ಇಂದು ಎಲ್ಲೆಡೆ ವೈಕುಂಠ ಏಕಾದಶಿ ಸಂಭ್ರಮ
Monday, January 6th, 2020ಮೈಸೂರು : ಇಂದು ಎಲ್ಲೆಡೆ ವೈಕುಂಠ ಏಕಾದಶಿಯ ಸಂಭ್ರಮ ಮನೆಮಾಡಿದೆ. ಭಕ್ತರು ಮುಂಜಾನೆಯೇ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯುತ್ತಿದ್ದಾರೆ. ಮೈಸೂರಿನಲ್ಲಿಯೂ ವಿವಿಧ ದೇವಾಲಯಗಳಲ್ಲಿ ವೈಕುಂಠ ಏಕಾದಶಿ ಪ್ರಯುಕ್ತ ವಿಶೇಷ ಪೂಜೆ ಆಯೋಜಿಸಲಾಗಿದೆ. ವೆಂಕಟರಮಣ ದೇಗುಲಗಳಲ್ಲಿ, ಲಕ್ಷ್ಮಿ ನರಸಿಂಹ, ಯೋಗಾ ನರಸಿಂಹ ದೇವಸ್ಥಾನಗಳಲ್ಲಿ ವೈಕುಂಠ ಏಕಾದಶಿ ಪ್ರಯುಕ್ತ ವಿಶೇಷ ಪೂಜೆ ನಡೆಯುತ್ತಿದೆ. ಟಿ.ನರಸೀಪುರದ ಶ್ರೀ ಗುಂಜಾನರಸಿಂಹ ಸ್ವಾಮಿ ದೇವಾಲಯಕ್ಕೆ ಭಕ್ತ ಸಾಗರ ಹರಿದು ಬಂದಿದ್ದು, ವಿವಿಧ ಪುಷ್ಪಾಲಂಕಾರದಿಂದ ಶ್ರೀ ಗುಂಜಾನರಸಿಂಹ ಸ್ವಾಮಿ ಕಂಗೋಳಿಸುತ್ತಿದ್ದಾನೆ. ಬ್ರಾಹ್ಮಿ ಮುಹೂರ್ತದಲ್ಲಿ […]