ಜೋಡುಪಾಲ ದುರಂತ ಪ್ರದೇಶಕ್ಕೆ ಕಂದಾಯ ಸಚಿವ ಆರ್.ವಿ. ದೇಶಪಾಂಡೆ ಭೇಟಿ

Monday, August 20th, 2018
u-t-khader

ಮಂಗಳೂರು: ಕೊಡಗು ಜಿಲ್ಲೆಯ ಜೋಡುಪಾಲ ದುರಂತ ಪ್ರದೇಶಕ್ಕೆ ಹಾಗೂ ಸಂತ್ರಸ್ತರು ಆಶ್ರಯ ಪಡೆದಿರುವ ಸ್ಥಳಗಳಿಗೆ ಕಂದಾಯ ಸಚಿವ ಆರ್.ವಿ. ದೇಶಪಾಂಡೆ ಭೇಟಿ ನೀಡಿದ್ದರು. ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್ ಅವರೊಂದಿಗೆ ಮೊದಲು ಜೋಡುಪಾಲ ಗುಡ್ಡ ಕುಸಿದ ಸ್ಥಳಕ್ಕೆ ಭೇಟಿ ನೀಡಿದ್ದ ಕಂದಾಯ ಸಚಿವರು, ಘಟನಾ ಸ್ಥಳವನ್ನು ವೀಕ್ಷಿಸಿದರು. ಬಳಿಕ ಸಂತ್ರಸ್ತರು ಆಶ್ರಯ ಪಡೆದಿರುವ ಸಂಪಾಜೆ ಸರ್ಕಾರಿ ಶಾಲೆ, ಕಲ್ಲುಗುಂಡಿ ಸರ್ಕಾರಿ ಶಾಲೆ ಹಾಗೂ ಅರಂತೋಡು ತೆಕ್ಕಿಲ್ ಹಾಲ್ಗೆ ಭೇಟಿ ನೀಡಿದ್ದರು. ಸಂತ್ರಸ್ತರು ತಂಗಿರುವ ಎಲ್ಲಾ ಕೊಠಡಿಗಳಿಗೂ ಭೇಟಿ […]

ಹಿಂದಿನ ಸರ್ಕಾರದ ಕೆಲ ಜನಪ್ರಿಯ ಕಾರ್ಯಕ್ರಮಗಳನ್ನು ತಡೆಯಲು ಅವಕಾಶ ಮಾಡಿಕೊಡಬೇಡಿ: ಸಿದ್ದರಾಮಯ್ಯ

Friday, June 29th, 2018
siddaramaih

ಬೆಂಗಳೂರು: ಆರ್ಥಿಕ ಹೊರೆ ನೆಪವೊಡ್ಡಿ ಇಂದಿರಾ ಕ್ಯಾಂಟೀನ್ ಸೇರಿದಂತೆ ಹಿಂದಿನ ಸರ್ಕಾರದ ಕೆಲ ಜನಪ್ರಿಯ ಕಾರ್ಯಕ್ರಮಗಳನ್ನು ತಡೆಯಲು ಮುಂದಾದರೆ ಅದಕ್ಕೆ ಅವಕಾಶ ಮಾಡಿಕೊಡಬೇಡಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸಮನ್ವಯ ಸಮಿತಿ ಕಾಂಗ್ರೆಸ್ ಸದಸ್ಯರಿಗೆ ಕಿವಿಮಾತು ಹೇಳಿದ್ದಾರೆ ಎನ್ನಲಾಗಿದೆ. ಸಂಜೆ ನಡೆಯುವ ಸಾಮಾನ್ಯ ಕನಿಷ್ಠ ಕಾರ್ಯಕ್ರಮ ರಚನಾ ಸಮಿತಿ ಸಭೆಗೆ ಮುನ್ನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಸದಸ್ಯರಾದ ವೀರಪ್ಪ ಮೊಯ್ಲಿ, ಆರ್.ವಿ. ದೇಶಪಾಂಡೆ, ಡಿ.ಕೆ. ಶಿವಕುಮಾರ್ ಜತೆಗಿನ ಸಭೆಯಲ್ಲಿ ಈ ವಿಚಾರವಾಗಿ ಸಿದ್ದರಾಮಯ್ಯ ಗಮನ ಸೆಳೆದರು. […]

ರಾಜ್ಯ ಸರಕಾರ ಕಾನೂನಿಗಿಂತ ಮಾನವೀಯತೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಪರಿಹಾರ ನೀಡಿ: ವೇದವ್ಯಾಸ ಕಾಮತ್

Friday, June 15th, 2018
desh-vedavyas

ಮಂಗಳೂರು: ರಾಜ್ಯ ಸರಕಾರ ಕಾನೂನಿಗಿಂತ ಮಾನವೀಯತೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಪರಿಹಾರ ನೀಡಬೇಕು ಎಂದು ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಕಂದಾಯ ಸಚಿವ ಆರ್ ವಿ ದೇಶಪಾಂಡೆಯವರಿಗೆ ಮನವಿ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ನಡೆದ ಸಭೆಯ ಬಳಿಕ ಸಚಿವ ಆರ್ ವಿ ದೇಶಪಾಂಡೆಯವರಿಗೆ ಮಂಗಳೂರು ನಗರ ದಕ್ಷಿಣದಲ್ಲಿ ಆಗಿರುವ ಹಾನಿಯ ಸಂಪೂರ್ಣ ವರದಿಯನ್ನು ನೀಡಿ ವೇದವ್ಯಾಸ ಕಾಮತ್ ಮಾಧ್ಯಮಗಳೊಂದಿಗೆ ಮಾತನಾಡಿದರು. ಮಳೆಯಿಂದ ನಷ್ಟಕ್ಕೊಳಗಾದ ಸುಮಾರು 110 ಮನೆಗಳಿಗೆ ಭೇಟಿಕೊಟ್ಟು ಪರಿಶೀಲನೆ ನಡೆಸಿದ್ದೇನೆ.ಅನೇಕ […]

ರಾಜ್ಯಾದ್ಯಂತ ಮಳೆ ಹಾನಿ… 22 ಕೋಟಿ ಪರಿಹಾರ ಹಣ ಬಿಡುಗಡೆ: ಆರ್.ವಿ. ದೇಶಪಾಂಡೆ

Thursday, June 14th, 2018
r-v-deshpande

ಮಂಗಳೂರು: ಬೆಂಗಳೂರು ನಗರ ಹೊರತುಪಡಿಸಿ ರಾಜ್ಯದ್ಯಾಂತ ಭಾರಿ ಪ್ರಮಾಣದ ಮಳೆಯಿಂದ ಹಾನಿಗೀಡಾಗಿರುವ ಪ್ರದೇಶಕ್ಕೆ ಪರಿಹಾರ ನೀಡಲು 22 ಕೋಟಿ ಹಣವನ್ನು ರಾಜ್ಯ ಸರಕಾರ ‌ಬಿಡುಗಡೆ ಮಾಡಿದೆ ಎಂದು ಕಂದಾಯ ಸಚಿವ ಆರ್.ವಿ. ದೇಶಪಾಂಡೆ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಹಾಮಳೆಗೆ‌ ಹಾನಿಯಾದ ಪ್ರದೇಶಗಳಿಗೆ ಭೇಟಿ ನೀಡಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಳೆ ಹಾನಿಯಿಂದ ಪರಿಹಾರ ನೀಡಲು ವಿಳಂಬವಾಗಬಾರದೆಂದು‌ ನಿರ್ಧರಿಸಿದ್ದು ಪ್ರತಿ ಜಿಲ್ಲೆಗೂ ಐದು ಕೋಟಿ ಹಣ ಪರಿಹಾರ ನೀಡಲಿದ್ದೇವೆ. […]

ಸ್ಪೀಕರ್ ಸ್ಥಾನಕ್ಕಾಗಿ ಜೆಡಿಎಸ್ ಬಿಗಿ ಪಟ್ಟು?

Tuesday, May 22nd, 2018
devegowda

ಬೆಂಗಳೂರು: ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಮುಂದಿನ ದಿನಗಳಲ್ಲಿ ಸದನದಲ್ಲಿ ಏನಾದರು ಗೊಂದಲ ಇಲ್ಲವೆ, ಮೈತ್ರಿ ಪಕ್ಷದಲ್ಲಿ ಅಪಸ್ವರ ಕಂಡು ಬಂದರೆ ನೆರವಿಗೆ ಇರಲಿ ಎಂಬ ಕಾರಣಕ್ಕೆ ಜೆಡಿಎಸ್ ಪಕ್ಷ ಸ್ಪೀಕರ್ ಸ್ಥಾನ ತಮಗಿರಲಿ ಎಂಬ ಲೆಕ್ಕಾಚಾರದಲ್ಲಿ ಬಿಗಿ ಪಟ್ಟು ಹಿಡಿದಿದೆ ಎಂದು ತಿಳಿದುಬಂದಿದೆ. ಸಂಪುಟ ಸ್ಥಾನ ಹಂಚಿಕೆ ಗೊಂದಲದಲ್ಲಿರುವ ಕಾಂಗ್ರೆಸ್‌ಗೆ ಸ್ಪೀಕರ್ ಸ್ಥಾನ ಬಿಟ್ಟುಕೊಡಬೇಕೇ ಅಥವಾ ಬೇಡವೇ ಎನ್ನುವ ಹೊಸ ಗೊಂದಲ ಈಗ ಆರಂಭವಾಗಿದೆ. ಎರಡು ದಿನದೊಳಗೆ ನೂತನ ಸ್ಪೀಕರ್ ಪ್ರಮಾಣವಚನ ನಡೆಯಬೇಕಿರುವುದರಿಂದ ಆದಷ್ಟು […]

ಕರ್ನಾಟಕ ಅಭಿವೃದ್ಧಿ ಇತರರಿಗೆ ಮಾದರಿಯಾಗಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Tuesday, January 2nd, 2018
vision

ಬೆಂಗಳೂರು: ಕರ್ನಾಟಕ ರಾಜ್ಯದ ಅಭಿವೃದ್ಧಿ ಇತರರಿಗೆ ಮಾದರಿಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದಾರೆ. ‘ದಿ ನ್ಯೂ ಇಂಡಿಯನ್ ಎಕ್ಸ್’ಪ್ರೆಸ್ ಆಯೋಜಿಸಿದ್ದ ‘ವಿಷನ್ 2025’ ಸಮಾವೇಶದಲ್ಲಿ ಮಾತನಾಡಿರುವ ಅವರು, ನವ ಕರ್ನಾಟಕ-2025 ನಿರ್ಮಾಣಕ್ಕೆ ತಮ್ಮ ಸರ್ಕಾರ ಕೈಗೊಂಡಿರುವ ಉಪಕ್ರಮಗಳು ಹಾಗೂ ಅವರ ಜೀವನದ ಅನುಭವಗಳನ್ನು ಹಂಚಿಕೊಂಡರು. ಜೀವನದಲ್ಲಿ ಹಸಿವು, ಬಡತನ ಹಾಗೂ ನಿರುದ್ಯೋಗ ಸಮಸ್ಯೆಗಳನ್ನು ಅನುಭವಿಸಿದ್ದೇನೆ. ರಾಜ್ಯ ಬಜೆಟ್’ನ್ನು ಘೋಷಣೆ ಮಾಡುವ ವೇಳೆ ನನ್ನ ಅನುಭವಗಳೇ ನನಗೆ ಮಾರ್ಗದರ್ಶನ ನೀಡಿತ್ತು. ಬಸವೇಶ್ವರ, ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧೀಜಿಯವರು ರಚಿಸಿದ […]

ವಿದ್ಯಾರ್ಥಿನಿಯರಿಗೆ ಉಚಿತ ಕಾಲೇಜು ಶಿಕ್ಷಣ.

Wednesday, February 26th, 2014
R.V-Deshpande

ಬೆಳ್ತಂಗಡಿ: ಉಜಿರೆಯಲ್ಲಿ 30 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಸ್ನಾತಕೋತ್ತರ ಪದವಿ ಅಧ್ಯಯನ ಕೇಂದ್ರದ ನೂತನ ಕಟ್ಟಡವನ್ನು ಮಂಗಳವಾರ ಉನ್ನತ ಶಿಕ್ಷಣ ಸಚಿವ ಆರ್.ವಿ. ದೇಶಪಾಂಡೆ ಉದ್ಘಾಟಿಸಿದರು. ಧರ್ಮಸ್ಥಳದ ಧಮರ್ಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ವಿ. ಹೆಗ್ಗಡೆ, ಮಂಗಳೂರು ವಿ.ವಿ. ಕುಲಪತಿ ಡಾ. ಟಿ.ಸಿ. ಶಿವಶಂಕರಮೂರ್ತಿ, ಪ್ರೊ.ಎಸ್. ಪ್ರಭಾಕರ್. ಕಾಲೇಜಿನ ಪ್ರಾಂಶುಪಾಲ ಡಾ. ಬಿ. ಯಶೋವರ್ಮ, ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ಯೋಗಾನಂದ ಉಪಸ್ಥಿತರಿದ್ದರು. ಮುಂದಿನ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಕಾಲೇಜುಗಳಲ್ಲಿ ಮತ್ತು […]