮನೆ ಸಭಾಪತಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಂಗಳವಾರ ಮಧ್ಯಾಹ್ನ 12ಕ್ಕೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್, ಸಚಿವ ಜಮೀರ್ ಅಹಮ್ಮದ್ ಖಾನ್, ಮೇಲ್ಮನೆ ಸದಸ್ಯರಾದ ರವಿ, ಐವಾನ್ ಡಿಸೋಜಾ ಇನ್ನಿತರರೊಡನೆ ಆಗಮಿಸಿದ .ಪ್ರತಾಪ್‍ಚಂದ್ರ ಶೆಟ್ಟಿ ಪರಿಷತ್ ಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ಪ್ರತಾಪ್‍ಚಂದ್ರ ಶೆಟ್ಟಿ ಹೊರತಾಗಿ ಇನ್ನಾರೂ ಸಭಾಪತಿ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡದ ಹಿನ್ನೆಲೆಯಲ್ಲಿ ಅವರು ಸಭಾಪತಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇವರ ಅಧಿಕಾರಾವಧಿ 2022ರವರೆಗೆ […]

ಮಂಗಳೂರಿನಲ್ಲಿ ಸರ್ಜಿಕಲ್ ಸ್ಟ್ರೈಕ್ ಶೌರ್ಯ ದಿನಾಚರಣೆ

Saturday, September 29th, 2018
vedvyasa-kamath

ಮಂಗಳೂರು: ಸರ್ಜಿಕಲ್ ಸ್ಟ್ರೈಕ್ಗೆ ಎರಡು ವರ್ಷ ತುಂಬಿದ ಹಿನ್ನೆಲೆಯಲ್ಲಿ ಇಂದು ಮಂಗಳೂರಿನಲ್ಲಿ ಸರ್ಜಿಕಲ್ ಸ್ಟ್ರೈಕ್ ಶೌರ್ಯ ದಿನಾಚರಣೆ ಆಚರಿಸಲಾಯಿತು. ಮಂಗಳೂರಿನ ಕದ್ರಿಯಲ್ಲಿರುವ ಹುತಾತ್ಮರ ಸ್ಮಾರಕದಲ್ಲಿ ಬಿಜೆಪಿ ಈ ಕಾರ್ಯಕ್ರಮ ಆಯೋಜಿಸಿತ್ತು. ಕಾರ್ಯಕ್ರಮದಲ್ಲಿ ಶಾಸಕ ವೇದವ್ಯಾಸ ಕಾಮತ್, ಮಾಜಿ ವಿಧಾನಪರಿಷತ್ ಸದಸ್ಯ ಕ್ಯಾ. ಗಣೇಶ್ ಕಾರ್ಣಿಕ್, ಮಾಜಿ ಸೈನಿಕರು ಮೊದಲಾದವರು ಉಪಸ್ಥಿತರಿದ್ದು ಹುತಾತ್ಮ ಸೈನಿಕರ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು.

ಈದ್ ಗೆ 3.65 ಕೋಟಿ ಬೆಲೆಯ ಕಾರು ಖರೀದಿಸಿದ ವಿಧಾನಪರಿಷತ್ ಸದಸ್ಯ ಬಿ.ಎಂ.ಫಾರೂಕ್

Friday, June 15th, 2018
B.M Farook

  ಮಂಗಳೂರು  : ಜೆಡಿಎಸ್ ಮುಖಂಡ, ವಿಧಾನಪರಿಷತ್ ಸದಸ್ಯರು, ಫಿಝಾ ಗ್ರೂಪ್ ಎಂ.ಡಿ.ಯೂ ಆಗಿರುವ ಬಿ.ಎಂ.ಫಾರೂಕ್ ಲ್ಯಾಂಡ್ ರೋವರ್ ಬ್ರಾಂಡ್’ನ ರೇಂಜ್ ರೋವರ್ ಆಟೋಬಯೋಗ್ರಫಿ ಐಷಾರಾಮಿ ಕಾರನ್ನು ಈ ಬಾರಿಯ ಈದ್  ಹಬ್ಬಕ್ಕಾಗಿ ಖರೀದಿಸಿದ್ದಾರೆ. ಮಂಗಳೂರು ಫಿಝಾ ಮಾಲ್ ನ ನೆಲ ಅಂತಸ್ತಿನಲ್ಲಿ ಗುರುವಾರ ರಾತ್ರಿ ತಂದಿಡಲಾಗಿದ್ದ ಕಾರನ್ನು . ಈದ್  ಕೇಕ್ ಕತ್ತರಿಸಿ ಕುಟುಂಬ ಸದಸ್ಯರ ಸಮ್ಮುಖ ಬಿ.ಎಂ.ಫಾರೂಕ್ ಚಾಲನೆ ನೀಡಿದರು. ಈ ಕಾರನ್ನು ಕಂಪೆನಿಯಲ್ಲಿ ಹೇಳಿ ವಿಶೇಷವಾಗಿ ತಯಾರಿಸಲಾಗಿದೆ. ಕರ್ನಾಟಕಕ್ಕೆ ಈ ಕಾರು ಪ್ರಥಮ […]

ವಿಧಾನಪರಿಷತ್ ಗೆ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ಕ್ಯಾ. ಗಣೇಶ್ ಕಾರ್ಣಿಕ್ ಗೆ ಸೋಲು..!

Wednesday, June 13th, 2018
ganesh-karnik

ಮಂಗಳೂರು: ನೈಋತ್ಯ ಶಿಕ್ಷಕ ಕ್ಷೇತ್ರದಿಂದ ವಿಧಾನಪರಿಷತ್ ಗೆ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ಕ್ಯಾ. ಗಣೇಶ್ ಕಾರ್ಣಿಕ್ ಸೋಲನ್ನನುಭವಿಸಿದ್ದಾರೆ. ನೈಋತ್ಯ ಶಿಕ್ಷಕ ಕ್ಷೇತ್ರದ ಚುನಾವಣೆಯಲ್ಲಿ ಜೆ ಡಿಎಸ್ ಪಕ್ಷದ ಅಭ್ಯರ್ಥಿ ಭೋಜೆ ಗೌಡ ಅವರು ಜಯಗಳಿಸಿದ್ದು ಕ್ಯಾ. ಗಣೇಶ್ ಕಾರ್ಣಿಕ್ ಅವರು ಸೋಲನ್ನನುಭವಿಸಿದ್ದಾರೆ. ನೈಋತ್ಯ ಶಿಕಷಕ ಕ್ಷೇತ್ರ ಚುನಾವಣೆಗೆ ಈ ಬಾರಿ 12 ಮಂದಿ ಸ್ಪರ್ಧಿಸಿದ್ದು ತಮ್ಮನ್ನು ಹೊರತುಪಡಿಸಿ , ಸ್ಪರ್ಧಿಸಿದ ಎಲ್ಲ 11 ಅಭ್ಯರ್ಥಿಗಳ ನಿರ್ಗಮನದ ನಂತರವೂ ಜೆ ಡಿಎಸ್ ನ ಭೋಜೆಗೌಡ ಅವರು ಗೆಲುವಿಗೆ ನಿಗದಿಯಾಗಿದ್ದ […]

ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರ ಎಲ್ಲವೂ ಬಿಜೆಪಿ ತೆಕ್ಕೆಗೆ: ಡಿ.ವಿ.ಸದಾನಂದ ಗೌಡ

Friday, June 8th, 2018
sadananda-gowda

ಪುತ್ತೂರು: ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರ ಎಲ್ಲವೂ ಬಿಜೆಪಿ ತೆಕ್ಕೆಗೆ ಎಂದು ಡಿ.ವಿ.ಸದಾನಂದ ಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪುತ್ತೂರಿನಲ್ಲಿ ಮಾತನಾಡಿದ ಸದಾನಂದ ಗೌಡ ಅವರು ಶಿಕ್ಷಕರು ,ಪದವೀಧರರು ಹಿಂದಿನಿಂದಲೂ ಬಿಜೆಪಿ ಬೆಂಬಲಿಸಿದವರು.ವಿಧಾನಸಭೆಯಲ್ಲಿ ಶಾಸಕರಿಲ್ಲದ ಕಾಲದಲ್ಲೂ ವಿಧಾನಪರಿಷತ್ ಗೆ ಶಾಸಕರನ್ನು ಕಳುಹಿಸಿದ ಇತಿಹಾಸ ಬಿಜೆಪಿಯದ್ದು.ಇತ್ತೀಚಿನ ದಿನಗಳಲ್ಲಿ ಬಿಜೆಪಿ‌ ಬಗ್ಗೆ ಒಲವು ಹೆಚ್ಚಾಗಿದೆ ಎಂದಿದ್ದಾರೆ. ರಾಜ್ಯದ ಎಲ್ಲಾ ಸ್ಥಾನಗಳನ್ನೂ ನೂರಕ್ಕೆ ನೂರು ಬಿಜೆಪಿ ಪಡೆಯಲಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ.