ಗುಜರಾತಿನ ಸೂರತ್‌ನಲ್ಲಿ ಕ್ಯಾಂಪ್ಕೊ ಮಾರಾಟ ಕೇಂದ್ರ ಆರಂಭ
Tuesday, May 22nd, 2018ಮಂಗಳೂರು: ಕರ್ನಾಟಕ ಮತ್ತು ಕೇರಳದಲ್ಲಿ ಕೃಷಿಕರು ಬೆಳೆಯುವ ಅಡಿಕೆ ಉತ್ತರ ಭಾರತದಲ್ಲಿ ಬಹುಬೇಡಿಕೆಯ ವಸ್ತುವಾಗಿದೆ. ವಿಶೇಷವಾಗಿ, ಉತ್ತಮ ಗುಣಮಟ್ಟದ ಚಾಲಿ (ಬಿಳಿ) ಅಡಿಕೆಗೆ ಗುಜರಾತ್ ರಾಜ್ಯ ಯೋಗ್ಯ ಮಾರುಕಟ್ಟೆಯನ್ನು ಒದಗಿಸುತ್ತಿದೆ. ಗುಜರಾತಿನ ಅಹಮದಾಬಾದ್ ಮತ್ತು ರಾಜಕೋಟ್ ನಗರಗಳಲ್ಲಿ ಈಗಾಗಲೇ ಮಾರಟ ಕೇಂದ್ರಗಳನ್ನು ಹೊಂದಿರುವ ಕ್ಯಾಂಪ್ಕೊ, ಗ್ರಾಹಕರ ಬೇಡಿಕೆಗನುಸಾರವಾಗಿ ಇದೀಗ ಆ ರಾಜ್ಯದಲ್ಲಿ ಮೂರನೇ ಮಾರಾಟ ಕೇಂದ್ರವನ್ನು ಸೂರತ್ ನಗರದಲ್ಲಿ ಆರಂಭಿಸಿದೆ. ಗುಜರಾತಿನ ಎರಡನೇ ದೊಡ್ಡ ನಗರವಾಗಿರುವ ಸೂರತ್, ವಜ್ರ ಹಾಗೂ ಜವಳಿ ಉದ್ಯಮಗಳಿಗೆ ಪ್ರಸಿದ್ಧಿಯನ್ನು ಪಡೆದಿದೆ. ಕ್ಯಾಂಪ್ಕೊ […]