ಮಹಿಳೆಗೆ ಹಲ್ಲೆ ಉಳ್ಳಾಲ ಠಾಣಾಧಿಕಾರಿ ಹೆಚ್.ಎನ್ ಬಾಲಕೃಷ್ಣ ವಿರುದ್ಧ ಪ್ರಕರಣ ದಾಖಲು

Tuesday, March 12th, 2024
H.N. Balakrishna

ಮಂಗಳೂರು : ನಿರ್ಮಲ ಭಾರತ ಚಾರಿಟೇಬಲ್ ಟ್ರಸ್ಟ್ ಅಧೀನದ ಜಾಗಕ್ಕೆ ಬೇಲಿ ಹಾಕುವ ಸಂದರ್ಭ ಟ್ರಸ್ಟ್ ನ ಮಹಿಳಾ ಕಾರ್ಯದರ್ಶಿಗೆ ತಡೆಯೊಡ್ಡಿ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿರುವ ಉಳ್ಳಾಲ ಠಾಣಾಧಿಕಾರಿ ಹೆಚ್.ಎನ್ ಬಾಲಕೃಷ್ಣ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಕ್ಷಿಣ ಕನ್ನಡದ ನಿರ್ಮಲ ಭಾರತ ಚಾರಿಟೇಬಲ್ ಟ್ರಸ್ಟ್ ಗೆ ಉಳ್ಳಾಲ ತಾಲೂಕು ಕೊಣಾಜೆ ಗ್ರಾಮದ, ಸರ್ವೆ ನಂ. 149 ರಲ್ಲಿ ಎರಡು ಎಕರೆ ಜಮೀನು ಮಂಜೂರಾಗಿರುತ್ತದೆ. ಜ.26 ರಂದು ಬೆಳಗ್ಗೆ 8 ಗಂಟೆ […]

ಸಾಕ್ಷ್ಯಾಧಾರ ಕೊರತೆ : ತಾಯಿ ಮತ್ತು ಅಪ್ರಾಪ್ತ ಬಾಲಕಿ ಅತ್ಯಾಚಾರದ ಆರೋಪಿ ಬಿಡುಗಡೆ

Tuesday, January 30th, 2024
Ullal-Rape

ಮಂಗಳೂರು : ಉಳ್ಳಾಲದಲ್ಲಿ ಠಾಣೆಯಲ್ಲಿ ತಾಯಿ ಹಾಗೂ ಆಕೆಯ ಮಗಳು ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದ ಆರೋಪಿಯನ್ನು ಸಾಕ್ಷ್ಯಾಧಾರ ಕೊರತೆಯ ಕಾರಣದಿಂದ ಮಂಗಳೂರಿನ ಪೋಕ್ಸೋ ವಿಶೇಷ ನ್ಯಾಯಾಲಯ ಬಿಡುಗಡೆಗೊಳಿಸಿದೆ. 2021ರಲ್ಲಿ ದಾಖಲಾದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಬೂಬಕ್ಕರ್ ಸಿದ್ದಿಕ್ ಯಾನೆ ಸಿದ್ದಿಕ್ ಉಳ್ಳಾಲ್ ಎಂಬವವನನ್ನು ಆರೋಪ ಮುಕ್ತಗೊಳಿಸಿ ಮಂಗಳೂರಿನ ಪೋಕ್ಸೋ ವಿಶೇಷ ನ್ಯಾಯಾಲಯ ಆದೇಶ ನೀಡಿದೆ . ಆರೋಪಿಯು ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಆಕೆಯ ಮಗಳು ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ […]

ಸಾಹಸಿ ಯುವತಿಯರಿಗೆ ಉಳ್ಳಾಲ ತೀರದಲ್ಲಿ ಅದ್ದೂರಿ ಸ್ವಾಗತ ಸಚಿವರು, ಶಾಸಕರು, ಗಣ್ಯರಿಂದ ಅಭಿನಂದನೆಗಳು

Monday, November 1st, 2021
adventurous- women

ಮಂಗಳೂರು  : ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಅಂಗವಾಗಿ ಕೈಗೊಳ್ಳಲಾಗಿದ್ದ ಐತಿಹಾಸಿಕ ಯಾನ ಶಿಖರದಿಂದ ಸಾಗರ ಅಭಿಯಾನದಲ್ಲಿ ಭಾಗವಹಿಸಿದ್ದ ರಾಜ್ಯದ ಐವರು ಯುವತಿಯರಿಗೆ ಉಳ್ಳಾಲದ ಕಡಲ ತೀರದಲ್ಲಿ ನ.01ರ ಸೋಮವಾರ ಅದ್ದೂರಿ ಸ್ವಾಗತ ಕೋರಲಾಯಿತು. ಈ ಯುವತಿಯರು ಕಾಶ್ಮೀರದಲ್ಲಿನ ಕೊಲ್ಹೋಯಿ  (5425 ಮೀ) ಶಿಖರವನ್ನು ಏರಿ ತದನಂತರ ಜಗತ್ತಿನ ಅತಿ ಎತ್ತರದ ರಸ್ತೆಯಾದ ಲಡಾಖ್ ನ ಕರ್ ದೂಂಗ್ಲ ಪಾಸ್ ಮೂಲಕ 3350 ಕಿ.ಮೀ, ಸೈಕಲ್ ಯಾನ ಮಾಡುತ್ತಾ ಕಾರವಾರ ತಲುಪಿ, ಅಲ್ಲಿಂದ ರಾಜ್ಯದ ಕರಾವಳಿ ಸಮುದ್ರದಲ್ಲಿ 300 […]

ಉಳ್ಳಾಲದ ಟೆರರಿಸ್ಟ್ ನಂಟು ಆರೋಪಿ ಮನೆಗೆ ವಿಶ್ವಹಿಂದೂ ಪರಿಷತ್ ಮತ್ತು ಬಜರಂಗದಳ ಮುತ್ತಿಗೆ

Wednesday, August 11th, 2021
VHp

ಮಂಗಳೂರು : ಉಳ್ಳಾಲದಲ್ಲಿ  ಭಯೋತ್ಪಾದನೆ ನಡೆಯುತ್ತಿದೆ ಎಂದು ಆರೋಪಿಸಿ ವಿಶ್ವಹಿಂದೂ ಪರಿಷತ್ ಮತ್ತು  ಬಜರಂಗದಳ ಉಳ್ಳಾಲದ ಮಾಸ್ತಿಕಟ್ಟೆಯಲ್ಲಿರುವ ಉದ್ಯಮಿ ಬಿ.ಎಂ ಬಾಷಾ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಬುಧವಾರ ಬೆಳಗ್ಗೆ ನಡೆದಿದೆ. “ಜನಜಾಗೃತಿ”  ಕಾರ್ಡ್ ಹಿಡಿದು ಪ್ರತಿಭಟನೆ ನಡೆಸಿ ಮುತ್ತಿಗೆ ಯತ್ನಿಸಿದ ವಿಎಚ್‌ಪಿ ಮುಖಂಡ ಶರಣ್‌ ಪಂಪ್‌ವೆಲ್‌ ಸಹಿತ ಹಲವರನ್ನು ಉಳ್ಳಾಲ‌ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಎಚ್‌ಪಿ ಹಾಗೂ ಬಜರಂಗದಳ ಕಾರ್ಯಕರ್ತರು ಮೊದಲು ರಸ್ತೆಗಳಲ್ಲಿ ಪ್ಲೇ ಕಾರ್ಡ್ ಹಿಡಿದು ಪ್ರತಿಭಟನೆ ನಡೆಸಿದರು. ನಂತರ ಬಿ.ಎಂ. ಬಾಷಾ ಅವರ ಮನೆಯ ಗೇಟ್‌ ಬಳಿ […]

ಐಸಿಸ್ ಉಗ್ರ ಸಂಘಟನೆ ಜತೆ ನಂಟು, ಮಾಜಿ ಶಾಸಕ ಬಿ.ಎಂ.ಇದಿನಬ್ಬ ಪುತ್ರನ ಉಳ್ಳಾಲದ ಮನೆಗೆ ಎನ್ಐಎ ದಾಳಿ

Wednesday, August 4th, 2021
iddinabba-House

ಮಂಗಳೂರು: ಉಗ್ರ ಸಂಘಟನೆ ಜತೆ ನಂಟು ಇರುವ ಶಂಕೆಯಲ್ಲಿ  ಉಳ್ಳಾಲದ ಮಾಜಿ ಶಾಸಕ ಬಿ.ಎಂ.ಇದಿನಬ್ಬ ಅವರ ಪುತ್ರನ ಮನೆಗೆ ಇಂದು ಬೆಳ್ಳಂಬೆಳಗ್ಗೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನಿಂದ ಆಗಮಿಸಿದ ಅಧಿಕಾರಿಗಳು ಮನೆಗೆ ಬಂದು ತನಿಖೆ ಆರಂಭಿಸಿದ್ದಾರೆ. ಮನೆಯಲ್ಲಿ ಇದಿನಬ್ಬ ಅವರ ಪುತ್ರ ಬಿ.ಎಂ. ಬಾಷಾ ತಮ್ಮ ಕುಟುಂಬದ ಜತೆ ವಾಸವಿದ್ದಾರೆ. ಸಿರಿಯಾ ಮೂಲದ ಐಸಿಸ್ ಉಗ್ರ ಸಂಘಟನೆ ಜತೆ ನಂಟು ಇರುವ ಶಂಕೆಯಲ್ಲಿ ದಾಳಿ ನಡೆದಿದೆ ಎನ್ನಲಾಗುತ್ತಿದೆ. ನಾಲ್ಕು ಕಾರುಗಳಲ್ಲಿ 25 ಮಂದಿಯಿದ್ದ ತಂಡ ಉಳ್ಳಾಲದ […]

ಉಳ್ಳಾಲದ ಸಮುದ್ರ ಕಿನಾರೆಯಲ್ಲಿ ಪತ್ತೆಯಾದ ಬೃಹತ್ ಕಡಲು ಹಂದಿಯ ಕಳೇಬರ

Thursday, February 4th, 2021
Ullal Timingila

ಮಂಗಳೂರು : ಉಳ್ಳಾಲದ ಮೊಗವೀರ ಪಟ್ಣದ ಸಮುದ್ರ ಕಿನಾರೆಯಲ್ಲಿ ಕಡು ನೀಲಿ ಬಣ್ಣದ ತಿಮಿಂಗಿಲ ಮಾದರಿಯ ಬೃಹತ್ ಕಡಲು ಹಂದಿಯ ಕಳೇಬರ ಪತ್ತೆಯಾಗಿದೆ. ಸಮುದ್ರದಲ್ಲಿರುವ ಕಡಲು ಹಂದಿಗಳು ಸಾಧಾರಣವಾಗಿ ತಿಮಿಂಗಿಲಗಳನ್ನೇ ಹೋಲುತ್ತವೆ. ತಿಮಿಂಗಿಲದ್ದೇ ಒಂದು ಪ್ರಭೇದವಾಗಿದ್ದು ಸ್ಥಳೀಯರು ಆಡುಭಾಷೆಯಲ್ಲಿ ಕಡಲು ಹಂದಿ ಎನ್ನುತ್ತಾರೆ. ಸ್ಥಳೀಯ ಮೀನುಗಾರರ ಪ್ರಕಾರ, ಇದು ತಿಮಿಂಗಿಲ ಅಲ್ಲ. ಕಡಲು ಹಂದಿಯಂತೆ. ಸುಮಾರು ಹತ್ತು ಫೀಟ್ ಉದ್ದವಿದೆ. ಸ್ಥಳೀಯರು ತಿಮಿಂಗಿಲದ ಕಳೇಬರವನ್ನು ಕಡಲಿಗೆ ದೂಡಿರುವುದಾಗಿ ತಿಳಿದು ಬಂದಿದೆ. ಆದರೆ ಇದು ಹೆಚ್ಚು ಕೊಳೆತಿರಲಿಲ್ಲ. ಸಾಮಾನ್ಯವಾಗಿ […]

ಉಳ್ಳಾಲದ ಜನರಿಗೆ ತಾಕತ್ತಿದ್ದರೆ ಮುಸ್ಲಿಮೇತರರನ್ನು ಶಾಸಕರನ್ನಾಗಿ ಮಾಡಿ : ಕಲ್ಲಡ್ಕ‌ ಪ್ರಭಾಕರ್ ಭಟ್‌

Thursday, January 28th, 2021
Kalladka Prabhakara Bhat

ಮಂಗಳೂರು : ಉಳ್ಳಾಲದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗಿದೆ. ದೇವಸ್ಥಾನ ಮತ್ತು ದೈವಸ್ಥಾನಗಳ ಕಾಣಿಕೆ ಹುಂಡಿಗೆ ಬೇಡದ ವಸ್ತುಗಳನ್ನು ಹಾಕಿ ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ಉಂಟಾಗುವ ಕಾರ್ಯ ಮಾಡಲಾಗುತ್ತಿದೆ. ಹಾಗಾಗಿ ನಾವು ಈಗಲೇ ಎಚ್ಚೆತ್ತುಕೊಳ್ಳುವುದು ಒಳಿತು ಎಂದು ಆರ್‌ಎಸ್‌ಎಸ್‌ ಮುಖಂಡ ಡಾ.ಕಲ್ಲಡ್ಕ‌ ಪ್ರಭಾಕರ್ ಭಟ್  ಹೇಳಿದ್ದಾರೆ. ವಿಭಜನೆಯಾಗುವ ಮೊದಲು ಭಾರತೀಯರಾಗಿದ್ದ ಪಾಕಿಸ್ತಾನದ ಜನರ ಮಾನಸಿಕತೆಯೂ ವಿಭಜನೆಯ ಬಳಿಕ ಬದಲಾಯಿತು. ಆ ಭೂಮಿ ಕೆಂಪಾಯಿತು. ಸಿಂಧೂ ನದಿಯಲ್ಲಿ ರಕ್ತ ಹರಿಯಿತು. ಅಲ್ಲಿ ಹಿಂದೂ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ […]

ಪಾದಾಚಾರಿ‌ ಮಹಿಳೆಯರಿಗೆ ಕಿರುಕುಳ, ಅಪ್ರಾಪ್ತನ ಬಂಧನ

Friday, January 15th, 2021
ullal Minor

ಮಂಗಳೂರು : ಕಳೆದ 15 ದಿನಗಳಿಂದ ಉಳ್ಳಾಲ ಬಂಡಿಕೊಟ್ಯ, ಗೊಳಿಯಡಿ ಎಂಬಲ್ಲಿ ಪಾದಾಚಾರಿ‌ ಮಹಿಳೆಯರಿಗೆ ಕಿರುಕುಳ ನೀಡುತ್ತಿದ್ದ ಅಪ್ರಾಪ್ತ ವಯಸ್ಸಿನ ಆರೋಪಿಯನ್ನು ಸ್ಥಳೀಯರು ಹಿಡಿದು ಉಳ್ಳಾಲ ಪೊಲೀಸರಿಗೆ ಒಪ್ಪಿಸಿದ ಘಟನೆ ಶುಕ್ರವಾರ ನಡೆದಿದೆ. ಆರೋಪಿಯ ವಿರುದ್ದ ಕಠಿಣ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ಸ್ಥಳೀಯ ಮಹಿಳೆಯರು ಪೊಲೀಸ್ ಠಾಣೆಯಲ್ಲಿ ಧರಣಿ ನಡೆಸಿದರು. ಉಳ್ಳಾಲ ಉಳಿಯಕ್ಕೆ ಸಂಪರ್ಕಿಸುವ ಉಳ್ಳಾಲ ಬಂಡಿಕೊಟ್ಯ, ಗೊಳಿಯಡಿ ರಸ್ತೆಯಾಗಿ ಮಹಿಳೆಯರು ನಡೆದುಕೊಂಡು ಹೋಗುತ್ತಿದ್ದಾಗ ರಸ್ತೆ ಬದಿಯ ಓಣಿಯಲ್ಲಿ ಬೈಕ್ ನಲ್ಲಿ ಬರುವ ಆಗಂತುಕರು ಮಹಿಳೆಯರ ಮೈ ಸವರಿಕಂಡು ಹೋಗುತ್ತಿದ್ದು, ಕಳೆದ […]

ಮೀನುಗಾರಿಕೆಗೆ ತೆರಳಿದ್ದ ಪರ್ಸಿನ್ ಬೋಟ್‌ ಮುಳುಗಡೆ, ಆರು ಮಂದಿ ನಾಪತ್ತೆ

Tuesday, December 1st, 2020
fishing Boat

ಮಂಗಳೂರು : ಮೀನುಗಾರಿಕೆಗೆ ತೆರಳಿದ್ದ ಪರ್ಸಿನ್ ಬೃಹತ್ ಬೋಟ್‌ವೊಂದು ಕಡಲಲ್ಲಿ ಮುಳುಗಡೆಯಾಗಿದ್ದು, ಆರು ಮಂದಿ ನಾಪತ್ತೆಯಾದ ಘಟನೆ ಉಳ್ಳಾಲದ ಪಶ್ಚಿಮ ಭಾಗದಿಂದ ಕೆಲವೇ  ನಾಟಿಕಲ್‌ ಮೈಲಿ ದೂರದಲ್ಲಿ ನಡೆದಿದೆ. ಬೋಳಾರದ ಪ್ರಶಾಂತ ಎಂಬವರ ಮಾಲಕತ್ವದ “ಶ್ರೀರಕ್ಷಾ” ಹೆಸರಿನ ಬೋಟು ಸೋಮವಾರ ನಸುಕಿನಜಾವ ಮೀನುಗಾರಿಕೆಗೆ ತೆರಳಿತ್ತು.‌ ಬೋಟ್‌ನಲ್ಲಿ 25 ಮಂದಿ ಮೀನುಗಾರರು ತೆರಳಿದ್ದರು. ಕಡಲಲ್ಲಿ‌ ಭಾರೀ ಪ್ರಮಾಣದ ಮೀನು ಸಿಕ್ಕಿದ್ದು, ಸಂಜೆ 6:30ರ ಸುಮಾರಿಗೆ ಬಲೆಯನ್ನು ಮೇಲೆ‌‌ ಎಳೆಯುವಾಗ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಬೋಟ್ ನಲ್ಲಿ ಉಳ್ಳಾಲ, ಮಂಗಳೂರು […]

ಒಂಬತ್ತನೇ ಮಹಡಿಯಿಂದ ಬಿದ್ದ ಭದ್ರತಾ ಸಿಬ್ಬಂದಿ ಮೃತ್ಯು

Monday, November 23rd, 2020
mutturaj

ಮಂಗಳೂರು : ಒಂಬತ್ತನೇ ಮಹಡಿಯಿಂದ  ಕಾಲು ಜಾರಿ ಕೆಳಗೆ ಬಿದ್ದ ಭದ್ರತಾ ಸಿಬ್ಬಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ಉಳ್ಳಾಲದಲ್ಲಿ ನಡೆದಿದೆ. ಇಲ್ಲಿನ ಠಾಣಾ ವ್ಯಾಪ್ತಿಯ ನಗರಸಭೆ ಕಚೇರಿ ಬಳಿ ಇರುವ ಇನ್‌ಪಾಲ ಬಹುಮಹಡಿ ಕಟ್ಟಡದಲ್ಲಿ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಚೆಂಬುಗುಡ್ಡೆ ನಿವಾಸಿ ಮುತ್ತುರಾಜ(55) ಎಂದು ಗುರುತಿಸಲಾಗಿದೆ. ಕಟ್ಟಡದ 9ನೆ ಮಹಡಿಗೆ ತೆರಳಿದ್ದ ಅವರು, ಟ್ಯಾಂಕ್ ನಲ್ಲಿ ನೀರು ಪರಿಶೀಲನೆ ಮಾಡುತ್ತಿದ್ದ ಸಂದರ್ಭ ಅಕಸ್ಮಾತ್ ಕಾಲುಜಾರಿ ಕೆಳಗೆ ಬಿದ್ದಿದ್ದಾರೆ. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರರಕಣ ದಾಖಲಾಗಿದೆ.